ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

V Somanna: ಬೆಂಗಳೂರು-ಕುಕ್ಕೆ ಸುಬ್ರಹ್ಮಣ್ಯ ನಡುವೆ ಏಪ್ರಿಲ್ 12ರಿಂದ ಹೊಸ ರೈಲು: ಸಚಿವ ವಿ.ಸೋಮಣ್ಣ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಡಿಕೆ ಹೆಚ್ಚಿದ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, 34 ಜನ ಶಾಸಕರು ಜಯಚಂದ್ರ ನೇತೃತ್ವದಲ್ಲಿ ದೆಹಲಿಗೆ ಬಂದು ನನಗೆ ಮನವಿ ಕೊಟ್ಟಿದ್ದಾರೆ. ಅದನ್ನು ನಮ್ಮ ನಾಗರಿಕ ವಿಮಾನಯಾನ ಇಲಾಖೆ ಸಚಿವ ನಾಯ್ಡು ಅವರಿಗೆ ಸಲ್ಲಿಕೆ ಮಾಡಲಾಗಿದೆ. ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸುವುದಕ್ಕೂ ಮೊದಲೇ ಈ ಪ್ರಕ್ರಿಯೆ ಆಗಿತ್ತು ಎಂದರು.

ಬೆಂಗಳೂರು-ಕುಕ್ಕೆ ಸುಬ್ರಹ್ಮಣ್ಯ ನಡುವೆ ಏಪ್ರಿಲ್ 12ರಿಂದ ಹೊಸ ರೈಲು

ವಿ ಸೋಮಣ್ಣ

ಹರೀಶ್‌ ಕೇರ ಹರೀಶ್‌ ಕೇರ Apr 10, 2025 8:55 AM

ತುಮಕೂರು: ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ (Kukke Subrahmanya) ಇದೇ 12ರಿಂದ ಬೆಂಗಳೂರಿನಿಂದ (Bengaluru) ಹೊಸ ರೈಲು (New train) ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ (central minister V Somanna) ಬುಧವಾರ ಘೋಷಣೆ ಮಾಡಿದರು. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸೇತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೆ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಹಂಚಿಕೊಂಡರು. ಇದೇ 12ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತೆ ಆಗಲಿದೆ ಎಂದು ಅವರು ಹೇಳಿದರು.

23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೆ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ಇದ್ದ 33 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನು ನಾವು ಕೈಗೆತ್ತಿಕೊಂಡಿದ್ದೇವೆ. ಇದೇ 11ರಂದು ಹಾವೇರಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲಿಗೆ ಚಾಲನೆ ಕೊಡುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ಗದಗ, ವಾಡಿ, ಕುಷ್ಠಗಿ, ಯಲಬುರ್ಗಾ ರೈಲು ಸಂಚಾರ ಲೋಕಾರ್ಪಣೆ ಮಾಡುತ್ತೇವೆ. ಅನೇಕ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡುವಂತಹ ಕೆಲಸ ಈಗಾಗಲೇ ಆಗಿದೆ ಎಂದು ಸೋಮಣ್ಣ ಹೇಳಿದರು.

ಬಟವಾಡಿ ಗೇಟ್​ನಲ್ಲಿ ಇವತ್ತು 27 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭ ಮಾಡಲಾಗಿದೆ. ಬಡ್ಡಿಹಳ್ಳಿ ಬಳಿ 43 ಕೋಟಿ ರೂ. ವೆಚ್ಚದಲ್ಲಿ, ಮೈದಾಳದ ಬಳಿ 51 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ಮಾಡಲಾಗುತ್ತಿದೆ. 650 ಕೋಟಿ ರೂ. ವೆಚ್ಚದ 22 ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿ ಪ್ರಾರಂಭ ಮಾಡಲಾಗುತ್ತಿದೆ. 23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೆ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಸೋಮಣ್ಣ ಹೇಳಿದರು.

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಡಿಕೆ ಹೆಚ್ಚಿದ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, 34 ಜನ ಶಾಸಕರು ಜಯಚಂದ್ರ ನೇತೃತ್ವದಲ್ಲಿ ದೆಹಲಿಗೆ ಬಂದು ನನಗೆ ಮನವಿ ಕೊಟ್ಟಿದ್ದಾರೆ. ಅದನ್ನು ನಮ್ಮ ನಾಗರಿಕ ವಿಮಾನಯಾನ ಇಲಾಖೆ ಸಚಿವ ನಾಯ್ಡು ಅವರಿಗೆ ಸಲ್ಲಿಕೆ ಮಾಡಲಾಗಿದೆ. ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸುವುದಕ್ಕೂ ಮೊದಲೇ ಈ ಪ್ರಕ್ರಿಯೆ ಆಗಿತ್ತು ಎಂದರು.

ಇದನ್ನೂ ಓದಿ: Viral Video: ರೀಲ್‌ ಮಾಡಲು ಹಳಿಯ ಮೇಲೆ ಮಲಗಿದ್ದ ಯುವಕನ ಮೇಲೆ ಹಾದುಹೋದ ರೈಲು; ವಿಡಿಯೊ ಇಲ್ಲಿದೆ