ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ರಾಜ್ಯದಲ್ಲಿ ಅಲರ್ಟ್‌, ಕೆಆರ್‌ಎಸ್‌, ಲಿಂಗನಮಕ್ಕಿ ಸೇರಿ ಎಲ್ಲ ಅಣೆಕಟ್ಟುಗಳಿಗೆ ಬಿಗಿ ಭದ್ರತೆ

Operation Sindoor: ಕೆಆರ್‌ಎಸ್‌, ಲಿಂಗನಮಕ್ಕಿ, ತುಂಗಭದ್ರಾ ಅಣೆಕಟ್ಟು ಸೇರಿದಂತೆ ರಾಜ್ಯದ ಒಟ್ಟು 17 ಜಲಾಶಯಗಳಿಗೆ ಬಿಗಿ ಭದ್ರತೆಯ ಸೂಚನೆ ನೀಡಲಾಗಿದೆ. ತಕ್ಷಣವೇ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಆಧುನಿಕ ಭದ್ರತಾ ಸಾಧನಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಜಲಾಶಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕಾವಲು ವ್ಯವಸ್ಥೆ ಜಾರಿಗೊಳಿಸಲು ಸೂಚನೆ ನೀಡಿದೆ.

ರಾಜ್ಯ ಅಲರ್ಟ್‌, ಕೆಆರ್‌ಎಸ್‌ ಸೇರಿ ಎಲ್ಲ ಅಣೆಕಟ್ಟುಗಳಿಗೆ ಬಿಗಿ ಭದ್ರತೆ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ May 8, 2025 8:57 AM

ಬೆಂಗಳೂರು: ಪಾಕಿಸ್ತಾನದ ಒಳಗೆ ನುಗ್ಗಿ ಹೊಡೆದಿರುವ ಭಾರತದ ʼಆಪರೇಷನ್‌ ಸಿಂದೂರ್‌ʼ‌ ಪರಿಣಾಮ (Operation Sindoor) ಪಾಕ್‌ ಹಾಗೂ ಭಾರತದೊಳಗೂ ಬಿಗು ವಾತಾವರಣ ಸೃಷ್ಟಿಯಾಗಿದೆ. ಇಂಡಿಯಾ-ಪಾಕ್‌ (India- Pak war) ನಡುವೆ ಕದನದ ವಾತಾವರಣ ಸೃಷ್ಟಿಯಾಗಿದೆ. ಇದೀಗ ರಾಷ್ಟ್ರದ ಪ್ರಸ್ತುತ ಭದ್ರತಾ ಸನ್ನಿವೇಶ ಮತ್ತು ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕರ್ನಾಟಕ (Karnataka) ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಬಿಗಿ ಭದ್ರತೆ (High alert) ಒದಗಿಸಲು ತುರ್ತು ಆದೇಶ ಹೊರಡಿಸಿದೆ. ರಾಜ್ಯದ ಜಲಾಶಯಗಳ ಸುರಕ್ಷತೆಗಾಗಿ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರವು ಈ ಆದೇಶದಲ್ಲಿ, ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ ಎಲ್ಲಾ ಅಣೆಕಟ್ಟುಗಳಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದೆ. ತಮ್ಮ ನಿಗಮ ಮತ್ತು ವಲಯ ವ್ಯಾಪ್ತಿಯಲ್ಲಿ ಬರುವ ಜಲಾಶಯಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲು ಎಲ್ಲಾ ಯೋಜನಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ರಾಜ್ಯದ ಒಟ್ಟು 17 ಜಲಾಶಯಗಳಿಗೆ ಈ ಆದೇಶ ಹೊರಡಿಸಲಾಗಿದ್ದು ಕೆಆರ್‌ಎಸ್‌, ಲಿಂಗನಮಕ್ಕಿ, ತುಂಗಭದ್ರಾ ಅಣೆಕಟ್ಟು ಸೇರಿದಂತೆ ಹಲವು ಅಣೆಕಟ್ಟುಗಳಿಗೆ ಸೂಚನೆ ನೀಡಲಾಗಿದೆ.

ಆದೇಶದ ಪ್ರಕಾರ, ರಾಜ್ಯದ ಎಲ್ಲಾ ಅಣೆಕಟ್ಟುಗಳಲ್ಲಿ ತಕ್ಷಣವೇ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಇದರ ಜೊತೆಗೆ, ಆಧುನಿಕ ಭದ್ರತಾ ಸಾಧನಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಜಲಾಶಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕಾವಲು ವ್ಯವಸ್ಥೆಯನ್ನು ಜಾರಿಗೊಳಿಸಬೇಕೆಂದು ಸೂಚನೆ ನೀಡಿದೆ. ಒಂದು ವೇಳೆ ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪ ಅಥವಾ ಚ್ಯುತಿ ಕಂಡುಬಂದರೆ, ಸಂಬಂಧಪಟ್ಟ ಯೋಜನಾಧಿಕಾರಿ ಅಥವಾ ಅಣೆಕಟ್ಟು ಅಧಿಕಾರಿಗಳೇ ನೇರವಾಗಿ ಹೊಣೆಗಾರರಾಗಿರುತ್ತಾರೆ ಎಂದು ಸರ್ಕಾರವು ಸ್ಪಷ್ಟ ಸೂಚನೆ ನೀಡಿದೆ. ಈ ಕುರಿತು ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶವಿರುವುದಿಲ್ಲ ಎಂದು ಆದೇಶದಲ್ಲಿ ಒತ್ತಿಹೇಳಲಾಗಿದೆ.

ಕರಾವಳಿ ಕಾವಲು ಪಡೆಯಿಂದ ಕಟ್ಟೆಚ್ಚರ

ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ದಾಳಿ ನಡೆಸಿರುವ ಹಿನ್ನೆಲೆ, ರಾಜ್ಯದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅರಬ್ಬೀ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿರುವ ಕರಾವಳಿ ಕಾವಲು ಪಡೆ ಪೊಲೀಸರು. ಮಂಗಳೂರಿನ ಬಂದರು ತೀರದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್, ಮೀನುಗಾರರ ತಪಾಸಣೆ, ದಾಖಲೆಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಮೀನುಗಾರರ ವಿಚಾರಣೆಯನ್ನು ಕೂಡ ಕರಾವಳಿ ನಡೆಸುತ್ತಿರುವ ಪೊಲೀಸರು ಅನುಮಾನಾಸ್ಪದ ಬೋಟ್‌ಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

ರಾಜ್ಯದ ದೇಗುಲಗಳಲ್ಲಿ ವಿಶೇಷ ಪೂಜೆ

ಪೆಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿದ ಭಾರತದ ಪರ ಭಾರತೀಯರು ಜೈಘೋಷ ಮೊಳಗಿಸಿದ್ದಾರೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕ್ ಉಗ್ರರ ನೆಲೆಗಳು ಉಡೀಸ್ ಆಗ್ತಿದ್ದಂತೆ ದೇಶಾದ್ಯಂತ ವಿಜಯೋತ್ಸವ ಆಚರಿಸಲಾಗಿದೆ. ಇದರ ಬೆನ್ನಲ್ಲೇ ರಾಜ್ಯದ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ಆದೇಶ ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಅಧೀನದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸುವಂತೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿಯಿಂದ ಆದೇಶ ನೀಡಿದ್ದಾರೆ. ಭಾರತೀಯ ಸೇನೆ ಹಾಗೂ ಯೋಧರಿಗೆ ಒಳಿತಾಗಲಿ ಎಂದು ವಿಶೇಷ ಪೂಜೆಗೆ ಆದೇಶ ನೀಡಲಾಗಿದೆ.

ಇದನ್ನೂ ಓದಿ: Operation sindoor: ತನ್ನ ವಾಯುಪ್ರದೇಶ ಪೂರ್ತಿ ಮುಚ್ಚಿದ ಪಾಕ್‌, ಮರುದಾಳಿಗೆ ಸಿದ್ಧತೆ?