Physical Abuse: ರಾಯಚೂರಿನಲ್ಲಿ ಹೇಯ ಕೃತ್ಯ, 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ
ಪೋತ್ನಾಳ್ ಗ್ರಾಮದ ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಪಾತಕಿ ಶಿವನಗೌಡನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರಾಯಚೂರು: ರಾಜ್ಯದಲ್ಲಿ ಪುಟ್ಟ ಹೆಣ್ಣು ಮಕ್ಕಳ, ವಿದ್ಯಾರ್ಥಿನಿಯರ (Student) ಮೇಲೆ ನಡೆಯುತ್ತಿರುವ ಅತ್ಯಾಚಾರ (Physical Abuse) ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ರಾಯಚೂರಿನಲ್ಲಿ (Raichur News) ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ.
ಖಾಸಗಿ ಶಾಲೆಯ 2ನೇ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ನಡೆದಿದೆ. ಪೋತ್ನಾಳ್ ಗ್ರಾಮದ ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಪಾತಕಿ ಶಿವನಗೌಡನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪ್ರತಿದಿನ ಊರಿನಿಂದ ಶಾಲೆಗೆ ಸ್ಕೂಲ್ ಬಸ್‌ನಲ್ಲಿ ಬಾಲಕಿ ತೆರಳುತ್ತಿದ್ದಳು. ಬಂಧಿತ ಆರೋಪಿ ಶಿವನಗೌಡ ಎಂಬಾತ ಅದೇ ಊರಿನವನಾಗಿದ್ದು ಬಾಲಕಿಗೆ ಪರಿಚಿತನಾಗಿದ್ದಾನೆ. ಮಧ್ಯಾಹ್ನ ಶಾಲೆಗೆ ಬರುತ್ತಿದ್ದ ಆರೋಪಿ ಊಟದ ಸಮಯಕ್ಕೆ ಬಾಲಕಿಯನ್ನು ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಆರೋಪಿ ಶಿವನಗೌಡ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಬಾಲಕಿಯ ಕೆನ್ನೆಗೆ ಬಿಸಿ ಚಮಚದಿಂದ ಬರೆ ಹಾಕಿದ ಅಂಗನವಾಡಿ ಸಹಾಯಕಿ ಅಮಾನತು
ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯವಾಗಿ ನಡೆದುಕೊಂಡ ಅಂಗನವಾಡಿ ಸಹಾಯಕಿಯೊಬ್ಬಳು, ಕ್ಷುಲ್ಲಕ ಕಾರಣಕ್ಕೆ ಬಾಲಕಿಯ ಕೆನ್ನೆಗೆ ಬಿಸಿ ಚಮಚದಿಂದ ಬರೆಯಿಟ್ಟು ಕ್ರೌರ್ಯ ಮೆರೆದಿದ್ದಾಳೆ. ಈ ಹಿನ್ನೆಲೆಯಲ್ಲಿ ಕೂಡಲೇ ಅಂಗನವಾಡಿ ಸಹಾಯಕಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ಅಂಗನವಾಡಿಯಲ್ಲಿ ನಡೆದಿದೆ.
ಬಾಲಕಿಯ ಕೆನ್ನೆಗೆ ಸಹಾಯಕಿ ಅನ್ನದ ಚಮಚದಿಂದ ಬರೆಹಾಕಿದ್ದು, ಬರೆಯಿಂದ ಪ್ರೀತಿ ಎಂಬ ಬಾಲಕಿಯ ಕೆನ್ನೆಗೆ ಗಾಯವಾಗಿದೆ. ಅಂಗನವಾಡಿ ಕಾರ್ಯಕರ್ತೆ ಶೋಭಾ, ಸಹಾಯಕಿ ಶಾರವ್ವ ಅವರನ್ನು ತಕ್ಷಣ ಅಮಾನತುಗೊಳಿಸಿ ಸಿಡಿಪಿಒ ಕಾಶಿಬಾಯಿ ಆದೇಶಿಸಿದ್ದಾರೆ. ಬರೆ ಹಾಕಿದ್ದಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿ: Physical Assault: ಆಟೋ ಚಾಲಕರಿಂದ ವಲಸೆ ಕಾರ್ಮಿಕ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ!