ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bus Accident: ಚಿಕ್ಕಮಗಳೂರಲ್ಲಿ ಭಾರಿ ಮಳೆ; ಸಾರಿಗೆ ಬಸ್ ಪ್ರಪಾತಕ್ಕೆ ಉರುಳಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Bus Accident: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ಅಪಘಾತ ನಡೆದಿದೆ. ಭಾರಿ ಮಳೆಯಿಂದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

ಸಾರಿಗೆ ಬಸ್ ಪ್ರಪಾತಕ್ಕೆ ಉರುಳಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Profile Prabhakara R Apr 9, 2025 10:18 PM

ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಮಲೆನಾಡು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆ ಮಳೆ ಅಬ್ಬರಿಸುತ್ತಿದೆ. ಈ ನಡುವೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟದಿಂದ ಅವಾಂತರ ಸೃಷ್ಟಿಯಾಗಿದ್ದು, ಭಾರಿ ಮಳೆಯಿಂದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ಅಪಘಾತ (Bus Accident) ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್‌ ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು. ಅಪಘಾತದಲ್ಲಿ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ತಕ್ಷಣ ಗಾಯಾಳುಗಳನ್ನು ಕೊಪ್ಪ ಮತ್ತು ಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನೂ ಓದಿ | Chkkaballapur Crime: ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು, ಮೃತದೇಹ ಪತ್ತೆ

ಪೊಲೀಸನಿಂದ ಬರ್ಬರ ಕೃತ್ಯ, ಬಾಲಕಿ ಮೇಲೆ ಅತ್ಯಾಚಾರ, ಅಬಾರ್ಷನ್‌

pocso case police

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಬರ್ಬರ ಕೃತ್ಯ ಬೆಳಕಿಗೆ ಬಂದಿದೆ. ರಕ್ಷಿಸಬೇಕಾದ ಆರಕ್ಷಕನೇ ಇದರಲ್ಲಿ ಅಮಾನುಷವಾಗಿ ವರ್ತಿಸಿದ್ದಾನೆ. ಅಪ್ರಾಪ್ತ ಬಾಲಕಿ ಮೇಲೆ (POCSO Case) ಪೊಲೀಸ್ ಕಾನ್ಸ್ ಟೇಬಲ್ (Police Constable) ಅತ್ಯಾಚಾರ (Physical Abuse) ಎಸಗಿ, ಆಕೆ ಗರ್ಭಿಣಿಯಾಗುತ್ತಿದ್ದಂತೆ ಟ್ಯಾಬ್ಲೆಟ್ ಕೊಟ್ಟು ಅಬಾರ್ಷನ್ (Abortion) ಮಾಡಿಸಿರುವ ಘಟನೆ ನಡೆದಿದೆ. ಇದೀಗ ಆತನ ಮೇಲೆ ದೂರು ದಾಖಲಾಗಿದೆ.

ಯಾದಗಿರಿ ಜಿಲ್ಲೆಯ ಸೈದಾಪುರ ಠಾಣೆಯ ಕಾನ್ಸ್‌ಟೇಬಲ್ ಬಲರಾಮನ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದೆ. ಈತ ಪ್ರೀತಿಯ ನಾಟಕವಾಡಿ 16 ವರ್ಷದ ಅಪ್ರಾಪ್ತೆಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ್ದ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಟ್ಯಾಬ್ಲೆಟ್ ಕೊಟ್ಟು ಅಬಾರ್ಷನ್ ಮಾಡಿಸಿದ್ದ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ.

18 ವರ್ಷ ತುಂಬುತ್ತಿದ್ದಂತೆ 2024ರಲ್ಲಿ ಈಕೆಯನ್ನು ರಿಜಿಸ್ಟರ್ ಮ್ಯಾರೇಜ್ ಆಗಿದ್ದ. ಆದರೆ ಆಕೆಯನ್ನು ಮನೆಗೆ ಸೇರಿಸಿಕೊಳ್ಳಲು ಕಾನ್ಸ್ ಟೇಬಲ್ ಕುಟುಂಬದವರು ನಿರಾಕರಿಸಿದ್ದಾರೆ. ಮನನೊಂದ ಬಾಲಕಿಯ ಕುಟುಂಬದವರು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಾನ್ಸ್ ಟೇಬಲ್ ಬಲರಾಮನ ವಿರುದ್ಧ ದೂರು ನೀಡಿದ್ದಾರೆ.