ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ದಲಿತಪರ ಸಂಘಟನೆಗಳಿಂದ ಡಾ.ಬಾಬು ಜಗಜೀವನ್‌ರಾಮ್ ಜಯಂತಿ ಆಚರಣೆ

ದೇಶದ ಕೃಷಿಯ ಏಳಿಗೆಗೆ ಅಪಾರ ಕೊಡುಗೆ ನೀಡಿದ ಹಾಗೂ ಕಾರ್ಮಿಕರ ಕಾನೂನುಗಳು ಮತ್ತವರ ಹಕ್ಕುಗಳ ಅನುಷ್ಠಾನಕ್ಕೆ ಶ್ರಮಿಸಿದ ಡಾ. ಬಾಬು ಜಗಜೀವನ್ ರಾಮ್ ಅವರ ಕೊಡುಗೆ ಗಳು ಅನನ್ಯ ಎಂದ ಅವರು ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ್ ಅವರು ಶೋಷಿ ತರ ಹಕ್ಕಿಗಾಗಿ ಹೋರಾಡಿದವರು

ದಲಿತಪರ ಸಂಘಟನೆಗಳಿಂದ ಡಾ.ಬಾಬು ಜಗಜೀವನ್‌ರಾಮ್ ಜಯಂತಿ ಆಚರಣೆ

ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಹಸಿರುಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ ೧೧೮ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

Profile Ashok Nayak Apr 6, 2025 9:18 AM

ಚಿಂತಾಮಣಿ : ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಹಸಿರುಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 118ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾದಿಗ ದಂಡೋರ ಜಾಗೃತಿ ಹೋರಾಟ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ವಿ ರಾಮಪ್ಪರವರು ಮಾತನಾಡಿ, ದೇಶದ ಕೃಷಿಯ ಏಳಿಗೆಗೆ ಅಪಾರ ಕೊಡುಗೆ ನೀಡಿದ ಹಾಗೂ ಕಾರ್ಮಿಕರ ಕಾನೂನುಗಳು ಮತ್ತವರ ಹಕ್ಕುಗಳ ಅನುಷ್ಠಾನಕ್ಕೆ ಶ್ರಮಿಸಿದ ಡಾ. ಬಾಬು ಜಗಜೀವನ್ ರಾಮ್ ಅವರ ಕೊಡುಗೆಗಳು ಅನನ್ಯ ಎಂದ ಅವರು ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ್ ಅವರು ಶೋಷಿತರ ಹಕ್ಕಿಗಾಗಿ ಹೋರಾಡಿ ದವರು. ಹಸಿರು ಕ್ರಾಂತಿಯ ಹರಿಕಾರ.ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ರು, ಕೃಷಿ, ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ರು, ಅವರ ಸೇವೆ ಸ್ಮರಣೀಯವಾದದು. ಅವರ ಜೀವನ ಚರಿತ್ರೆ ಯುವ ಪೀಳಿಗೆಗೆ ತಲುಪಿಸುವ ಕಾರ್ಯ ನಡೆಯಬೇಕು ಎಂದರು.

ಇದನ್ನೂ ಓದಿ: Chikkaballapur News: ಕಲ್ಲೂಡಿ ವ್ಯವಸಾಯ ಸೇವಾ ಸಹಕಾರ ಸಂಘ : ಪುಟ್ಟಸ್ವಾಮಿಗೌಡರ ಬಣದ ಪಾಲು

ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಪಿವಿ ಮಂಜುನಾಥ್,ಜಿಲ್ಲಾ ಮುಖಂಡರಾದ ರಂಗಪ್ಪ, ಎಂ ಆರ್ ನಾರಾಯಣಸ್ವಾಮಿ,ಮೂರ್ತಿ, ತಾಲೂಕು ಅಧ್ಯಕ್ಷರಾದ ಆನೂರು ಶ್ರೀನಿವಾಸ್,ನರಸಿಂಹಪ್ಪ,ಲೋಕೇಶ್, ಕವ್ವಾಲಿ ವೆಂಕಟರವಣಪ್ಪ,ಮಹೇಶ್ ಬಾಯ್, ಜನಾರ್ಧನ್, ಸಂತೋಷ್, ಸೋಮು,ಸೇರಿದಂತೆ ಮತ್ತಿತರರು ಇದ್ದರು.