Leopard dies: ಬೋನಿಗೆ ಬಿದ್ದ ಚಿರತೆ ಸಾವು ಪ್ರಕರಣದ ಬಗ್ಗೆ ತನಿಖೆಗೆ ಆದೇಶ
Leopard dies: ಚಿರತೆಯ ಅಸಹಜ ಸಾವಿನ ಬಗ್ಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯಿಂದ ಸ್ಥಳ ತನಿಖೆ ನಡೆಸಿ, ಅರಣ್ಯ ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲು ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.


ಬೆಂಗಳೂರು: ತುಮಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ ಬೆಂಕಿಗಾಹುತಿಯಾದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ. ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆಯ ಮುಖ್ಯಸ್ಥರಿಗೆ ಪತ್ರ ಬರೆಯಲಾಗಿದೆ. ತುಮಕೂರು ಜಿಲ್ಲೆ ತಿಪಟೂರು ವಲಯದ ಚೌಡ್ಲಾಪುರ ಗಸ್ತು ಮಧ್ಯೆಹಳ್ಳ ಗ್ರಾಮದ ತೋಟದಲ್ಲಿ ಬೋನಿಗೆ ಬಿದ್ದ ಚಿರತೆ, ನಂತರ ತೋಟದಲ್ಲಿ ಸಂಭವಿಸಿದ ಅಗ್ನಿ ಅನಾಹುತದ ವೇಳೆ ಉಸಿರುಕಟ್ಟಿ ಮೃತಪಟ್ಟಿದ್ದು, ಇದಕ್ಕೆ ಅರಣ್ಯ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ತನಿಖೆಗೆ ಆದೇಶಿದಿದೆ.
ಚಿರತೆಯ ಅಸಹಜ ಸಾವಿನ ಬಗ್ಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯಿಂದ ಸ್ಥಳ ತನಿಖೆ ನಡೆಸಿ, ಅರಣ್ಯ ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲು ಸಚಿವರು ಸೂಚಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Roopa Moudgil: ವರ್ತಿಕಾ ಆರೋಪಗಳು ಆಧಾರರಹಿತ: ಮುಖ್ಯ ಕಾರ್ಯದರ್ಶಿಗೆ ರೂಪಾ ಮೌದ್ಗಿಲ್ ಪತ್ರ
ಅನುಮತಿಯಿಲ್ಲದೆ ಶೂಟಿಂಗ್; ರಕ್ಷಿತಾ ಸಹೋದರನ ಸಿನಿಮಾ ಚಿತ್ರೀಕರಣ ಬಂದ್

ತುಮಕೂರು: ನಗರದ ಮೀಸಲು ಅರಣ್ಯ ಪ್ರದೇಶವಾದ ನಾಮದಚಿಲುಮೆಯಲ್ಲಿ ಅನುಮತಿ ಇಲ್ಲದೇ ಚಿತ್ರೀಕರಣ ನಡೆಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಟಿ ರಕ್ಷಿತಾ ಪ್ರೇಮ್ ಅವರ ಸಹೋದರನ ಸಿನಿಮಾದ ಶೂಟಿಂಗ್ ನಿಲ್ಲಿಸಿದ್ದಾರೆ. ಹೆಸರಿಡದ ಸಿನಿಮಾದ ಶೂಟಿಂಗ್ ಕಳೆದ ಐದು ದಿನಗಳಿಂದ ನಾಮದಚಿಲುಮೆಯಲ್ಲಿ ನಡೆಯುತ್ತಿತ್ತು. ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣಾ (Actor Raana) ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಹೊಸ ಸಿನಿಮಾದ ಚಿತ್ರೀಕರಣ ಅನುಮತಿ ಇಲ್ಲದೆ ನಾಮದಚಿಲುಮೆಯಲ್ಲಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಶೂಟಿಂಗ್ ನಿಲ್ಲಿಸಿದ್ದಾರೆ.
ಶೂಟಿಂಗ್ ಕುರಿತು ಮಾಹಿತಿ ಪಡೆದ ಅರಣ್ಯ ಇಲಾಖೆ ಎಸಿಎಫ್ ಪವಿತ್ರಾ ನೇತೃತ್ವದ ಸಿಬ್ಬಂದಿ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ಚಿತ್ರೀಕರಣವನ್ನು ಬಂದ್ ಮಾಡಿಸಿ, ಶೂಟಿಂಗ್‌ಗೆ ಬಳಸಿದ್ದ ಕೆಲ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ 5 ದಿನದಿಂದ ನಾಮದಚಿಲುಮೆಯಲ್ಲಿ ಶೂಟಿಂಗ್ ನಡೆಯುತ್ತಿತ್ತು. ನಟಿ ರಕ್ಷಿತಾ ಸಹೋದರ ರಾಣಾ, ಪ್ರಿಯಾಂಕಾ ಈ ಸಿನಿಮಾದಲ್ಲಿ ನಟಿಸುತ್ತಿದ್ದರು. ಸುಮಾರು 70-100 ಜನ ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಅರಣ್ಯ ಇಲಾಖೆ ದಾಳಿ ವೇಳೆ ಸಿನಿಮಾ ಚಿತ್ರೀಕರಣಕ್ಕೆ ಬಳಸಲಾಗಿರುವ ಕ್ಯಾರವಾನ್, ಕ್ಯಾಮೆರಾ ಲೈಟ್, ಕೆಲ ಸಾಮಗ್ರಿ, ಲೈಟ್, ಅಡುಗೆ ಸಾಮಗ್ರಿ, ಚೇರ್ಗಳು, ಟೆಂಪೊ ಟ್ರಾವೆಲರ್ ಅನ್ನು ವಶಕ್ಕೆ ಪಡೆಯಲಾಗಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ದಾಳಿ ನಡೆಸಿ ಚಿತ್ರತಂಡದವರನ್ನು ವಿಚಾರಣೆ ನಡೆಸಿ ಸಿನಿಮಾದ ಶೂಟಿಂಗ್ ನಿಲ್ಲಿಸಿದ್ದಾರೆ. ನಾವು ಊಟಕ್ಕೆ ಮಾತ್ರ ನಿಲ್ಲಿಸಿದ್ದೆವು, ಸಿನಿಮಾದ ಶೂಟಿಂಗ್ ಮಾಡಿಲ್ಲ ಎಂದು ಚಿತ್ರತಂಡ ಸ್ಪಷ್ಟನೆ ನೀಡಿದೆ.
ಈ ಸುದ್ದಿಯನ್ನೂ ಓದಿ | Satya Naidu Marriage: ಅದ್ಧೂರಿಯಾಗಿ ನಡೆಯಿತು ಚೈತ್ರಾ ವಾಸುದೇವನ್ ಮಾಜಿ ಪತಿಯ ಎರಡನೇ ಮದುವೆ: ವಿಡಿಯೋ ನೋಡಿ

ಚಿತ್ರತಂಡ ತರುಣ್ ಸುಧೀರ್ ಪ್ರೊಡಕ್ಷನ್ಸ್ ಹೆಸರಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಕೋರಿ ಈ ಮೊದಲೇ ಅರ್ಜಿ ಸಲ್ಲಿಸಿತ್ತು. ಆದರೆ ಅರಣ್ಯ ಇಲಾಖೆ ಅನುಮತಿ ನೀಡಿರಲಿಲ್ಲ. ಅನುಮತಿ ನೀಡದ ಹೊರತಾಗಿಯೂ ಚಿತ್ರತಂಡ ಚಿತ್ರೀಕರಣ ಶುರು ಮಾಡಿತ್ತು. ಇದೇ ಕಾರಣಕ್ಕೆ ಅರಣ್ಯ ಇಲಾಖೆಯವರು ಈಗ ಚಿತ್ರೀಕರಣ ಬಂದ್ ಮಾಡಿಸಿ, ಶೂಟಿಂಗ್‌ಗೆ ಬಳಸಿದ್ದ ವಸ್ತುಗಳನ್ನು ಸೀಜ್ ಮಾಡಿದೆ.