ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Honey Trap: ಹನಿ ಟ್ರ್ಯಾಪ್ ವಿಚಾರದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಹನಿ ಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ ಎಂದರು. ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

ಹನಿಟ್ರ್ಯಾಪ್ ವಿಚಾರದಲ್ಲಿ ಯಾರನ್ನೂ ರಕ್ಷಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ

ಹರೀಶ್‌ ಕೇರ ಹರೀಶ್‌ ಕೇರ Mar 21, 2025 11:58 AM

ಬೆಂಗಳೂರು: ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಈ ಬಗ್ಗೆ ಅವರು ಸದನದಲ್ಲಿ ಉತ್ತರಿಸಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದು ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದವರನ್ನು ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಹಾಗೂ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಸಂದರ್ಭದಲ್ಲಿ ಸಿಎಂ ಮೇಲಿನಂತೆ ಉತ್ತರಿಸಿದರು.

ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ. ಪ್ರಕರಣದಲ್ಲಿ ಯಾರೇ ಆಗಿದ್ದರೂ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನ: ಪ್ರಸ್ತಾಪಿಸುವುದು ತರವಲ್ಲ. ಹನಿ ಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ ಎಂದರು. ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.



ವಿಧಾನಸಭೆಯಲ್ಲಿ ವಿಪಕ್ಷಗಳ ಹೈಡ್ರಾಮಾ

ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಹಾಗೂ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲು ವಿಧೇಯಕ ವಿರೋಧಿಸಿ ಭಾರೀ ಹೈಡ್ರಾಮಾ ನಡೆಯಿತು. ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು, ಸ್ಪೀಕರ್‌ ಪೀಠವನ್ನು ಸುತ್ತುವರಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಪಕ್ಷ ಸದಸ್ಯರ ಗದ್ದಲದ ನಡುವೆಯೇ ವಿಧೇಯಕಗಳನ್ನು ಮಂಡಿಸಿ ಅಂಗೀಕಾರ ಮಾಡಲಾಯಿತು.

ಇಂದು ಬೆಳಗ್ಗೆ ವಿಧಾನಸಬೆ ಕಲಾಪ ಆರಂಭವಾಗುತ್ತಲೇ ವಿಪಕ್ಷ ಸದಸ್ಯರು ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಭಾರೀ ಗದ್ದಲ, ಗಲಾಟೆ ಆರಂಭಿಸಿದರು. ಈ ಹಿನ್ನೆಲೆಯಲ್ಲಿ ಕಲಾಪವನ್ನು ಸ್ಪೀಕರ್ ಯು.ಟಿ. ಖಾದರ್ 10 ನಿಮಿಷ ಮುಂದೂಡಿದರು. ಇದಕ್ಕೆ ಮುನ್ನ ವಿಧೇಯಕಗಳನ್ನು ಸರಕಾರ ಮಂಡಿಸಿದ್ದು ಅದನ್ನು ಅಂಗೀಕರಿಸಲಾಯಿತು. ಇದಕ್ಕೂ ವಿಪಕ್ಷ ಸದಸ್ಯರು ಅಡ್ಡಿಪಡಿಸಿದರು. ಬಜೆಟ್‌ ಭಾಷಣದ ಪ್ರತಿಗಳನ್ನು ಹರಿದು ಚೂರು ಮಾಡಿ ಗಾಳಿಯಲ್ಲಿ ತೂರಿದರು.

ನಿನ್ನೆ ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಹಕಾರ ಸಚಿವರ ಮೇಲೆ ಹನಿಟ್ರ್ಯಾಪ್ ಆಗಿದೆ. ಜನಪ್ರತಿನಿಧಿಗಳನ್ನು ಬ್ಲ್ಯಾಕ್ ಮೇಲ್ ಮಾಡುವುದು ಕೆಟ್ಟ ಸಂಸ್ಕೃತಿಯಾಗಿದೆ. ಕೆಲ ರಾಜಕೀಯ ಪಕ್ಷದಲ್ಲಿ ಇರುವವರು ತಮ್ಮ ಹಾಗೂ ತಮ್ಮ ಕುಟುಂಬದ ಭವಿಷ್ಯಕ್ಕಾಗಿಯೋ, ಸಿಎಂ ಆಗಬೇಕೆಂಬ ಕಾರಣಕ್ಕೂ ಹೀಗೆಲ್ಲ ಮಾಡುವುದು ಸರಿಯಲ್ಲ ಎಂದರು. ಈ ವೇಳೆ ನಾನು ಹನಿಟ್ರ್ಯಾಪ್ ವಿಚಾರದಲ್ಲಿ ಲಿಖಿತ ದೂರು ಕೊಡುತ್ತೇನೆ. ಅದನ್ನು ತನಿಖೆ ಮಾಡಿ ಎಂಬುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ಇದಲ್ಲದೇ ನಾನೊಬ್ಬನೇ ಅಲ್ಲ, ರಾಜ್ಯ ಮಾತ್ರವಲ್ಲದೇ ರಾಷ್ಟ್ರ ಮಟ್ಟದ 48 ಮಂದಿಯ ಹನಿಟ್ರ್ಯಾಪ್ ಸಿಡಿ, ಪೆನ್ ಡ್ರೈವ್ ಗಳಿದ್ದಾವೆ. ಇದರಲ್ಲಿ ಜಡ್ಜ್ ಗಳದ್ದೂ ಇದೆ. ತನಿಖೆಗೆ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: K.N. Rajanna: 48 ನಾಯಕರ ಹನಿಟ್ರ್ಯಾಪ್ ಸಿಡಿ ಇದೆ: ಸಚಿವ ರಾಜಣ್ಣ ಶಾಕಿಂಗ್‌ ಹೇಳಿಕೆ