ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

New Universities: ಹೊಸ ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸ್ಪಷ್ಟನೆ

New Universities: ರಾಜ್ಯದ ಏಳು ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಸರಕಾರ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮಾ.14ರಂದು ಸಿಎಂ ವಿಧಾನಸೌಧದಲ್ಲಿ ತಿಳಿಸಿದ್ದರು. ಇದೀಗ ಮತ್ತೊಮ್ಮೆ ಈ ಬಗ್ಗೆ ವಿಧಾನ ಪರಿಷತ್‌ನಲ್ಲಿ ಮತ್ತೊಮ್ಮೆ ಮಾತನಾಡಿದ್ದು, ವಿವಿಗಳನ್ನು ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಹೊಸ ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸ್ಪಷ್ಟನೆ

Profile Prabhakara R Mar 18, 2025 8:15 PM

ಬೆಂಗಳೂರು: ರಾಜ್ಯದ ಏಳು ಹೊಸ ವಿಶ್ವವಿದ್ಯಾಲಯಗಳನ್ನು (new universities) ಮುಚ್ಚುವ ಬಗ್ಗೆ ಸರಕಾರ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಇತ್ತೀಚೆಗೆ ಸ್ಪಷ್ಟಪಡಿಸಿದ್ದರು. ಇದೀಗ ಈ ಬಗ್ಗೆ ಮತ್ತೊಮ್ಮೆ ಮಾತನಾಡಿದ್ದು, ಎಲ್ಲಾ ದುರ್ಬಲ ವರ್ಗದವರನ್ನೂ ನಾನು ಪ್ರೀತಿಸುತ್ತೇನೆ. ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಆದರೆ ವಿವಿಗಳನ್ನು ಮುಚ್ಚುವುದಿಲ್ಲ. ಸಚಿವ ಸಂಪುಟ ಉಪಸಮಿತಿಯ ವರದಿ ಬಂದ ನಂತರ ವಿವಿಗಳನ್ನು ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಮಂಗಳವಾರ ಅವರು ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಏಳು ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಸರಕಾರ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮಾ.14ರಂದು ಸಿಎಂ ವಿಧಾನಸೌಧದಲ್ಲಿ ತಿಳಿಸಿದ್ದರು. ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ. ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಪ್ರಶ್ನಿಸಿದ್ದರು. ಇದೀಗ ಮತ್ತೊಮ್ಮೆ ಸದನದಲ್ಲಿ ಸ್ಪಷ್ಟಪಡಿಸಿದ್ದಾರೆ.

ಕೇಂದ್ರದಿಂದ ತೆರಿಗೆ ಪ್ರಮಾಣ ವಿಪರೀತ ಹೆಚ್ಚಳ

ಕೇಂದ್ರ ಸರ್ಕಾರ ಕಾರ್ಪೋರೇಟ್‌ ತೆರಿಗೆಯನ್ನು 30 ರಿಂದ 20% ಗೆ ಇಳಿಸಿ, ಜನ ಸಾಮಾನ್ಯರ ತೆರಿಗೆ ಪ್ರಮಾಣ ವಿಪರೀತ ಹೆಚ್ಚಿಸಿದೆ. ಯಡಿಯೂರಪ್ಪನವರು 2008 ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಾಲ ಮನ್ನಾ ಮಾಡಲು‘ ನೋಟ್ ಪ್ರಿಂಟ್ ಮಾಡುವ ಮಷಿನ್’ ನಮ್ಮಲ್ಲಿ ಇಲ್ಲ ‘ಎಂದಿರುವುದು ದಾಖಲೆಯಲ್ಲಿ ಇದೆ. ನಾನು ಮುಖ್ಯಮಂತ್ರಿಯಾಗಿರುವಾಗ 50 ಸಾವಿರದವರೆಗಿನ ಸೊಸೈಟಿ ಸಾಲ ಮನ್ನಾ ಮಾಡಿದ್ದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 72 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದರು. ಆದರೆ ನರೇಂದ್ರ ಮೋದಿಯವರು ರೈತರ ಸಾಲ ಮನ್ನಾ ಮಾಡಲಿಲ್ಲ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ.

ಗ್ಯಾರಂಟಿಗಳನ್ನು ವಿರೋಧಿಸಿದ ಬಿಜೆಪಿಯವರು ಮದ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ತಾನಗಳೂ ಸೇರಿದಂತೆ ಹಲವು ರಾಜ್ಯಗಳಲ್ಲಿ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದರು.

ಕಾಂಗ್ರೆಸ್ ಸರ್ಕಾರ ಜಾರಿಮಾಡಿರುವ ಐದು ಗ್ಯಾರಂಟಿಗಳನ್ನು ಬಡವರಿಗೆ ಸಾಮಾಜಿಕ , ಆರ್ಥಿಕವಾಗಿ ಶಕ್ತಿತುಂಬಿದ ಯೋಜನೆಗಳನ್ನು ಪ್ರತಿಪಕ್ಷಗಳು ಒಪ್ಪಿಕೊಳ್ಳಲಿ. ಬಿಜೆಪಿಯವರು ಸುಳ್ಳು ಭಾಷಣ ಮಾಡುವುದರಲ್ಲಿ ನಿಸ್ಸೀಮರು ಎಂದು ಎಲ್ಲರಿಗೂ ತಿಳಿದಿದೆ. ನಾನು ಉತ್ತರ ನೀಡುವಾಗ ಅಡ್ಡಿಪಡಿಸಿದರೆ, ನಾನು ಯಾರಿಗೂ ಹೆದರುವುದಿಲ್ಲ. ನಮ್ಮ ಸರ್ಕಾರದಲ್ಲಿ ಯಾವುದೇ ತಪ್ಪು ಹುಡುಕಲು ಸಾಧ್ಯವಿಲ್ಲದ್ದರಿಂದ ಪ್ರತಿಪಕ್ಷಗಳು ಸುಳ್ಳು ಹೇಳುತ್ತಿದ್ದಾರೆ.

ಗ್ಯಾರಂಟಿ ಯೋಜನೆಗಳು ಶಕ್ತಿ ನೀಡುವುದಿಲ್ಲ ಎಂದು ವಿರೋಧಪಕ್ಷದ ನಾಯಕರು ಹೇಳಿದರು. ಶಕ್ತಿ ಯೋಜನೆಯಡಿ 409 ಕೋಟಿ ಜನ ಉಚಿತವಾಗಿ ಓಡಾದಿದ್ದಾರೆ. ಇದು ಮಹಿಳೆಯರಿಗೆ ಸಾಮಾಜಿಕ ಆರ್ಥಿಕ ಶಕ್ತಿ ನೀಡಿದ ಕಾರ್ಯಕ್ರಮ.1.26 ಕೋಟಿ ಅನ್ನಭಾಗ್ಯ ದಡಿ 170 ರೂ.ಗಳನ್ನು ಡಿಬಿಟಿ ಮಾಡಲಾಗಿದೆ. 4 ಕೋಟಿಗೂ ಹೆಚ್ಚು ಜನ , ಗ್ಯಾರಂಟಿಗಳಿಂದ ಲಾಭ ಪಡೆದಿದ್ದಾರೆ.

ಈ ಸುದ್ದಿಯನ್ನೂ ಓದಿ | ಕಚ್ಚಾ ತೈಲ ಬೆಲೆ ಕಡಿಮೆ ಇದ್ರೂ ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ: ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಜೀವನ ಸುಧಾರಿಸಿರುವ ಉದಾಹರಣೆಗಳಿವೆ. ಗೃಹಲಕ್ಷ್ಮಿಯ ಫಲಾನುಭವಿಯೊಬ್ಬರು , ಈ ಯೋಜನೆಯಿಂದ 10 ರಿಂದ 20 ಸಾವಿರ ಉಳಿಸಿ , ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿ, ಸೊಸೆಗೆ ಬಳೆ ಅಂಗಡಿ ಇಟ್ಟುಕೊಟ್ಟಿದ್ದೇನೆ ಎಂದು ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದರು ಎಂದು ಸಿಎಂ ಸ್ಮರಿಸಿದರು.