ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Congress Protest: ಕೇಂದ್ರ ಸರ್ಕಾರದ ಬೆಲೆ ಏರಿಕೆಗಳ ವಿರುದ್ಧ ಇಂದು ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಕೇಂದ್ರ ಸರ್ಕಾರದಿಂದ ಆಗಿರುವ ಬೆಲೆ ಏರಿಕೆ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ (Congress protest) ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಕೆಪಿಸಿಸಿ ಕಾರ್ಯಧ್ಯಕ್ಷರು, ಶಾಸಕರು, ಸಂಸದರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಕೇಂದ್ರದ ಬೆಲೆ ಏರಿಕೆಗಳ ವಿರುದ್ಧ ಇಂದು ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Apr 17, 2025 9:53 AM

ಬೆಂಗಳೂರು: ಕೇಂದ್ರ ಸರ್ಕಾರದಿಂದ ಗ್ಯಾಸ್ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ (Price hike) ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಇಂದು ಕಾಂಗ್ರೆಸ್‌ನಿಂದ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ (congress protest) ನಡೆಯಲಿದೆ. ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಇತ್ತೀಚೆಗೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಪ್ರತಿಭಟನೆ ನಡೆಸಿತ್ತು. ಡೀಸೆಲ್‌ ಬೆಲೆ ಏರಿಕೆ, ಹಾಲಿನ ಬೆಲೆ ಏರಿಕೆ ಮತ್ತಿತರ ಬೆಲೆ ಏರಿಕೆಗಳನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಂಡಿತ್ತು. ಇದೀಗ ಬಿಜೆಪಿಗೆ ತಿರುಗೇಟು ನೀಡಲು ಇಂದು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರದಿಂದ ಬೆಲೆ ಏರಿಕೆ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಕೆಪಿಸಿಸಿ ಕಾರ್ಯಧ್ಯಕ್ಷರು, ಶಾಸಕರು, ಸಂಸದರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಕೇಂದ್ರ ಬಿಜೆಪಿ ಸರಕಾರದ ನೀತಿಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಏ.17ರಂದು ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿ ತಾಲೂಕಿಗೆ 10 ಬಸ್‌ ಮಾಡಲಾಗಿದ್ದು, ಕನಿಷ್ಠ 500 ಮಂದಿ ಭಾಗವಹಿಸಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವ ಮುನ್ನ ಮನಮೋಹನ್‌ ಸಿಂಗ್‌ ಇದ್ದಾಗ ಅಗತ್ಯ ವಸ್ತುಗಳ ಬೆಲೆ ಎಷ್ಟಿತ್ತು ಈಗ ಎಷ್ಟಾಗಿದೆ ಎನ್ನುವುದನ್ನು ಅರಿಯಬೇಕು. ಅಚ್ಛೇದಿನ್‌ ಬರಲಿದೆ, ನಾವು ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ ಕಪ್ಪು ಹಣ ವಾಪಸ್‌ ತಂದು 15 ಲಕ್ಷ ರೂ. ಪ್ರತಿ ಖಾತೆಗೆ ಹಾಕುತ್ತೇವೆ ಎಂದವರು, 3ನೇ ಅವಧಿಗೆ ಅಧಿಕಾರಕ್ಕೆ ಬಂದರೂ ಅದರ ಬಗ್ಗೆ ಚಕಾರವಿಲ್ಲ. ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 65 ಡಾಲರ್‌ ಇದ್ದರೂ ಬೆಲೆ ಇಳಿಕೆ ಮಾಡುತ್ತಿಲ್ಲ. ಈ ಎಲ್ಲದರಿಂದಾಗಿ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಇದನ್ನೆಲ್ಲ ಮನಗಂಡು ರಾಜ್ಯ ಕಾಂಗ್ರೆಸ್‌ ಸರಕಾರ 57 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಿ 5 ಗ್ಯಾರಂಟಿಗಳನ್ನು ನೀಡುತ್ತಿದೆ. ಬಿಜೆಪಿಯವರು ಇದೀಗ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಲ್ಲದೆ, ರಾಜ್ಯದ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಯಾವುದೇ ಕಾರಣಕ್ಕೂ 5 ವರ್ಷಗಳ ಕಾಲ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: BY Vijayendra: ಜನಾಕ್ರೋಶ ಯಾತ್ರೆ ದಿಕ್ಕು ಬದಲಿಸಲು ಕೇಂದ್ರದ ವಿರುದ್ಧ ಕಾಂಗ್ರೆಸ್‌ ಹೋರಾಟ: ವಿಜಯೇಂದ್ರ