POCSO Case: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ಬಾಲ್ಯವಿವಾಹವಾಗಿದ್ದ ಆರೋಪಿಗೆ 20 ವರ್ಷ ಜೈಲು
ಕೋಲಾರ ಜಿಲ್ಲೆಯ ಮುಳಬಾಗಿಲು ಮಾರುತಿ ನಗರದ ನಿವಾಸಿಯಾಗಿರುವ ಗಂಗಾಧರ್ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ. ಬಳಿಕ ಮದುವೆ ಕೂಡ ಮಾಡಿಕೊಂಡಿದ್ದ. ಈ ಕುರಿತು 2023 ಮೇ 17ರಂದು ಬಾಲಕಿಯ ಪೋಷಕರು ದೂರು ನೀಡಿದ್ದರು.


ಕೋಲಾರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ (POCSO Case) ಬಾಲ್ಯ ವಿವಾಹ ಮಾಡಿಕೊಂಡಿದ್ದ ಪ್ರಕರಣದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ (Jail sentence) ಹಾಗೂ 45,000 ದಂಡ ವಿಧಿಸಿ ಕೋಲಾರ (Kolara news) ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಅಪರಾಧಿ ಕಾರು ಚಾಲಕ ಗಂಗಾಧರ್‌ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ಮಾರುತಿ ನಗರದ ನಿವಾಸಿಯಾಗಿರುವ ಗಂಗಾಧರ್ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ. ಬಳಿಕ ಮದುವೆ ಕೂಡ ಮಾಡಿಕೊಂಡಿದ್ದ. ಈ ಕುರಿತು 2023 ಮೇ 17ರಂದು ಬಾಲಕಿಯ ಪೋಷಕರು ದೂರು ನೀಡಿದ್ದರು. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ತನಿಖೆ ಬಳಿಕ ಪೊಲೀಸರು ಕೋರ್ಟಿಗೆ ದೋಷಾರೋಪ ಪಟ್ಟಿ ಸಲ್ಲಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಬಿ ಪ್ರಸಾದ್ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಗಂಗಾಧರ್‌ಗೆ 20 ವರ್ಷ ಶಿಕ್ಷೆ ಹಾಗೂ ರೂ. 45,000 ದಂಡ ವಿಧಿಸಿ ತೀರ್ಪು ನೀಡಿದ್ದು ಸಂತ್ರಸ್ತೆಗೆ 4 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಕೋರ್ಟ್ ಆದೇಶ ನೀಡಿದೆ.
ಮೆಟ್ರೋ ದರ ಏರಿಕೆ ಪ್ರತಿಭಟಿಸಿದ ಎಬಿವಿಪಿ ಕಾರ್ಯಕರ್ತರ ವಿರುದ್ಧ ದೂರು ದಾಖಲು
ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ ಮಾಡಿದ್ದಕ್ಕಾಗಿ ನಿನ್ನೆ ಬೆಂಗಳೂರಿನ ಮೆಜೆಸ್ಟಿಕ್ ಬಳಿ ABVP ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದೀಗ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ್ದರಿಂದ ಎಬಿವಿಪಿಯ ಒಟ್ಟು 16 ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.