Prajwal Devaraj: ಮಾ. 7ರಂದು ಪ್ರಜ್ವಲ್ ನಟನೆಯ ಟೈಮ್ ಲೂಪ್ ಹಾರರ್ ಚಿತ್ರ 'ರಾಕ್ಷಸ' ರಿಲೀಸ್
ಸ್ಯಾಂಡಲ್‌ವುಡ್ ನಟ ಪ್ರಜ್ವಲ್ ದೇವರಾಜ್ ನಟನೆಯ ಬಹು ನಿರೀಕ್ಷಿತ ಚಿತ್ರ ʼರಾಕ್ಷಸʼ ಮಾ. 7ರಂದು ರಿಲೀಸ್ ಆಗಲಿದೆ. ಪ್ರತಿ ಸಿನಿಮಾಗಳಲ್ಲಿಯೂ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ರಂಜಿಸುವ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಈ ಸಿನಿಮಾದಲ್ಲಿ ಹೊಸ ಅವತಾರ ತಾಳಿದ್ದಾರೆ.

'ರಾಕ್ಷಸʼ ಚಿತ್ರದ ಪೋಸ್ಟರ್.

ಬೆಂಗಳೂರು: ಶಾನ್ವಿ ಎಂಟರ್‌ಟೈನ್‌ಮೆಂಟ್ ಮೂಲಕ ದೀಪು ಬಿ.ಎಸ್. ನಿರ್ಮಿಸಿರುವ, ನವೀನ್ ಮತ್ತು ಮಾನಸಾ ಕೆ. ಸಹ ನಿರ್ಮಾಣದಲ್ಲಿ ಮೂಡಿ ಬಂದಿರುವ ಸಿನಿಮಾ ʼರಾಕ್ಷಸʼ (Rakshasa). ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಶಿವರಾತ್ರಿ (Shivaratri) ಹಬ್ಬದ ವಿಶೇಷವಾಗಿ ಚಿತ್ರ ತೆರೆಗೆ ಬರಬೇಕಿತ್ತು. ಆದರೆ ಬಹು ನಿರೀಕ್ಷಿತ ʼರಾಕ್ಷಸʼ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಮಾ. 7ಕ್ಕೆ ʼರಾಕ್ಷಸʼನಾಗಿ ಪ್ರಜ್ವಲ್ ದೇವರಾಜ್ (Prajwal Devaraj) ದರ್ಶನ ಕೊಡಲಿದ್ದಾರೆ.
ಪ್ರತಿ ಸಿನಿಮಾಗಳಲ್ಲಿಯೂ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ರಂಜಿಸುವ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ʼರಾಕ್ಷಸʼ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರಲು ಸಜ್ಜಾಗಿದ್ದಾರೆ. ಲೋಹಿತ್ ಎಚ್. ನಿರ್ದೇಶನದ ಈ ಟೈಮ್ ಲೂಪ್ ಹಾರರ್ ಚಿತ್ರದಲ್ಲಿ ಸೋನಲ್ ಮೊಂಥೆರೋ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಶೋಭಾರಾಜ್, ವತ್ಸಲಾ ಮೋಹನ್, ಸಿದ್ಲಿಂಗು ಶ್ರೀಧರ್, ಆರ್ನ ರಾಥೋಡ್ ಹೀಗೆ ಹಲವು ಕಲಾವಿದರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಚಿತ್ರಕ್ಕೆ ಜೇಬಿನ್ ಪಿ. ಜೋಕಬ್ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ವಿನೋದ್ ಸಾಹಸ ನಿರ್ದೇಶನ ಇದೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ. ಕನ್ನಡದ ಈ ಚಿತ್ರವನ್ನ ಹೈದರಾಬಾದ್‌ನಲ್ಲಿಯೇ ಚಿತ್ರೀಕರಣ ನಡೆಸಲಾಗಿದೆ.
ಶೇ. 80ರಷ್ಟು ಭಾಗವನ್ನು ಹೈದರಾಬಾದ್‌ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿಯೇ ಶೂಟಿಂಗ್ ನಡೆಸಲಾಗಿದೆ. ಇತರ ಶೇ. 20ರಷ್ಟು ಭಾಗವನ್ನ ಬೆಂಗಳೂರು, ರಾಮೇಶ್ವರಂ ಹಾಗೂ ಗೋವಾದಲ್ಲಿ ಚಿತ್ರೀಕರಣ ಮಾಡಲಾಗಿದೆ.
ತೆಲುಗಿನಲ್ಲಿಯೂ ಬಿಡುಗಡೆಯಾಗುತ್ತಿರುವ ಈ ಚಿತ್ರದ ಥಿಯೇಟರ್ ಹಕ್ಕನ್ನು ಕಂಚಿ ಕಾಮಾಕ್ಷಿ ಕೋಲ್ಕತಾ ಕಾಳಿ ಕ್ರಿಯೇಷನ್ ತನ್ನದಾಗಿಸಿಕೊಂಡಿದೆ. ಅಖಂಡ ತೆಲುಗು ಪ್ರೇಕ್ಷಕರಿಗೆ ʼರಾಕ್ಷಸʼ ಸಿನಿಮಾವನ್ನು ಈ ಸಂಸ್ಥೆ ತಲುಪಿಸಲಿದೆ.
ಈ ಸುದ್ದಿಯನ್ನೂ ಓದಿ: Pinaka Movie: ʼಪಿನಾಕʼ ಚಿತ್ರದ ವಿಭಿನ್ನ ಪೋಸ್ಟರ್ ರಿಲೀಸ್: ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಲುಕ್‌ಗೆ ಫ್ಯಾನ್ಸ್ ಫಿದಾ
ವಿಭಿನ್ನ ಚಿತ್ರ
ʼರಾಕ್ಷಸʼ ವಿಶೇಷ ಸಿನಿಮಾ. ಯಾಕೆಂದರೆ ಇದರಲ್ಲಿ ಟೈಮ್ ಲೂಪ್ ಕಾನ್ಸೆಪ್ಟ್ ಇದೆ. ಕನ್ನಡಕ್ಕೆ ಈ ರೀತಿಯ ಚಿತ್ರ ಬಹಳ ಅಪರೂಪ. ಪ್ರಿಯಾಂಕಾ ಉಪೇಂದ್ರ ನಟಿಸಿರುವ ʼಮಮ್ಮಿʼ, ʼದೇವಕಿʼ ಚಿತ್ರಗಳನ್ನ ನಿರ್ದೇಶಿಸಿರುವ ಲೋಹಿತ್ ʼರಾಕ್ಷಸʼ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದೇ ಕಾರಣಕ್ಕೆ ಈ ಚಿತ್ರ ಕುತೂಹಲ ಮೂಡಿಸಿದೆ.