ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ್​ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam terror attack: ಪಹಲ್ಗಾಮ್‌ ಉಗ್ರರ ದಾಳಿ ಬಗ್ಗೆ ಮಾಹಿತಿ ಸಿಕ್ಕರೆ ಈ ನಂಬರ್‌ಗೆ ಕರೆ ಮಾಡಿ- NIA ಮನವಿ

NIA on Pahalgam terror attack:26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ದಾಳಿಗೆ ಸಂಬಂಧಿಸಿದ ಮಾಹಿತಿ, ಫೋಟೋ ಅಥವಾ ವಿಡಿಯೊಗಳನ್ನು ಹಂಚಿಕೊಳ್ಳುವಂತೆ NIA ಒಂದು ಪ್ರಕಟಣೆ ಮೂಲಕ ಜನರಲ್ಲಿ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಜನರು ಸಂಪರ್ಕಿಸಲು ಎನ್‌ಐಎ ಫೋನ್ ನಂಬರ್‌ ಅನ್ನು ಸಹ ಬಿಡುಗಡೆ ಮಾಡಿದೆ.

ಪಹಲ್ಗಾಮ್‌ ಉಗ್ರರ ದಾಳಿ ಬಗ್ಗೆ ಮಾಹಿತಿ ಸಿಕ್ಕರೆ ಈ ನಂಬರ್‌ಗೆ ಕರೆ ಮಾಡಿ

Profile Rakshita Karkera May 7, 2025 9:08 PM

ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯ(Pahalgam terror attack) ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬುಧವಾರ ಜನರಿಗೆ ಮನವಿ ಮಾಡಿದೆ. 26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ದಾಳಿಗೆ ಸಂಬಂಧಿಸಿದ ಮಾಹಿತಿ, ಫೋಟೋ ಅಥವಾ ವಿಡಿಯೊಗಳನ್ನು ಹಂಚಿಕೊಳ್ಳುವಂತೆ NIA ಒಂದು ಪ್ರಕಟಣೆ ಮೂಲಕ ಜನರಲ್ಲಿ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಜನರು ಸಂಪರ್ಕಿಸಲು ಎನ್‌ಐಎ ಫೋನ್ ನಂಬರ್‌ ಅನ್ನು ಸಹ ಬಿಡುಗಡೆ ಮಾಡಿದೆ.

ಪ್ರವಾಸಿಗರ ಮೇಲಿನ ಭೀಕರ ದಾಳಿಯ ತನಿಖೆ ನಡೆಸುತ್ತಿರುವ ಪ್ರಮುಖ ಸಂಸ್ಥೆಯಾಗಿರುವ ಎನ್‌ಐಎ, ದಾಳಿಯ ವಿವಿಧ ಅಂಶಗಳನ್ನು ತೋರಿಸುವ ಗಣನೀಯ ಸಂಖ್ಯೆಯ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಈಗಾಗಲೇ ವಶಪಡಿಸಿಕೊಂಡಿದೆ ಮತ್ತು ಅವುಗಳನ್ನು ಪರಿಶೀಲಿಸುತ್ತಿದೆ. ತನಿಖೆಗೆ ಇನ್ನಷ್ಟು ಸಹಾಯವಾಗುವಂತಹ ಪ್ರತಿಯೊಂದು ಸಣ್ಣ-ಪುಟ್ಟ ಅಂಶಗಳು ಮಿಸ್‌ ಆಗದೇ ಇರುವಂತೆ ಎನ್‌ಐಎ ಬಹಳ ಎಚ್ಚರ ವಹಿಸುತ್ತಿದೆ. ಹೀಗಾಗಿ ಈ ದಾಳಿ ಬಗ್ಗೆ ಯಾವುದೇ ಸಣ್ಣ ಮಾಹಿತಿ ಇದ್ದರೂ ಅವುಗಳನ್ನು ಹಂಚಿಕೊಳ್ಳುವಂತೆ ದೇಶದ ನಾಗರಿಕರಲ್ಲಿ ಮನವಿ ಮಾಡಿದೆ.

ಈ ನಂಬರ್‌ಗೆ ಕರೆ ಮಾಡಿ

ಉಗ್ರರ ಸುಳಿವು ಪತ್ತೆ ಮತ್ತು ಅವರ ಕಾರ್ಯಾಚರಣೆಯ ವಿಧಾನದ ಬಗ್ಗೆ ತಿಳಿಯಲು ಸಹಾಯ ಮಾಡುವ ಎಲ್ಲಾ ಮಾಹಿತಿ, ಫೋಟೋಗಳು ಅಥವಾ ವೀಡಿಯೊಗಳನ್ನು ಪರಿಶೀಲಿಸಲು ಸಂಸ್ಥೆಯು ಉತ್ಸುಕವಾಗಿದೆ. ಜನರು ಸಂಪರ್ಕಿಸಲು ಮತ್ತು ಅವರ ವೈಯಕ್ತಿಕ ವಿವರಗಳನ್ನು ಮತ್ತು ದಾಳಿಯ ಅವರು ಮಾಹಿತಿಯನ್ನು ಹಂಚಿಕೊಳ್ಳಲು ಸಂಸ್ಥೆಯು ಫೋನ್ ನಂಬರ್‌ ಸಹ ಹಂಚಿಕೊಂಡಿದೆ. ಈ ದಾಳಿಯ ಬಗ್ಗೆ ಮಾಹಿತಿ ನೀಡಲು ಬಯಸುವ ಜನರು 9654958816 ಮತ್ತು/ಅಥವಾ 011- 24368800 ಸಂಖ್ಯೆಗೆ ಕರೆ ಮಾಡಿ NIA ಅನ್ನು ಸಂಪರ್ಕಿಸಬಹುದು.

ಹಿರಿಯ ಅಧಿಕಾರಿಯೊಬ್ಬರು ಕರೆ ಮಾಡಿದವರನ್ನು ಸಂಪರ್ಕಿಸಿ ಮುಂದಿನ ಪ್ರಕ್ರಿಯೆಯನ್ನು ನಡೆಸುತ್ತಾರೆ. ಗಮನಾರ್ಹವಾಗಿ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ನಂತರ ಹಲವಾರು ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ತನಿಖೆ ಕೈಗೆತ್ತಿಕೊಂಡಿರುವ ಎನ್‌ಐಎ ಅಧಿಕಾರಿಗಳು ಘಟನಾ ಸ್ಥಳದಲ್ಲೇ ಬೀಡು ಬಿಟ್ಟಿದ್ದು, ಸಾಕ್ಷ್ಯಗಳನ್ನು ಕಳೆ ಹಾಕುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: Operation Sindoor: ಪಹಲ್ಗಾಮ್‌ ದಾಳಿಗೆ ಸೇಡು ತೀರಿಸಿಕೊಂಡ ಭಾರತ; ಸಿನಿಮಾ ಮಂದಿ ಏನಂದ್ರು?

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತ್ಯುತ್ತರ ನೀಡಿದೆ. ಈ ಕಾರ್ಯಾಚರಣೆಯನ್ನು ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆ ಜಂಟಿಯಾಗಿ ನಡೆಸಿತು. ಈ ದಾಳಿಗೆ 'ಆಪರೇಷನ್ ಸಿಂದೂರ್' ಎಂದು ಹೆಸರಿಡಲಾಗಿದೆ. ಪಾಕಿಸ್ತಾನದ ಸಿಯಾಲ್‌ಕೋಟ್, ಮುರಿಡ್ಕೆ ಮತ್ತು ಬಹವಾಲ್‌ಪುರದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಧ್ವಂಸಗೊಳಿಸಲಾಗಿದೆ. ಇದರ ಜೊತೆಗೆ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಮುಜಫರಾಬಾದ್, ಕೋಟ್ಲಿ ಮತ್ತು ಭಿಂಬರ್‌ನಲ್ಲಿರುವ ಅಡಗುತಾಣಗಳೂ ಉಡೀಸ್‌ ಆಗಿವೆ.