#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Narendra Modi: ಟ್ರಂಪ್‌ ಮೋದಿ ದೂರವಾಣಿ ಮಾತು;ಕುಚಿಕು ಗೆಳೆಯರು ಏನೆಲ್ಲಾ ಮಾತಾಡಿದ್ರು?

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ, ಟ್ರಂಪ್‌ 2.0 ಅವಧಿಗೆ ಪ್ರೀತಿಯಿಂದ ಶುಭ ಕೋರಿದ್ದಾರೆ. ಟ್ರಂಪ್‌ ಅವರನ್ನು ತಮ್ಮ ಆತ್ಮೀಯ ಗೆಳೆಯ ಎಂದು ಕರೆದಿರುವ ಪ್ರಧಾನಿ ಮೋದಿ, ಟ್ರಂಪ್‌ ಆಡಳಿತಾವಧಿಯಲ್ಲಿ ಭಾರತ ಮತ್ತು ಅಮೆರಿಕದ ಜನರ ನಡುವಿನ ಸ್ನೇಹ ಸಂಬಂಧ ಗಟ್ಟಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ ಡೊನಾಲ್ಡ್‌ ಟ್ರಂಪ್‌, ಭಾರತ-ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ತಮ್ಮ ಭೇಟಿಗಾಗಿ ಕಾಯುತ್ತಿರುವುದಾಗಿ ದೂರವಾಣಿ ಕರೆಯಲ್ಲಿ ಹೇಳಿದ್ದಾರೆ.

ಗೆಳೆಯ ಟ್ರಂಪ್‌ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದ ಮೋದಿ!

Narendra Modi

Profile Deekshith Nair Jan 27, 2025 9:23 PM

ನವದೆಹಲಿ: ಅಮೆರಿಕದ(America) ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌(Donald Trump) ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಟ್ರಂಪ್‌ 2.0 ಅವಧಿಗೆ ಅತ್ಯಂತ ಪ್ರೀತಿಯಿಂದ ಶುಭ ಕೋರಿದ್ದಾರೆ. ಟ್ರಂಪ್‌ ಅವರನ್ನು ತಮ್ಮ ಆತ್ಮೀಯ ಗೆಳೆಯ ಎಂದು ಕರೆದಿರುವ ಪ್ರಧಾನಿ ಮೋದಿ, ಟ್ರಂಪ್‌ ಆಡಳಿತಾವಧಿಯಲ್ಲಿ ಭಾರತ ಮತ್ತು ಅಮೆರಿಕದ ಜನರ ನಡುವಿನ ಸ್ನೇಹ ಸಂಬಂಧ ಗಟ್ಟಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ ಡೊನಾಲ್ಡ್‌ ಟ್ರಂಪ್‌, ಭಾರತ-ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ತಮ್ಮ ಭೇಟಿಗಾಗಿ ಕಾಯುತ್ತಿರುವುದಾಗಿ ದೂರವಾಣಿ ಕರೆಯಲ್ಲಿ ಹೇಳಿದ್ದಾರೆ.

ಟ್ರಂಪ್‌ ಜೊತೆಗಿನ ದೂರವಾಣಿ ಮಾತುಕತೆಯ ಕುರಿತು ಮೋದಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ. "ನನ್ನ ಆತ್ಮೀಯ ಸ್ನೇಹಿತ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ನನಗೆ ಬಹಳ ಸಂತೋಷವಾಯಿತು. ಟ್ರಂಪ್‌ ಅವರ ಐತಿಹಾಸಿಕ ಎರಡನೇ ಅವಧಿಗೆ ಅಭಿನಂದನೆ ಸಲ್ಲಿಸಿದ್ದು, ಭಾರತ-ಅಮೆರಿಕ ನಡುವಿನ ಪರಸ್ಪರ ಲಾಭದಾಯಕ ಮತ್ತು ವಿಶ್ವಾಸಾರ್ಹ ಪಾಲುದಾರಿಕೆಗೆ ಬದ್ಧತೆಯ ಬಗ್ಗೆ ಗಂಭೀರವಾಗಿ ಮಾತನಾಡಿದ್ದೇನೆ. ನಮ್ಮ ಜನರ ಕಲ್ಯಾಣಕ್ಕಾಗಿ ಮತ್ತು ಜಾಗತಿಕ ಶಾಂತಿ, ಸಮೃದ್ಧಿ ಮತ್ತು ಭದ್ರತೆಗಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ." ಎಂದು ಹೇಳಿದ್ದಾರೆ.



ಭಾರತ-ಅಮೆರಿಕ ನಡುವಿನ ದ್ವಿಪಕ್ಷೀಯ ರಾಜತಾಂತ್ರಿಕ ಸಂಬಂಧವು ಐತಿಹಾಸಿಕ ಘಟ್ಟ ತಲುಪಿದ್ದು, ಉಭಯ ರಾಷ್ಟ್ರಗಳು ಪರಸ್ಪರ ಸಹಕಾರದ ಮೂಲಕ ಒಟ್ಟಿಗೆ ಹೆಜ್ಜೆ ಹಾಕುತ್ತಿವೆ. ನಮ್ಮ ಸಂಬಂಧ ಜಾಗತಿಕ ಒಳಿತಿಗಾಗಿ ಅತ್ಯಂತ ಮಹತ್ವದ್ದಾಗಿದೆ.." ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಇನ್ನು ಮೋದಿ ಅವರ ಫೋನ್‌ ಕರೆಗೆ ಪ್ರೀತಿಯಿಂದ ಧನ್ಯವಾದ ಅರ್ಪಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ತಮ್ಮ ಭೇಟಿಗಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. "ಉಭಯ ರಾಷ್ಟ್ರಗಳ ರಾಜತಾಂತ್ರಿಕ, ಸಾಮಾಜಿಕ ಮತ್ತು ಆರ್ಥಿಕ ಸಂಬಂಧಗಳು ಜಾಗತಿಕ ಪರಿಣಾಮ ಬೀರುತ್ತಿದ್ದು, ಉತ್ತಮವಾದ ಜಗತ್ತಿನ ನಿರ್ಮಾಣದಲ್ಲಿ ಅತ್ಯಂತ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ." ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ:Donald Trump: ಅಮೇರಿಕಾದ ಅಧ್ಯಕ್ಷರ ಸಾಂವಿಧಾನಿಕದತ್ತವಲ್ಲದ ಹಕ್ಕು : ಕಾರ್ಯನಿರ್ವಹಣಾ ಆದೇಶ ಭಾರತಕ್ಕೆ ಟ್ರಂಪ್ ತಂದಿಟ್ಟ ತಲೆನೋವು

ಡೊನಾಲ್ಡ್‌ ಟ್ರಂಪ್‌ ಅವರ ಮೊದಲನೇ ಅವಧಿಯಲ್ಲೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಗಾಢವಾದ ಸ್ನೇಹ ಸಂಬಂಧವನ್ನು ಹೊಂದಿದ್ದರು. ಈ ಅವಧಿಯಲ್ಲಿ ಭಾರತ-ಅಮೆರಿಕ ನಡುವಿನ ಸಂಬಂಧ ಸಾಕಷ್ಟು ಗಟ್ಟಿಯಾಗಿತ್ತು.



ಡೊನಾಲ್ಡ್ ಟ್ರಂಪ್‌ ಅವರ ಎರಡನೇ ಅವಧಿಯಲ್ಲಿ ಭಾರತ-ಅಮೆರಿಕದ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ವೃದ್ಧಿಯಾಗುವ ನಿರೀಕ್ಷೆ ಇದೆ.