#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Delhi Election Result 2025: ಇಂದು ಸಂಜೆ 7 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ವಿಜಯ ಭಾಷಣ

ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷ (BJP) ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ(PM Narendra Modi) ಶನಿವಾರ ಸಂಜೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೆಹಲಿ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಕಾರ್ಯಕರ್ತ ಜೊತೆ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲಿದ್ದಾರೆ.

ಇಂದು ಸಂಜೆ ಪಕ್ಷದ ಕಾರ್ಯಕರ್ತರ ಜತೆ ಪ್ರಧಾನಿ ಮೋದಿ ಸಂಭ್ರಮಾಚರಣೆ

Profile Rakshita Karkera Feb 8, 2025 12:06 PM

ನವದೆಹಲಿ: ದೆಹಲಿ ಚುನಾವಣಾ ಫಲಿತಾಂಶ(Delhi Election 2025) ಬಹುತೇಕ ಸ್ಪಷ್ಟವಾಗಿದ್ದು, ಬರೋಬ್ಬರಿ 26 ವರ್ಷಗಳ ನಂತರ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಆ ಮೂಲಕ ಆಪ್‌ನ ಹ್ಯಾಟ್ರಿಕ್‌ ಗೆಲುವಿನ ಕನಸು ‍ಭಗ್ನವಾಗಿದೆ. ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷ (BJP) ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ(PM Narendra Modi) ಶನಿವಾರ ಸಂಜೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಸಂಜೆ 7.30 ಕ್ಕೆ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದು, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.



ದೆಹಲಿ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಕಾರ್ಯಕರ್ತ ಜೊತೆ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ನಂತರ ವಿಜಯ ಭಾಷಣ ಮಾಡಲಿದ್ದಾರೆ.

ಈ ಸುದ್ದಿಯನ್ನೂ ಓದಿ: Delhi Election 2025: ದೆಹಲಿಯಲ್ಲಿ ಆಪ್‌ಗೆ ಭಾರೀ ಹಿನ್ನಡೆ; ಬಿಜೆಪಿಗೆ ಅಧಿಕಾರದ ಚುಕ್ಕಾಣಿ ಫಿಕ್ಸ್‌?

ದೆಹಲಿಯ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ಕೊನೆಗೆ ಘಟ್ಟಕ್ಕೆ ಬಂದು ತಲುಪಿದ್ದು, ಆಡಳಿತರೂಢ ‍ಆಪ್‌ಗೆ ಈ ಫಲಿತಾಂಶ ಮರ್ಮಾಘಾತ ನೀಡಿದೆ. ಒಂಬತ್ತನೇ ಸುತ್ತಿನ ಮತ ಎಣಿಕೆಯಲ್ಲೂ ಅರವಿಂದ ಕೇಜ್ರಿವಾಲ್‌ ಹಾಲಿ ಸಿಎಂ ಆತಿಶಿ, ಮನೀಷ್‌ ಸಿಸೋಡಿಯಾ ಸೇರಿದಂತೆ ಆಪ್‌ನ ಘಟಾನುಘಟಿಗಳು ಭಾರೀ ಹಿನ್ನಡೆ ಸಾಧಿಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‌ ಶೂನ್ಯ ಸಾಧನೆ ಸಾಧಿಸಿದ್ದು, ಧೂಳೀಪಟವಾಗಿದೆ.