CM Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ಕುರಿತು ಇಂದು ಹೈಕೋರ್ಟ್ ತೀರ್ಪು
ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರ ಮಣೀಂದ್ರ್ ಸಿಂಗ್ ಅವರು ವಾದ ಮಂಡಿಸಿದ್ದರು. ಕಳೆದ ವಿಚಾರಣೆಯಲ್ಲಿ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು.

ಸಿಎಂ ಸಿದ್ದರಾಮಯ್ಯ

ಧಾರವಾಡ : ಮುಡಾದಲ್ಲಿ ನಡೆದ ಬಹುಕೋಟಿ ಅಕ್ರಮ (Muda case, Muda scam) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಸಿಬಿಐ ತನಿಖೆಗೆ (CBI enquiry) ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ (Karnataka High court), ಇಂದು ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ (Snehamayi Krishna) ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, ಇಂದು ಬೆಳಗ್ಗೆ 10.30ಕ್ಕೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಲಿದೆ.
ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ಇನ್ನು ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರ ಮಣೀಂದ್ರ್ ಸಿಂಗ್ ಅವರು ವಾದ ಮಂಡಿಸಿದ್ದರು. ಕಳೆದ ವಿಚಾರಣೆಯಲ್ಲಿ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು ಹಾಗಾಗಿ ಇಂದು ಧಾರವಾಡ ಪೀಠ ಆದೇಶ ಪ್ರಕಟಿಸಲಿದ್ದು, ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಈ ನಡುವೆ ಪ್ರಕರಣದ ಕುರಿತ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ ನೀಡಲಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡುಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮುಡಾ ಆಯುಕ್ತರು, ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ತನಿಖೆ ವೇಳೆ ಕಂಡು ಬಂದಿದೆ. ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎನ್ನಲಾಗುವುದು ಎಂದು ಮೂಲಗಳು ತಿಳಿಸಿವೆ. ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ. ಮುಡಾ ಹಗರಣ ಸಂಬಂಧ ಮತ್ತೊಂದೆಡೆ ಜಾರಿ ನಿರ್ದೇಶನಾಲಯ ತನಿಖೆಯೂ ಪ್ರಗತಿಯಲ್ಲಿದೆ. ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ನಡೆದಿದ್ದು, ಇಂದು ತೀರ್ಪು ಬರಲಿದೆ.
ಇದನ್ನೂ ಓದಿ: Benami Property: ಸಿಎಂ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಗಳಿಕೆ ಆರೋಪ; ಲೋಕಾಯುಕ್ತಕ್ಕೆ ದೂರು