ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Abuse: ಚಿಕ್ಕಬಳ್ಳಾಪುರದಲ್ಲಿ ಹೀನ ಕೃತ್ಯ; ಮಸೀದಿ ಕೊಠಡಿಯಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

Physical Abuse: ಆರೋಪಿ ಮೂಲತಃ ಉತ್ತರ ಪ್ರದೇಶ ಮೂಲದವನಾಗಿದ್ದಾನೆ. 20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕ್ಕೆ ಬಂದು ವಾಸ್ತವ್ಯ ಹೂಡಿದ್ದ. ಬೀದಿ ಬದಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದಾನೆ. ಈತ ಮೌಲ್ವಿಯಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯ ತಂದೆ ಎಂದು ತಿಳಿದುಬಂದಿದೆ. ಆರೋಪಿಯ ಬಂಧನವಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಸೀದಿ ಕೊಠಡಿಯಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

Profile Prabhakara R Jun 3, 2025 2:05 PM

ಚಿಕ್ಕಬಳ್ಳಾಪುರ: ಆರು ವರ್ಷದ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಘಟನೆ ನಗರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಸಿದ್ದು, ಅವರು ನೀಡಿದ ದೂರಿನ ಆಧಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮಹಪ್ಯೂಸ್ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯು ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯ ತಂದೆ ಎಂದು ತಿಳಿದುಬಂದಿದೆ.

ಆರೋಪಿಯ ಮಗ ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದುದರಿಂದ ಮೌಲ್ವಿಯ ಆಶ್ರಯಕ್ಕೆ ಮಸೀದಿಯ ಕೊಠಡಿಯನ್ನು ಜಮಾತ್ ನೀಡಿತ್ತು. ಅದೇ ಕೊಠಡಿಯನ್ನು ಆರೋಪಿ ದುರುಪಯೋಗಪಡಿಸಿಕೊಂಡಿದ್ದಾನೆ. ಚಾಕೊಲೇಟ್ ಕೊಡಿಸುವ ಆಮಿಷವೊಡ್ಡಿ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಮಹಪ್ಯೂಸ್ ಮೂಲತಃ ಉತ್ತರ ಪ್ರದೇಶ ಮೂಲದವನಾಗಿದ್ದಾನೆ. 20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕ್ಕೆ ಬಂದು ವಾಸ್ತವ್ಯ ಹೂಡಿದ್ದ. ಬೀದಿ ಬದಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದಾನೆ.

ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮಸೀದಿಯ ಮೌಲ್ವಿ ಸುಹೇಬ್​​ನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮೌಲ್ವಿಯ ಆಶ್ರಯಕ್ಕೆಂದು ಪಡೆದ ಕೊಠಡಿಯನ್ನು ತಂದೆಗೆ ಯಾಕೆ ನೀಡಿದ್ದು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮತ್ತೊಂದೆಡೆ, ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನೂ ಓದಿ | Virat Kohli: ವಿರಾಟ್‌ ಕೊಹ್ಲಿ ಮಾಲಿಕತ್ವದ ಬೆಂಗಳೂರಿನ ಪಬ್‌ ಮೇಲೆ ದೂರು ದಾಖಲು

ಹಿಂದೂ ಕಾರ್ಯಕರ್ತನಿಂದ ಯುವತಿಗೆ ಕಿರುಕುಳ, ಮದುವೆಗೆ ಅಡ್ಡಿ: ದೂರು

chikkaballi balakrishna

ಮಂಡ್ಯ: ತನ್ನನ್ನು ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಹಿಂದೂ ಮುಖಂಡನೊಬ್ಬ ನಿರಂತರ ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ (harassment) ನೀಡುತ್ತಿದ್ದಾನೆ. ಜೊತೆಗೆ ಆಕೆಗೆ ನಿಶ್ಚಯವಾಗುತ್ತಿದ್ದ ಮದುವೆಗಳನ್ನೆಲ್ಲ ರದ್ದು ಮಾಡಿಸಿದ್ದ. ಆ್ಯಸಿಡ್ ದಾಳಿ (Acid Attack threat) ಮಾಡುವ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಸದ್ಯ ಆತನ ವಿರುದ್ಧ ಮಂಡ್ಯದ (Mandya crime news) ಕೆರಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಹಿಂದೂ ಮುಖಂಡ ಚಿಕ್ಕಬಳ್ಳಿ ಬಾಲಕೃಷ್ಣ ಎಂಬಾತನ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

4 ವರ್ಷಗಳ ಹಿಂದೆ ಸಂತ್ರಸ್ತೆ ಹಾಗೂ ಬಾಲಕೃಷ್ಣನಿಗೆ ಮದುವೆ ನಿಶ್ಚಯವಾಗಿತ್ತು. ಆ ವೇಳೆ ಸಂತ್ರಸ್ತೆ ಮತ್ತು ಬಾಲಕೃಷ್ಣ ಜೊತೆಯಲ್ಲಿ ಫೋಟೋ ತೆಗೆಸಿಕೊಂಡಿದ್ದರು. ಆದರೆ, ಬಾಲಕೃಷ್ಣ ಹಲವು ಸುಳ್ಳುಗಳನ್ನು ಹೇಳಿ ಮದುವೆ ನಿಶ್ಚಯ ಮಾಡಿಕೊಂಡಿದ್ದು ನಂತರ ಸಂತ್ರಸ್ತೆಯ ಅರಿವಿಗೆ ಬಂದಿತ್ತು. ಹೀಗಾಗಿ ಮದುವೆ ನಿರಾಕರಿಸಿದ್ದಳು. ಇದು ಬಾಲಕೃಷ್ಣನನ್ನು ಕೆರಳಿಸಿತ್ತು.

ಅದಾದ ನಂತರ ಸಂತ್ರಸ್ತೆಗೆ ಬೇರೆ ಮದುವೆ ಪ್ರಸ್ತಾಪಗಳು ಬಂದಾಗಲೆಲ್ಲ ಆರೋಪಿ ಬಾಲಕೃಷ್ಣ ಹಳೇ ಫೋಟೋ ತೋರಿಸಿ ಚಾಡಿ ಹೇಳಿ ವಿವಾಹ ರದ್ದಾಗುವಂತೆ ಮಾಡುತ್ತಿದ್ದ. ಇಷ್ಟೇ ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾನೆಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೆ, ಆ್ಯಸಿಡ್ ಎರಚುವುದಾಗಿಯೂ, ಕೊಲೆ ಮಾಡುವುದಾಗಿಯೂ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಿದ್ದಾರೆ.

‘ನೀನು ಬೇರೆಯವರನ್ನು ಮದುವೆಯಾಗಲು ಬಿಡುವುದಿಲ್ಲ. ನಿನ್ನ ಮದುವೆ ಎಲ್ಲೇ ನಿಶ್ಚಯವಾದರೂ ಅಲ್ಲಿಗೆ ಬಂದು ನಿನ್ನ ಮದುವೆ ನಿಲ್ಲಿಸಿ ನಿನ್ನ ಬಗ್ಗೆ ಅಪಪ್ರಚಾರ ಮಾಡಿ ನಿನ್ನನ್ನು ಅಲ್ಲೇ ಕೊಲೆ ಮಾಡುತ್ತೆನೆಂದು ಹೆದರಿಸಿ ಆರೋಪಿಯು ಪ್ರಾಣಭಯ ಉಂಟುಮಾಡಿರುತ್ತಾನೆ. ಸಾರ್ವಜನಿಕ ಸ್ಥಳದಲ್ಲಿ ನನ್ನನ್ನು ಬೈದು ಹೀಯಾಳಿಸಿ ಅವಮಾನ ಮಾಡಿರುತ್ತಾನೆ. ಆಗ ನನ್ನ ದೊಡ್ಡಮ್ಮ ಲಕ್ಷ್ಮಮ್ಮ ಮತ್ತು ಜತೆಗೆ ಬಂದಿದ್ದ ಚಿಕ್ಕಬಳ್ಳಿ ಗ್ರಾಮದ ಸಿಕೆ ಪದ್ಮ ಅವರು ಆತನಿಗೆ ಬೈದು ಕಳುಹಿಸಿರುತ್ತಾರೆ’ ಎಂದೂ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Kamal Hassan Controversy: 'ಶಿವಣ್ಣಗೆ ಆದ ಮುಜುಗರಕ್ಕೆ ವಿಷಾದʼ : ಕರ್ನಾಟಕ ಫಿಲಂ ಚೇಂಬರ್ ಅಧ್ಯಕ್ಷರಿಗೆ ಪತ್ರ ಬರೆದ ಕಮಲ್; ಕ್ಷಮೆಯ ಸುಳಿವಿಲ್ಲ!

ಆರೋಪಿ ಬಾಲಕೃಷ್ಣನಿಂದ ರಕ್ಷಣೆ ಕೋರಿ ಹಾಗೂ ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ಮನವಿ ಮಾಡಿದ್ದಾರೆ.