Pak-Bangla : ಪಾಕಿಸ್ತಾನದ ISI ಅಧಿಕಾರಿಗಳು ಬಾಂಗ್ಲಾಗೆ ಭೇಟಿ ! ಸುರಕ್ಷತೆ ಬಗ್ಗೆ ಭಾರತ ಹೇಳಿದ್ದೇನು?
ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ತನ್ನ ನಾಲ್ವರು ಉನ್ನತ ಅಧಕಾರಿಗಳನ್ನ ರಹಸ್ಯವಾಗಿ ಢಾಕಾಕ್ಕೆ ಕಳುಹಿಸಿದೆ ಎಂದು ತಿಳಿದು ಬಂದಿದೆ. ಐಎಸ್‌ಐನ ಡೈರೆಕ್ಟರ್ ಜನರಲ್ ಆಫ್ ಅನಾಲಿಸಿಸ್ ಮೇಜರ್ ಜನರಲ್ ಶಾಹಿದ್ ಅಮೀರ್ ಅಫ್ಸರ್ ಮತ್ತು ಇತರ ಹಿರಿಯ ಅಧಿಕಾರಿಗಳು ಬಾಂಗ್ಲಾದೇಶಕ್ಕೆ ತೆರಳಿದ್ದಾರೆ.

Pak- Bangla

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ ನಂತರ ಭಾರತ ಹಾಗೂ ಬಾಂಗ್ಲಾದೇಶದ ನಡುವಿನ ಸಂಬಂಧ ಹಳಸಿತ್ತು. ನಂತರ ಬಾಂಗ್ಲಾ ಪಾಕಿಸ್ತಾನಕ್ಕೆ ಹತ್ತಿರವಾಗತೊಡಗಿತ್ತು. ಇದೀಗ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ತನ್ನ ನಾಲ್ವರು ಉನ್ನತ ಅಧಕಾರಿಗಳನ್ನ ರಹಸ್ಯವಾಗಿ ಢಾಕಾಕ್ಕೆ ಕಳುಹಿಸಿದೆ ಎಂದು ತಿಳಿದು ಬಂದಿದೆ. ಐಎಸ್‌ಐನ ಡೈರೆಕ್ಟರ್ ಜನರಲ್ ಆಫ್ ಅನಾಲಿಸಿಸ್ ಮೇಜರ್ ಜನರಲ್ ಶಾಹಿದ್ ಅಮೀರ್ ಅಫ್ಸರ್ ಮತ್ತು ಇತರ ಹಿರಿಯ ಅಧಿಕಾರಿಗಳು ಬಾಂಗ್ಲಾದೇಶಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಈ ಹಿಂದೆ ಬಾಂಗ್ಲಾದೇಶದ ಸೇನಾ ನಿಯೋಗವು ರಾವಲ್ಪಿಂಡಿಗೆ ಭೇಟಿ ನೀಡಿ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರನ್ನು ಭೇಟಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. (Pak-Bangla)
ಈ ಭೇಟಿಯಲ್ಲಿ ಉಭಯ ರಾಷ್ಟ್ರಗಳ ನಡುವೆ ಗುಪ್ತಚರ ಮಾಹಿತಿಯನ್ನು ಹಂಚಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ISI ತಂಡವು ಬಾಂಗ್ಲಾದೇಶದ ಹಲವಾರು ಸೇನಾ ಸಂಸ್ಥೆಗಳಿಗೆ ಭೇಟಿ ನೀಡುತ್ತದೆ.ಮತ್ತು ಮಿಲಿಟರಿ ಸಾಮರ್ಥ್ಯ ಮತ್ತು ಸನ್ನದ್ಧತೆಯ ಬಗ್ಗೆ ಚರ್ಚೆ ನಡೆಯಬಹುದು ಎಂದು ಊಹಿಸಲಾಗಿದೆ.
ಈ ಮೊದಲು ಶೇಖ್ ಹಸೀನಾ ಪ್ರಧಾನಿಯಾಗಿದ್ದಾಗ, ಐಎಸ್‌ಐ ಅನ್ನು ಸಂಪೂರ್ಣವಾಗಿ ನಿಷೇಧಿಸಿದ್ದರು. ಬಾಂಗ್ಲಾದೇಶದಲ್ಲಿ ರಾಜಕೀಯ ಹಸ್ತಕ್ಷೇಪ ಮತ್ತು ಉಗ್ರಗಾಮಿ ಚಟುವಟಿಕೆಗಳಿಗೆ ಬೆಂಬಲ ಸೂಚಿಸುವುದನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ, ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಪಾಕಿಸ್ತಾನದೊಂದಿಗೆ ಮಿಲಿಟರಿ ಸಂಬಂಧವನ್ನು ಪುನರ್‌ಸ್ಥಾಪಿಸಿದೆ.
ಈ ಸುದ್ದಿಯನ್ನೂ ಓದಿ : Imran Khan: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 14 ವರ್ಷ ಜೈಲು ಶಿಕ್ಷೆ
ಈ ನಡುವೆ ಭಾರತ ಈ ಎಲ್ಲಾ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸಿ ಕಟ್ಟೆಚ್ಚರ ತೆಗೆದುಕೊಳ್ಳುತ್ತಿದೆ. ಈ ಬಗ್ಗೆ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ನೆರೆಹೊರೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮೇಲೆ ಸೂಕ್ಷ್ಮವಾಗಿ ಗಮನದಲ್ಲಿದೆ. ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುವ ಎಲ್ಲಾ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿದ್ದೇವೆ ಮತ್ತು ಸರ್ಕಾರವು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.