#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Champions Trophy: ಭಾರತ ತಂಡವನ್ನು ಸೋಲಿಸುವುದು ಪಾಕಿಸ್ತಾನಕ್ಕೆ ದೊಡ್ಡ ಸವಾಲು ಎಂದ ಶೆಹಬಾಝ್‌ ಶರಿಫ್‌!

Shehbaz Sharif on IND VS PAK Clash: ಮುಂಬರುವ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡವನ್ನು ಎದುರಿಸುವುದು ಪಾಕಿಸ್ತಾನ ತಂಡಕ್ಕೆ ದೊಡ್ಡ ಸವಲಾಗಿದೆ ಎಂದು ಪಾಕ್ ಪ್ರಧಾನಿ ಶಹಬಾಝ್‌ ಶರಿಫ್‌ ತಿಳಿಸಿದ್ದಾರೆ. ಫೆಬ್ರವರಿ 23 ರಂದು ದುಬೈ ಇಂಟರ್‌ ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಟ ನಡೆಸಲಿವೆ.

ಭಾರತದ ಎದುರು ಪಾಕಿಸ್ತಾನಕ್ಕೆ ದೊಡ್ಡ ಸವಾಲು ಎದುರಾಗಲಿದೆ: ಪಾಕ್‌ ಪಿಎಂ

Rohit Sharma-Babar Azam

Profile Ramesh Kote Feb 8, 2025 5:45 PM

ನವದೆಹಲಿ: ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (ICC Champions Trophy) ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿಯಾದ ಭಾರತ ತಂಡವನ್ನು ಸೋಲಿಸುವುದು ಪಾಕಿಸ್ತಾನ ತಂಡಕ್ಕೆ ನೈಜ ಸವಾಲು ಎದುರಾಗಲಿದೆ ಎಂದು ಪಾಕ್ ಪ್ರಧಾನಿ ಶಹಬಾಜ್‌ ಶರಿಫ್‌ (Shehbaz Sharif) ತಿಳಿಸಿದ್ದಾರೆ. ಪಾಕಿಸ್ತಾನ ಆತಿಥ್ಯದಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಹೈಬ್ರಿಡ್‌ ಮಾದರಿಯಲ್ಲಿ ನಡೆಯಲಿದೆ. ಫೆಬ್ರವರಿ 19 ರಂದು ಟೂರ್ನಿ ಆರಂಭವಾಗಲಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಫೆಬ್ರವರಿ 23 ರಂದು ದುಬೈ ಇಂಟರ್‌ನ್ಯಾಷನಲ್‌ ಸ್ಟೇಡಿಯಂನಲ್ಲಿ ನಡೆಯಲಿದೆ.

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯದ ಕುರಿತು ಮಾತನಾಡಿದ ಪಾಕ್ ಪ್ರಧಾನಿ ಶಹಬಾಝ್‌ ಶರಿಪ್‌, ಈ ಮಹತ್ವದ ಟೂರ್ನಿಯಲ್ಲಿ ಭಾರತ ತಂಡವನ್ಧು ಮಣಿಸಲು ಪಾಕಿಸ್ತಾನದ ಆಟಗಾರರಿಗೆ ಶುಭ ಹಾರೈಸಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕ್‌ ಮಾಜಿ ವೇಗಿ

ಭಾರತ ತಂಡವನ್ನು ಮಣಿಸುವುದೇ ದೊಡ್ಡ ಸವಾಲು: ಶರಿಫ್‌

ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಪಾಕ್ ಪ್ರಧಾನಿ, "ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಆಯ್ಕೆಯಾಗಿರುವ ಪಾಕಿಸ್ತಾನ ತಂಡವು ಸಾಕಷ್ಟು ಬಲಿಷ್ಠವಾಗಿದೆ. ಅಲ್ಲದೆ ಈ ಮಹತ್ವದ ಟೂರ್ನಿಯಲ್ಲಿ ನಮ್ಮ ತಂಡದ ಸಾಧನೆ ಉತ್ತಮವಾಗಿದೆ. ಆದರೆ ನಮ್ಮ ತಂಡಕ್ಕೆ ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದಷ್ಟೇ ಅಲ್ಲ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಗೆಲುವು ಸಾಧಿಸುವುದು ಕೂಡ ದೊಡ್ಡ ಸವಾಲಾಗಿದೆ. ದುಬೈನಲ್ಲಿ ಭಾರತ ತಂಡವನ್ನು ಎದುರಿಸಲು ಹೊರಟಿರುವ ಪಾಕ್ ಆಟಗಾರರಿಗೆ ಇಡೀ ದೇಶದ ಜನತೆಯ ಬೆಂಬಲವಿದೆ," ಎಂದು ತಿಳಿಸಿದ್ದಾರೆ.

ಐಸಿಸಿ ಟೂರ್ನಿ ಆಯೋಜನೆ ಹೆಮ್ಮೆಯ ಸಂಗತಿ

29 ವರ್ಷಗಳ ನಂತರ ಐಸಿಸಿ ಟೂರ್ನಿ ಆಯೋಜಿಸಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. 1996ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯನ್ನು ಪಾಕಿಸ್ತಾನವು ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ಆಯೋಜಿಸಿತ್ತು.

ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಆಸೀಸ್‌ಗೆ ಗಾಯದ ಭೀತಿ!

"ಬರೋಬ್ಬರಿ 29 ವರ್ಷಗಳ ನಂತರ ಪಾಕಿಸ್ತಾನ ಐಸಿಸಿ ಟೂರ್ನಿ ಆಯೋಜಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಮೂಲಕ ಪಾಕ್ ಆಟಗಾರರು ಇಡೀ ದೇಶವನ್ನು ಹೆಮ್ಮೆ ಪಡುವಂತೆ ಮಾಡುತ್ತಾರೆ ಎಂಬ ಭರವಸೆ ನಮಗಿದೆ," ಎಂದು ಶಹಬಾಝ್‌ ಶರಿಫ್‌ ತಿಳಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್ ಪ್ರಾಬಲ್ಯ

ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಇತಿಹಾಸದಲ್ಲಿಯೇ ಭಾರತ ವಿರುದ್ಧ ಪಾಕಿಸ್ತಾನ ಪ್ರಾಬಲ್ಯ ಮೆರೆದಿದೆ. 2017ರ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವನ್ನು 180 ರನ್‌ಗಳ ಭಾರೀ ಅಂತರದಿಂದ ಮಣಿಸಿ ಪಾಕಿಸ್ತಾನ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಈ ಮಹತ್ವದ ಟೂರ್ನಿಯಲ್ಲಿ ಇತ್ತಂಡಗಳು ಆಡಿರುವ ಐದು ಪಂದ್ಯಗಳಲ್ಲಿ ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ.

ಚಾಂಪಿಯನ್ಸ್‌ ಟ್ರೋಫಿ; ಭಾರತ ತಂಡದಲ್ಲಿ ಒಂದು ಮಹತ್ವದ ಬದಲಾವಣೆ ಸಾಧ್ಯತೆ!

ಭಾರತ ತಂಡದ ಮೇಲುಗೈ

2017ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್‌ನಲ್ಲಿ ಸೋಲು ಅನುಭವಿಸಿದ ಬಳಿಕ ಪಾಕಿಸ್ತಾನ ವಿರುದ್ಧದ ಪ್ರಾಬಲ್ಯ ಸಾಧಿಸಿರುವ ಭಾರತ ತಂಡ, ಕಳೆದ 6 ಏಕದಿನ ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿದ್ದರೆ, ಒಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಏಕದಿನ ಕ್ರಿಕೆಟ್‌ನಲ್ಲಿನ ತಮ್ಮ ಪ್ರಾಬಲ್ಯವನ್ನು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲೂ ಮುಂದುವರಿಸಲು ರೋಹಿತ್ ಶರ್ಮಾ ಪಡೆ ಎದುರು ನೋಡುತ್ತಿದ್ದು, ಈ ಹೈವೋಲ್ಟೇಜ್ ಪಂದ್ಯ ಮೇಲೆ ಅಭಿಮಾನಿಗಳು ಸಾಕಷ್ಟು ಕುತೂಹಲ ಮೂಡಿಸಿದೆ.