ಕೆಎಲ್ ರಾಹುಲ್ ಅಲ್ಲ, ಡೆಲ್ಲಿ ಕ್ಯಾಪಿಟಲ್ಸ್‌ಗೆ ನಾಯಕನನ್ನು ಹೆಸರಿಸಿದ ದಿನೇಶ್ ಕಾರ್ತಿಕ್!
2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸ್ಪಿನ್ನರ್ ಆಲ್‌ರೌಂಡರ್ ಅಕ್ಷರ್ ಪಟೇಲ್‌ಗೆ ನಾಯಕತ್ವ ನೀಡಬಹುದೆಂದು ಭಾರತ ತಂಡದ ಮಾಜಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್ ವಿರುದ್ದದ 5 ಪಂದ್ಯಗಳ ಟಿ20 ಸರಣಿಯ ಭಾರತಕ್ಕೆ ಅಕ್ಷರ್ ಉಪ ನಾಯಕರಾಗಿದ್ದಾರೆ.
ನವದೆಹಲಿ: ಇಂಗ್ಲೆಂಡ್ ವಿರುದ್ದದ 5 ಪಂದ್ಯಗಳ ಟಿ20ಐ ಸರಣಿಯಲ್ಲಿ ನಾಯಕ ಸೂರ್ಯಕುಮಾರ್ ಯಾದವ್‌ಗೆ ಉಪ ನಾಯಕನಾಗಿ ಅಕ್ಷರ್ ಪಟೇಲ್ ಕಾರ್ಯನಿರ್ವಹಿಸಲಿದ್ದಾರೆ. ಇದನ್ನು ಗಮಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸ್ಪಿನ್ ಆಲ್‌ರೌಂಡರ್‌ಗೆ ನಾಯಕತ್ವ ನೀಡುವ ಸಾಧ್ಯತೆ ಇದೆ ಎಂದು ಆರ್‌ಸಿಬಿ ಬ್ಯಾಟಿಂಗ್ ಕೋಚ್ ಭವಿಷ್ಯ ನುಡಿದಿದ್ದಾರೆ. ಅಲ್ಲದೆ ತಮ್ಮ ನಾಯಕತ್ವದ ಕೌಶಲಗಳನ್ನು ಸಾಬೀತುಪಡಿಸಲು ಈ ಟಿ20ಐ ಸರಣಿಯಲ್ಲಿ ಅತ್ಯುತ್ತಮ ವೇದಿಕೆ ಸಿಗಲಿದೆ ಎಂದಿದ್ದಾರೆ.
ಮುಂದಿನ ಆರು ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ನಾಯಕನನ್ನು ಆರಿಸಬಹುದು. ಇದರ ಆಧಾರದ ಮೇಲೆ ಸ್ಪಿನ್ ಆಲ್‌ರೌಂಡರ್ ಅಕ್ಷರ್ ಪಟೇಲ್‌ಗೆ ನಾಯಕತ್ವ ನೀಡಬಹುದು. ಇವರನ್ನು ಮೆಗಾ ಹರಾಜಿಗೂ ಮುನ್ನ 18 ಕೋಟಿ ರೂ. ಗಳಿಗೆ ಡೆಲ್ಲಿ ಫ್ರಾಂಚೈಸಿ ಉಳಿಸಿಕೊಂಡಿತ್ತು.
ಇಂಗ್ಲೆಂಡ್ ವಿರುದ್ಧದ ಮುಂಬರುವ ಟಿ20 ಸರಣಿಯಲ್ಲಿ ಭಾರತ ತಂಡಕ್ಕೆ ಉಪ ನಾಯಕನಾಗಿ ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡುವ ಮೂಲಕ ಹಾರ್ದಿಕ್ ಪಾಂಡ್ಯ ಅವರನ್ನು ಕಡೆಗಣಿಸಲಾಗಿದೆ. ರೋಹಿತ್ ಶರ್ಮಾ ಭಾರತ ಟಿ20 ತಂಡಕ್ಕೆ ನಾಯಕನಾಗಿದ್ದ ವೇಳೆ ಹಾರ್ದಿಕ್ ಪಾಂಡ್ಯ ಉಪ ನಾಯಕರಾಗಿದ್ದರು.
WPL 2025: ಆರ್‌ಸಿಬಿಗೆ ಮೊದಲ ಎದುರಾಳಿ ಗುಜರಾತ್, ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ!
ಕ್ರಿಕ್‌ಬಝ್‌ನಲ್ಲಿ ಮಾತನಾಡಿದ ದಿನೇಶ್ ಕಾರ್ತಿಕ್, "ಅಕ್ಷರ್ ಪಟೇಲ್‌ಗೆ ಆಲ್ ದಿ ಬೆಸ್ಟ್(ಭಾರತ ತಂಡದ ಉಪ ನಾಯಕತ್ವ). ಅವರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಅವರು ಬಹುಶಃ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನಾಯಕನಾಗಬಹುದು. ತಮ್ಮ ನಾಯಕತ್ವದ ಸಾಮರ್ಥ್ಯ ಹಾಗೂ ಗುಣಗಳನ್ನು ಸಾಬೀತುಪಡಿಸಲು ಇದೀಗ ಅಕ್ಷರ್ ಪಟೇಲ್‌ಗೆ ಉತ್ತಮ ಅವಕಾಶ ಸಿಕ್ಕಿದೆ. ಗುಜರಾತ್ ಟೈಟನ್ಸ್ ತಂಡದಲ್ಲಿಯೂ ಅವರು ಇದೇ ಕಾರ್ಯವನ್ನು ನಿರ್ವಹಿಸಿದ್ದರು," ಎಂದು ಹೇಳಿದ್ದಾರೆ.
ಇನ್ನು ಐದು ವರ್ಷಗಳ ಬಳಿಕ ಇದೇ ಮೊದಲ ಬಾರಿ ಕೆಎಲ್ ರಾಹುಲ್ ಅವರು 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಹಿರಿಯ ಬ್ಯಾಟ್ಸ್‌ಮನ್ ಆಗಿ ಆಡಲಿದ್ದಾರೆ. ಕಳೆದ ಆವೃತ್ತಿಯಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡವನ್ನು ಮುನ್ನಡೆಸಿದ್ದ ಕೆಎಲ್ ರಾಹುಲ್ ಅವರನ್ನು ಮೆಗಾ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 14 ಕೋಟಿ ರೂ. ಗಳಿಗೆ ಖರೀದಿಸಿತ್ತು. 2020 ಮತ್ತು 2021ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಹುಲ್ ಮುನ್ನಡೆಸಿದ್ದರು.
MAH vs VID: 44 ಎಸೆತಗಳಲ್ಲಿ ಅಜೇಯ 88 ರನ್ ಸಿಡಿಸಿದ ಕನ್ನಡಿಗ ಕರುಣ್ ನಾಯರ್!
ಪಂಜಾಬ್ ಕಿಂಗ್ಸ್ ಮತ್ತು ಲಖನೌ ಸೂಪರ್ ಜಯಂಟ್ಸ್ ತಂಡಗಳ ಪರ ಕೆಎಲ್ ರಾಹುಲ್ ಓಪನರ್ ಆಗಿ ಆಡಿದ್ದರು. ಭಾರತ ತಂಡದ ಏಕದಿನ ತಂಡದಲ್ಲಿ ಅವರು ಐದನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಾರೆ. ಒಂದು ವೇಳೆ ಅಕ್ಷರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್‌ಗೆ ನಾಯಕನಾದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೂರು ಆವೃತ್ತಿಗಳಲ್ಲಿ ಮುನ್ನಡೆಸಿದ್ದ ಫಾಫ್ ಡು ಪ್ಲೆಸಿಸ್ ಕೂಡ ವಿಶೇಷ ಬ್ಯಾಟ್ಸ್‌ಮನ್ ಆಡಲಿದ್ದಾರೆ. ದಕ್ಷಿಣ ಆಫ್ರಿಕಾ ದಿಗ್ಗಜನನ್ನು ಡೆಲ್ಲಿ ಫ್ರಾಂಚೈಸಿ 2 ಕೋಟಿ ರೂ. ಗಳನ್ನು ನೀಡಿ ಖರೀದಿಸಿತ್ತು.