ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ರಾಜ್ಯದಲ್ಲಿ ಕೇಂದ್ರ ಸೂಚನೆಯಂತೆ ಹೈ ಅಲರ್ಟ್:‌ ಸಿಎಂ ಸಿದ್ದರಾಮಯ್ಯ; ಎಚ್‌ಎಎಲ್‌ ಸಿಬ್ಬಂದಿಗೆ ರಜೆ ರದ್ದು

ಭಾರತ- ಪಾಕ್‌ ಯುದ್ಧದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಜಲಾಶಯಗಳು, ರೈಲು ನಿಲ್ದಾಣ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಜೊತೆಗೆ ರಾಜ್ಯಾದ್ಯಂತ ಇರುವ ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೈ ಅಲರ್ಟ್, ಎಚ್‌ಎಎಲ್‌ ಸಿಬ್ಬಂದಿಗೆ ರಜೆ ರದ್ದು

ಸಿಎಂ ಸಿದ್ದರಾಮಯ್ಯ

ಹರೀಶ್‌ ಕೇರ ಹರೀಶ್‌ ಕೇರ May 9, 2025 6:55 AM

ಬೆಂಗಳೂರು : ಭಾರತ (Operation Sindoor) ಮತ್ತು ಪಾಕಿಸ್ತಾನದ ನಡುವೆ ಯುದ್ಧದ (india- pak war) ಕಾರ್ಮೋಡ ಕವಿಯುತ್ತಿದ್ದಂತೆ, ಕೇಂದ್ರ ಸರ್ಕಾರ ಅಲರ್ಟ್ ಆಗಿ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ. ಜಲಾಶಯಗಳು, ಅಣೆಕಟ್ಟುಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದೆ. ಹೀಗಾಗಿ ಕೇಂದ್ರ ಸರ್ಕಾರದ ಸೂಚನೆಯಂತೆ ಹೈ ಅಲರ್ಟ್‌ (High alert) ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯತಿಳಿಸಿದರು.

ಮಂಡ್ಯ ಜಿಲ್ಲಾ ಪ್ರವಾಸದ ವೇಳೆ ಬೆಂಗಳೂರಿಂದ ತಾಲೂಕಿನ ಗೆಜ್ಜೆಲಗೆರೆ ಗ್ರಾಮದ ಸಮೀಪದ ಹೆಲಿಪ್ಯಾಡ್ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಭಾರತೀಯ ಸೇನೆ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸುವ ಮೂಲಕ ಭಯೋತ್ಪಾದಕರ ಅಡಗು ತಾಣಗಳನ್ನು ಧ್ವಂಸಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಜಲಾಶಯಗಳು, ರೈಲು ನಿಲ್ದಾಣ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಜೊತೆಗೆ ರಾಜ್ಯಾದ್ಯಂತ ಇರುವ ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲಾಗುತ್ತಿದೆ. ಮೈಸೂರಿನ ನ್ಯಾಯಾಲಯದ ಮೊರೆ ಹೋಗಿದ್ದಾರೆ. ರಾಜ್ಯದಲ್ಲಿ ಎಷ್ಟು ಜನರಿದ್ದಾರೆ ಎನ್ನುವ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ನಮ್ಮ ದೇಶದ ಸೈನಿಕರ ಕ್ಷೇಮ ಮತ್ತು ಮುಂದೆ ನಡೆಯುವ ಯುದ್ಧದಲ್ಲಿ ಭಾರತೀಯ ಸೈನಿಕರಿಗೆ ಯಾವುದೇ ಪ್ರಾಣಾಪಾಯ ಆಗದೆ ಗೆಲುವು ಸಿಗಲಿ ಎಂದು ರಾಜ್ಯ ಸರ್ಕಾರದಿಂದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಸಂಕಲ್ಪದೊಂದಿಗೆ ಪೂಜೆ ನಡೆಸಲು ಆದೇಶ ಮಾಡಲಾಗಿದೆ ಎಂದರು.

ಎಚ್‌ಎಎಲ್‌ ಸಿಬ್ಬಂದಿಗೆ ರಜೆ ರದ್ದು, ಹೈ ಅಲರ್ಟ್‌

ಬೆಂಗಳೂರಿನಲ್ಲಿರುವ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಸಂಸ್ಥೆಯಲ್ಲಿ (HAL) ಹೈ ಅಲರ್ಟ್ ಘೋಷಿಸಲಾಗಿದೆ. ರಕ್ಷಣಾ ಸಾಮಗ್ರಿಗಳನ್ನು ಉತ್ಪಾದಿಸುವ ಹಾಗೂ ಅಭಿವೃದ್ಧಿಪಡಿಸುವ ಈ ಘಟಕದಲ್ಲಿ, ಪಾಕಿಸ್ತಾನ ದಾಳಿಯಿಂದ ಉದ್ವಿಗ್ನ ಸ್ಥಿತಿ ಹಿನ್ನೆಲೆಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಓವರ್ ಟೈಮ್ ಕೆಲಸಕ್ಕೆ ಸಿದ್ಧವಾಗಿರುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದ್ದು, HAL ನ ಎಲ್ಲಾ ಸಿಬ್ಬಂದಿಯ ರಜೆಯನ್ನು ರದ್ದುಗೊಳಿಸಿ ಆದೇಶಿಸಲಾಗಿದೆ. ಫೈಟರ್ ಫ್ಲೈಟ್ ಗಳ ನಿರ್ವಹಣೆ ಹಿನ್ನಲೆ ಕಡ್ಡಾಯವಾಗಿ ಹಾಜರಿರುವಂತೆ ಎಲ್ಲಾ ತಂತ್ರಜ್ಞರಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Operation Sindoor: ಪಾಕಿಸ್ತಾನದ ಎಫ್‌- 16 ಯುದ್ಧವಿಮಾನ, ಕ್ಷಿಪಣಿ ಹೊಡೆದುರುಳಿಸಿದ ಭಾರತ