ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vande Bharat Train: ವಂದೇ ಭಾರತ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ- ಸಿಎಂ ಸಿದ್ದರಾಮಯ್ಯ ಸಾಥ್‌; ಫೋಟೋಗಳು ಇಲ್ಲಿವೆ

CM Siddaramaiah: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಯೆಲ್ಲೋ ಲೈನ್‌ ಮತ್ತು ವಂದೇ ಭಾರತ್‌ ರೈಲಿಗೆ ಚಾಲನೆ ನೀಡುತ್ತಿದ್ದಾರೆ. ಹೆಚ್‌ಎಎಲ್‌ ಏರ್‌ಪೋರ್ಟ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡ್ಡಿಯೂರಪ್ಪ ಮತ್ತು ವಿಪಕ್ಷ ನಾಯಕ ಆರ್‌, ಅಶೋಕ್‌ ಅವರು ಸ್ವಾಗತಿಸಿದ್ದಾರೆ.

1/6

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿ ಯ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಭಾಗಿಯಾದರು. ಈ ಸಮಯದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸೇರಿದಂತೆ ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

2/6

ಇದೇ ಸಮಯದಲ್ಲಿ ಅಮೃತ್‍ಸರ್ ದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.

3/6

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಪೋರ್ಸ್ HQTC ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು. ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಸ್ಪರ ಅಭಿನಂದಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಪಸ್ಥಿತರಿದ್ದರು.

4/6

ವಂದೇ ಭಾರತ್‌ ರೈಲುಗಳಿಗೆ ಚಾಲನೆ ಕೊಟ್ಟ ನಂತರ ಪ್ರಧಾನಿ ಮೋದಿ ರೈಲಿನೊಳಗೆ ಇದ್ದ ಮಕ್ಕಳ ಜೊತೆ ಸಂವಾಸ ನಡೆಸಿದರು. ವಿದ್ಯಾಭ್ಯಾಸ, ರೈಲು ಪ್ರಯಾಣದ ಅನುಭವದ ಬಗ್ಗೆ ಮಾತುಕತೆ ನಡೆಸಿದರು.

5/6

ಇಂದು ಪ್ರಧಾನಿ ಮೋದಿ ಆಗಮನದ ಹಿನ್ನೆಲೆ ಇಡೀ ಬೆಂಗಳೂರು ಕೇಸರೀಮಯವಾಗಿದೆ. ಮೋದಿ.. ಮೋದಿ ಎಂದು ಕಾರ್ಯಕರ್ತರ ಕೂಗುವ ಜೈಕಾರ ಮುಗಿಲುಮುಟ್ಟಿದೆ.

6/6

ನಮ್ಮ ಮೆಟ್ರೋದ ಯೆಲ್ಲೋ ಲೈನ್‌ ಮತ್ತು ವಂದೇ ಭಾರತ್‌ ರೈಲಿಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದಾರೆ. ಎಚ್‌ಎಲ್‌ ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಮೇಖ್ರಿ ಸರ್ಕಲ್‌ ಬಳಿ ಇರುವ ಮಿಲಿಟರಿ ಬೇಸ್‌ಗೆ ಬಂದಿಳಿದರು. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು.