Nikhil Kumaraswamy: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಹೊಸ ಶಾಸಕರಿಂದ ಜೆಡಿಎಸ್‌ ಕಾರ್ಯಕರ್ತರಿಗೆ ಹಿಂಸೆ; ನಿಖಿಲ್ ಕುಮಾರಸ್ವಾಮಿ ಆರೋಪ

ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Profile Vishwavani News Dec 7, 2024 6:58 PM
ಬೆಂಗಳೂರು: ಚನ್ನಪಟ್ಟಣದಲ್ಲಿ ಉಪ ಚುನಾವಣೆ (Channapatna By Election) ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ.ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ ಪಕ್ಷಗಳ ಕಾರ್ಯಕರ್ತರು, ಮುಖಂಡರಿಗೆ ಕಿರುಕುಳ ನೀಡುವುದು ಅಕ್ಷಮ್ಯ. ಪ್ರಜಾಪ್ರಭುತ್ವದಲ್ಲಿ ಇಂಥ ನಡೆ ಒಳ್ಳೆಯದಲ್ಲ,…— Nikhil Kumar (@Nikhil_Kumar_k) December 7, 2024
ಈ ಕುರಿತು ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ ಪಕ್ಷಗಳ ಕಾರ್ಯಕರ್ತರು, ಮುಖಂಡರಿಗೆ ಕಿರುಕುಳ ನೀಡುವುದು ಅಕ್ಷಮ್ಯ. ಪ್ರಜಾಪ್ರಭುತ್ವದಲ್ಲಿ ಇಂಥ ನಡೆ ಒಳ್ಳೆಯದಲ್ಲ, ಅದನ್ನು ಸಹಿಸುವ ಪ್ರಶ್ನೆಯೂ ಇಲ್ಲ ಎಂದು ತಿಳಿಸಿದ್ದಾರೆ.
ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಕೈಕಟ್ಟಿ ಕೂರುವ ಜಾಯಮಾನ ನಮ್ಮದಲ್ಲ. ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ, ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುವ ಯಾವುದೇ ಇಲಾಖೆಯ ಅಧಿಕಾರಿಗಳು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಈ ಹೊಸ ಶಾಸಕ ಕ್ಷೇತ್ರದ ಕೆಲಸ ಮಾಡಬೇಕು, ಕೊಟ್ಟ ಭರವಸೆಗಳನ್ನು ಮೊದಲು ಈಡೇರಿಸಬೇಕು. ಅದು ಬಿಟ್ಟು ಜೆಡಿಎಸ್ ಕಾರ್ಯಕರ್ತರನ್ನು ಮುಗಿಸುತ್ತೇನೆ, ದಮನ ಮಾಡುತ್ತೇನೆ ಎನ್ನುವುದು ಅಹಂಕಾರ. ನಮ್ಮ ಕಾರ್ಯಕರ್ತರನ್ನು ರಕ್ಷಣೆ ಮಾಡಿಕೊಳ್ಳುವುದು ನಮಗೆ ಗೊತ್ತಿದೆ ಎಂದಿದ್ದಾರೆ.
ಈ ಸುದ್ದಿಯನ್ನೂ ಓದಿ | Pralhad Joshi: ದೇಶದಲ್ಲಿ 85 ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ನಾನು ನ್ಯಾಯದಲ್ಲಿ ನಂಬಿಕೆ ಇರಿಸಿದ್ದೇನೆ. ಚನ್ನಪಟ್ಟಣ ಹಾಗೂ ರಾಜ್ಯದ ಜನತೆಯ ಪರವಾಗಿ ಸದಾ ಇರುತ್ತೇನೆ. ಅವರಿಗಾಗಿ ದುಡಿಯುತ್ತೇನೆ. ಹೆದರಿಸಿ, ಬೆದರಿಸುವ ರಾಜಕೀಯಕ್ಕೆ ಬಗ್ಗಲ್ಲ ಎಂದು ತಿಳಿಸಿರುವ ಅವರು, ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಇಂಥ ಗೊಡ್ಡು ಬೆದರಿಕೆಗಳಿಗೆ ಜಗ್ಗುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ, ಇಡೀ ಪಕ್ಷವಿದೆ. ಒಟ್ಟಾಗಿ ಹೋರಾಟ ಮಾಡೋಣ. ಸೋತಿದ್ದೇವೆಯೇ ಹೊರತು ಸತ್ತಿಲ್ಲ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪೋಸ್ಟ್‌ ಮಾಡಿದ್ದಾರೆ.
Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Rajath Kishan (2)
7:07 AM January 30, 2025

BBK11 Rajath Kishan: ನಂದೂ ಹಳೆ ಕತೆಗಳಿವೆ.. ಆದರೆ ಆ ಹುಡುಗಿಯ ಫೋಟೊ ಬಿಡಬಾರದಿತ್ತು: ರಜತ್