ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಸಮುದ್ರದ ಅಲೆಗೆ ಸಿಲುಕಿ ಮುಂಬೈ ಮೂಲದ ವಿದ್ಯಾರ್ಥಿ ಸಾವು, ಮತ್ತೋರ್ವ ನಾಪತ್ತೆ!

ಸಮುದ್ರದ ಅಲೆಗೆ ಸಿಲುಕಿದ ಮುಂಬೈ ಮೂಲದ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಎನ್ಐಟಿಕೆ ಬಳಿಯ ಕಡಲ ತೀರದಲ್ಲಿ ಜರುಗಿದೆ. ಮುಂಬೈನಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಧ್ಯಾನ್ ಬಂಜನ್ (18) ಮೃತ ವಿದ್ಯಾರ್ಥಿ. ಎಸ್ಎಸ್ಎಲ್‌ಸಿ ವಿದ್ಯಾರ್ಥಿ ಹನೀಶ್ ಕುಲಾಲ್ (15) ನಾಪತ್ತೆಯಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಸಮುದ್ರದ ಅಲೆಗೆ ಸಿಲುಕಿ ಮುಂಬೈ ಮೂಲದ ವಿದ್ಯಾರ್ಥಿ ಸಾವು, ಮತ್ತೋರ್ವ ನಾಪತ್ತೆ

Profile Siddalinga Swamy Apr 15, 2025 11:50 PM

ಮಂಗಳೂರು: ಸಮುದ್ರದ ಅಲೆಗೆ ಸಿಲುಕಿದ ಮುಂಬೈ ಮೂಲದ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಎನ್ಐಟಿಕೆ ಬಳಿಯ ಕಡಲ ತೀರದಲ್ಲಿ ಜರುಗಿದೆ. ಮುಂಬೈನಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಧ್ಯಾನ್ ಬಂಜನ್ (18) ಮೃತ ವಿದ್ಯಾರ್ಥಿ. ಎಸ್ಎಸ್ಎಲ್‌ಸಿ ವಿದ್ಯಾರ್ಥಿ ಹನೀಶ್ ಕುಲಾಲ್ (15) ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಸುರತ್ಕಲ್‌ನಲ್ಲಿ ನಡೆದ ಮದುವೆಗೆ ಮುಂಬೈನಿಂದ ಬಂದಿದ್ದ ಹತ್ತು ಮಂದಿಯಿದ್ದ ಕುಟುಂಬ ಆಗಮಿಸಿತ್ತು. ಸುರತ್ಕಲ್ ಸಮೀಪದ ಸೂರಿಂಜೆಯ ಪ್ರಖ್ಯಾತ್ ಎಂಬವರ ಮನೆಗೆ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಮಂಗಳವಾರ ಸಂಜೆ 5.30ರ ವೇಳೆಗೆ ಎನ್ಐಟಿಕೆ ಬೀಚ್ ಬಳಿ ಈಜಾಡುತ್ತಿದ್ದರು. ನೀರಿನಲ್ಲಿ ಆಡುತ್ತಿದ್ದಾಗಲೇ ಧ್ಯಾನ್ ಮತ್ತು ಹನೀಶ್ ಕುಲಾಲ್ ನೀರಿನ ಅಲೆಯಲ್ಲಿ ಸಿಲುಕಿದ್ದು, ಈ ವೇಳೆ ಲೈಫ್ ಗಾರ್ಡ್ ಸಿಬ್ಬಂದಿ ಪ್ರದೀಪ್ ಆಚಾರ್ಯ ಅವರು, ಅಲೆಗಳ ಎಡೆಯಿಂದ ಧ್ಯಾನ್ ನನ್ನು ಎಳೆದು ಮೇಲಕ್ಕೆ ತಂದಿದ್ದಾರೆ. ಆದರೆ ಹನೀಶ್ ಕುಲಾಲ್ ಜೀವರಕ್ಷಕ ಸಿಬ್ಬಂದಿ ಕೈಗೆ ಸಿಗದೆ ನಾಪತ್ತೆಯಾಗಿದ್ದಾರೆ. ಧ್ಯಾನ್‌ನನ್ನು ಕೂಡಲೇ ಸುರತ್ಕಲ್ ಪದ್ಮಾವತಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಧ್ಯಾನ್ ಬಂಜನ್ ಮುಂಬೈನಲ್ಲಿ ನೆಲೆಸಿರುವ ಬೈಂದೂರು ಮೂಲದ ವಿವೇಕಾನಂದ ಬಂಜನ್ ಅವರ ಪುತ್ರನಾಗಿದ್ದು, ಹನೀಶ್ ಕುಲಾಲ್ ಮುಂಬೈನಲ್ಲಿ ನೆಲೆಸಿರುವ ಮಂಗಳೂರು ಮೂಲದ ಉಮೇಶ್ ಕುಲಾಲ್ ಅವರ ಪುತ್ರ ಎಂದು ತಿಳಿದುಬಂದಿದೆ. ಹನೀಶ್ ಪತ್ತೆಗಾಗಿ ಲೈಫ್ ಗಾರ್ಡ್ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ಸುರತ್ಕಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Murder Case: ಅಥಣಿಯಲ್ಲಿ ಅಪಘಾತ ವಿಚಾರಕ್ಕೆ ತಾಯಿ-ಮಗನ ಕತ್ತು ಹಿಸುಕಿ ಕೊಲೆ!

Self Harming: ಪರೀಕ್ಷೆಯ ಭಯದಿಂದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಪರೀಕ್ಷೆಯ (Exam) ಭಯದಿಂದ 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು (Medical Student) ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ (Self harming) ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನಲ್ಲಿ (Bengaluru crime news) ಭಾನುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೌಮ್ಯ ಎಂದು ಗುರುತಿಸಲಾಗಿದೆ. ಮೃತ ಸೌಮ್ಯ ಪರೀಕ್ಷಾ ಸಮಯದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಯಾವುದೇ ಡೆತ್​ ನೋಟ್​ ಬರೆದಿಟ್ಟಿಲ್ಲ.

ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ, ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು. ಸೌಮ್ಯ ತಂದೆ ಗಣೇಶ್ ನಾರಾಯಣ್​ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.

ಈ ಸುದ್ದಿಯನ್ನೂ ಓದಿ | Telangana News: ಘೋರ ದುರಂತ; ಕಾರಿನೊಳಗೆ ಉಸಿರುಗಟ್ಟಿ ಮಕ್ಕಳಿಬ್ಬರು ಸಾವು