ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರೋಹಿತ್‌ ಶರ್ಮಾ ಔಟ್‌! ಚಾಂಪಿಯನ್ಸ್‌ ಟ್ರೋಫಿ ತಂಡದಲ್ಲಿ ಆರು ಮಂದಿ ಭಾರತೀಯರು

Champions Trophy Team: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಟೀಮ್ ಇಂಡಿಯಾ, ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಫೈನಲ್‌ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ 76 ರನ್‌ಗಳ ಬಲಿಷ್ಠ ಇನಿಂಗ್ಸ್ ಆಡಿದರು, ಆದರೆ ರೋಹಿತ್ ಶರ್ಮಾ ಟೂರ್ನಿಯ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅವರ ಬದಲು ಮಿಚೆಲ್‌ ಸ್ಯಾಂಟ್ನರ್‌ಗೆ ಸ್ಥಾನ ನೀಡಲಾಗಿದೆ.

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ತಂಡದಲ್ಲಿ ರೋಹಿತ್‌ ಶರ್ಮಾಗೆ ಸ್ಥಾನವಿಲ್ಲ!

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ತಂಡ ಪ್ರಕಟ.

Profile Ramesh Kote Mar 10, 2025 8:40 PM

ದುಬೈ: ರೋಹಿತ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್‌ನಿಂದಾಗಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯ (Champions Trophy 2025) ಫೈನಲ್‌ನಲ್ಲಿ ಭಾರತ ತಂಡ, ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಮಣಿಸಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ 12 ವರ್ಷಗಳ ನಂತರ ಈ ಐಸಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಭಾರತ ತಂಡದ ಗೆಲುವಿನಲ್ಲಿ ರೋಹಿತ್ ಶರ್ಮಾ (Rohit Sharma) 76 ರನ್ ಗಳಿಸಿ ಮಹತ್ವದ ಪಾತ್ರ ವಹಿಸಿದ್ದರು. ಸೋಮವಾರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ತಂಡವನ್ನು ಪ್ರಕಟಿಸಿದೆ. ಈ ಟೂರ್ನಿಯಲ್ಲಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಆಟಗಾರರನ್ನು ಚಾಂಪಿಯನ್ಸ್‌ ಟ್ರೋಫಿ ( Champions Trophy team of the Tournament) ತಂಡಕ್ಕೆ ಆಯ್ಕೆ ಮಾಡಲಾಗಿದೆ. ಈ ತಂಡದಲ್ಲಿ ಭಾರತದಿಂದ ಅತಿ ಹೆಚ್ಚು ಆಟಗಾರರು ಆಯ್ಕೆಯಾಗಿದ್ದಾರೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಒಂದು ವರ್ಷದೊಳಗೆ ತನ್ನ ಎರಡನೇ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಆದರೆ, ಚಾಂಪಿಯನ್ಸ್ ಟ್ರೋಫಿ ಮುಗಿದ ತಕ್ಷಣ ಫೈನಲ್‌ನಲ್ಲಿ ನಿರ್ಣಾಯಕ ಇನಿಂಗ್ಸ್‌ ಆಡಿದ ನಾಯಕ ರೋಹಿತ್ ಶರ್ಮಾ ಅವರನ್ನು ಐಸಿಸಿ ಕಡೆಗಣಿಸಿತು. ಐಸಿಸಿಯು ಚಾಂಪಿಯನ್ಸ್‌ ಟ್ರೋಫಿ ಟೂರ್ನಿ ಮುಗಿದ ನಂತರ ತನ್ನ ತಂಡವನ್ನು ಘೋಷಿಸಿತು. ಆದರೆ, ಅದರಲ್ಲಿ ರೋಹಿತ್ ಶರ್ಮಾ ಹೆಸರನ್ನು ಕಡೆಗಣಿಸಲಾಗಿದೆ. ರೋಹಿತ್ ಶರ್ಮಾ ಹೊರತುಪಡಿಸಿ ಒಟ್ಟು 6 ಭಾರತೀಯ ಆಟಗಾರರು ಈ ಟೂರ್ನಿಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

IND vs NZ: ನ್ಯೂಜಿಲೆಂಡ್‌ಗೆ ಮಣ್ಣು ಮುಕ್ಕಿಸಿ ಮೂರನೇ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ!

ಭಾರತ ತಂಡದಿಂದ ಆರು ಆಟಗಾರರು ಆಯ್ಕೆ

2025ರ ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ತಂಡದಲ್ಲಿ ಕೇವಲ ಮೂರು ದೇಶಗಳ ಆಟಗಾರರು ಮಾತ್ರ ಸ್ಥಾನ ಪಡೆದಿದ್ದಾರೆ. ಇದರಲ್ಲಿ ಭಾರತದಿಂದ ಗರಿಷ್ಠ 6 ಆಟಗಾರರು ಸೇರ್ಪಡೆಯಾಗಿದ್ದಾರೆ. ಭಾರತವನ್ನು ಹೊರತುಪಡಿಸಿ ಈ ತಂಡದಲ್ಲಿ ಸ್ಥಾನ ಪಡೆದ ಆಟಗಾರರಲ್ಲಿ ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನದ ಆಟಗಾರರು ಕೂಡ ಒಳಗೊಂಡಿದ್ದಾರೆ. ಆಫ್ಘನ್ ತಂಡದಿಂದ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ. ಅಫ್ಘಾನಿಸ್ತಾನದ ಇಬ್ರಾಹಿಂ ಝದ್ರಾನ್ ಮತ್ತು ಅಜ್ಮತ್‌ವುಲ್ಲಾ ಒಮರ್ಜಾಯ್‌ ಅವರು ಈ ತಂಡದಲ್ಲಿದ್ದಾರೆ. ಇದಲ್ಲದೆ, ನ್ಯೂಜಿಲೆಂಡ್‌ ತಂಡದಿಂದ ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮ್ಯಾಟ್ ಹೆನ್ರಿ ಮತ್ತು ಮಿಚೆಲ್ ಸ್ಯಾಂಟ್ನರ್ ಸೇರ್ಪಡೆಯಾಗಿದ್ದಾರೆ.



ಭಾರತ ತಂಡದಿಂದ ಉಳಿಸಿಕೊಂಡ ಆಟಗಾರರಲ್ಲಿ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ಅವರನ್ನು ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ತಂಡಕ್ಕೆ ಆರಿಸಲಾಗಿದೆ. ಇನ್ನು ನ್ಯೂಜಿಲೆಂಡ್‌ನ ಮಿಚೆಲ್ ಸ್ಯಾಂಟ್ನರ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ.

ಚಾಂಪಿಯನ್ಸ್ ಟ್ರೋಫಿ ತಂಡ: ರಚಿನ್‌ ರವೀಂದ್ರ, ಇಬ್ರಾಹಿಂ ಝದ್ರಾನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಅಜಮತ್‌ವುಲ್ಲಾ ಓಮರ್ಜಾಯ್‌, ಮಿಚೆಲ್ ಸ್ಯಾಂಟ್ನರ್ (ನಾಯಕ), ಮೊಹಮ್ಮದ್ ಶಮಿ, ಮ್ಯಾಟ್ ಹೆನ್ರಿ, ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್