IND vs ENG: ಶುಭಮನ್ ಗಿಲ್ ಅಲ್ಲ! ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಲು ಚಿಂತನೆ!
Who will Replace Rohit sharma as India ODI Captain: ಮುಂಬರುವ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ಭಾರತ ಈ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿಲ್ಲವಾದಲ್ಲಿ ರೋಹಿತ್ ಶರ್ಮಾ ಬದಲು ಬೇರೆ ಆಟಗಾರನಿಗೆ ನಾಯಕತ್ವ ನೀಡುವ ಸಾಧ್ಯತೆ ಇದೆ.
![Hardik Pandya](https://cdn-vishwavani-prod.hindverse.com/media/images/Hardik_Pandya_DEKwfOk.max-1280x720.jpg)
![Profile](https://vishwavani.news/static/img/user.png)
ನಾಗ್ಪುರ: ಪಾಕಿಸ್ತಾನ ಆತಿಥ್ಯದ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಆರಂಭಕ್ಕೆ ಇನ್ನು ಕೇವಲ 12 ದಿನಗಳು ಬಾಕಿ ಇವೆ. ಈ ಟೂರ್ನಿಗೂ ಮುನ್ನ ಭಾರತ ತಂಡ, ಪ್ರಸ್ತುತ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕಾದಾಟ ನಡೆಸುತ್ತಿದೆ. ಮೊದಲನೇ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಮ್ ಇಂಡಿಯಾ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದರ ನಡುವೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದು, ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಇವರ ಭವಿಷ್ಯ ನಿರ್ಧಾರವಾಗಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ವೈಫಲ್ಯ ಅನುಭವಿಸಿದರೆ, ರೋಹಿತ್ ಶರ್ಮಾ ತಮ್ಮ ನಾಯಕತ್ವವನ್ನು ಬಿಟ್ಟುಕೊಡಬೇಕಾಗುತ್ತದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾದರೆ, ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಭಾರತ ತಂಡದ ನಾಯಕನಾಗಿ ರೋಹಿತ್ ಶರ್ಮಾ ಸ್ಥಾನವನ್ನು ತುಂಬಲಿದ್ದಾರೆಂದು ವರದಿಯಾಗಿದೆ. ಹೆಡ್ ಕೋಚ್ ಗೌತಮ್ ಗಂಭೀರ್‌ಗೆ ಹಾರ್ದಿಕ್ ಪಾಂಡ್ಯ ಉಪ ನಾಯಕನಾಗಬೇಕೆಂಬ ಒಲವು ಇತ್ತು. ಆದರೆ, ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಅವರು, ಉಪ ನಾಯಕತ್ವಕ್ಕೆ ಶುಭಮನ್ ಗಿಲ್ ಅವರನ್ನು ನೇಮಿಸಿತ್ತು.
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕ್ ಮಾಜಿ ವೇಗಿ
ಸೂರ್ಯಕುಮಾರ್ ಯಾದವ್ ಸ್ಥಾನಕ್ಕೆ ಹಾರ್ದಿಕ್ ಪಾಂಡ್ಯ
ಭಾರತ ಟಿ20ಐ ತಂಡಕ್ಕೆ ನಾಯಕನಾದ ಬಳಿಕ ಸೂರ್ಯಕುಮಾರ್ ಯಾದವ್ ಅವರು ವೈಯಕ್ತಿಕವಾಗಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದಾರೆ. ನಾಯಕನಾದ ಬಳಿಕ ಅವರಿಂದ ಒಂದೇ ಒಂದು ಅರ್ಧಶತಕ ಕೂಡ ಹೊರ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಭಾರತ ಟಿ20ಐ ತಂಡಕ್ಕೂ ಕೂಡ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನ್ನಾಗಿ ನೇಮಿಸಲು ಬಿಸಿಸಿಐ ಒಲವು ಹೊಂದಿದೆ ಎಂದು ವರದಿಯಾಗಿದೆ.
2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಾಯಕ ರೋಹಿತ್ ಶರ್ಮಾಗೆ ಹಾರ್ದಿಕ್ ಪಾಂಡ್ಯ ಉಪ ನಾಯಕನಾಗಿದ್ದರು. 2022 ಮತ್ತು 2023ರಲ್ಲಿ ನಾಯಕ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಹಲವು ಪಂದ್ಯಗಳಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದಾರೆ. ಟಿ20 ವಿಶ್ವಕಪ್ ಟೂರ್ನಿಯ ಬಳಿಕ ರೋಹಿತ್ ಶರ್ಮಾ ಟಿ20ಐ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದಾದ ಬಳಿಕ ಸೂರ್ಯಕುಮಾರ್ ಯಾದವ್‌ಗೆ ನಾಯಕತ್ವ ನೀಡಲಾಗಿತ್ತು.
IND vs ENG: ಇಂಗ್ಲೆಂಡ್ ವಿರುದ್ಧ ಗೆದ್ದು ಏಕದಿನ ಸರಣಿಯಲ್ಲಿ ಶುಭಾರಂಭ ಕಂಡ ಭಾರತ!
ಹಾರ್ದಿಕ್ ಪಾಂಡ್ಯಗೆ ತಂಡದಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಹೆಡ್ ಕೋಚ್ ಗೌತಮ್ ಗಂಭಿರ್ ಚಂತಿಸುತ್ತಿದ್ದಾರೆಂದು ಬಿಸಿಸಿಐ ಮೂಲಗಳು ಹೇಳಿರುವುದನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಫಿಟ್‌ನೆಸ್ ಸಮಸ್ಯೆಯ ಕಾರಣ ಹಾರ್ದಿಕ್ ಪಾಂಡ್ಯ ನಾಯಕತ್ವವನ್ನು ಕಳೆದುಕೊಂಡಿದ್ದರು. ಆದರೆ, ಅವರು ಅದ್ಭುತ ಫಾರ್ಮ್‌ನಲ್ಲಿದ್ದಾರೆ.
2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ವಿಸಿ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆ), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ