ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru 2nd Airport: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ, ಕೇಂದ್ರಕ್ಕೆ ರಾಜ್ಯ ಪ್ರಸ್ತಾವನೆ

ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಕೇಂದ್ರಕ್ಕೆ ಪ್ರಸ್ತಾಪಿಸಲಾಗಿದೆ. ಕನಕಪುರ ರಸ್ತೆ ಹಾರೋಹಳ್ಳಿ ಬಳಿ ಎರಡು ಕಡೆ ಹಾಗೂ ನೆಲಮಂಗಲದ ಕುಣಿಗಲ್ ರಸ್ತೆಯ ಒಂದು ಕಡೆ ಸ್ಥಳ ಗುರುತಿಸಲಾಗಿದ್ದು, ಅನುಮೋದನೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ, ಕೇಂದ್ರಕ್ಕೆ ಪ್ರಸ್ತಾವನೆ

ಎಂಬಿ ಪಾಟೀಲ

ಹರೀಶ್‌ ಕೇರ ಹರೀಶ್‌ ಕೇರ Mar 8, 2025 7:11 AM

ಬೆಂಗಳೂರು: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ (Bengaluru 2nd Airport) ಮೂರು ಜಾಗಗಳನ್ನು ಪ್ರಸ್ತಾಪಿಸಲಾಗಿದ್ದು, ಅನುಮೋದನೆಗಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ (Ministry of Civil Aviation) ಪ್ರಸ್ತಾವನೆ (proposal) ಸಲ್ಲಿಸಲಾಗಿದೆ ಎಂದು ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್ (MB Patil) ಶುಕ್ರವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಎಂಬಿ ಪಾಟೀಲ್, ಇದು ಕರ್ನಾಟಕದ ಮೂಲಸೌಕರ್ಯವನ್ನು (Infrastructure) ಬಲಪಡಿಸುವ ನಿಟ್ಟಿನಲ್ಲಿ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಕೇಂದ್ರಕ್ಕೆ ಪ್ರಸ್ತಾಪಿಸಲಾಗಿದೆ. ಕನಕಪುರ ರಸ್ತೆ ಹಾರೋಹಳ್ಳಿ ಬಳಿ ಎರಡು ಕಡೆ ಹಾಗೂ ನೆಲಮಂಗಲದ ಕುಣಿಗಲ್ ರಸ್ತೆಯ ಒಂದು ಕಡೆ ಸ್ಥಳ ಗುರುತಿಸಲಾಗಿದ್ದು, ಅನುಮೋದನೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

2030ರ ವೇಳೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಾಮರ್ಥ್ಯ 1 ಕೋಟಿ ತಲುಪಲಿದೆ. ಒಳ್ಳೆಯ ಉದ್ದೇಶದಿಂದ ಆರಂಭಿಕ ಸಿದ್ಧತೆಗಳನ್ನು ಪ್ರಾರಂಭಿಸಿದ್ದೇವೆ. ಈಗ ಅದನ್ನು ಆರಂಭಿಸಿದರೆ ಏಳೆಂಟು ವರ್ಷಗಳು ಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

2035ರ ವೇಳೆಗೆ ಎರಡನೇ ನಿಲ್ದಾಣ

2035ರ ವೇಳೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಾಮರ್ಥ್ಯ 110 ಮಿಲಿಯನ್ ಪ್ರಯಾಣಿಕರು ಮತ್ತು 1.10 ಮಿಲಿಯನ್ ಟನ್ ಸರಕು ಸಾಗಣೆಯ ಪೀಕ್‌ಗೆ ತಲುಪಲಿದೆ. ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು, ಹೀಗಾಗಿ ರಾಜ್ಯ ಸರ್ಕಾರದ ಮುಂಚಿತವಾಗಿ ಯೋಜನೆ ರೂಪಿಸುತ್ತಿದೆ ಎಂದು ಎಂಪಿ ಪಾಟೀಲ್‌ ಅವರು ಇತ್ತೀಚೆಗೆ ವಿಧಾನಸಭೆಯಲ್ಲಿ ತಿಳಿಸಿದ್ದರು.

2033ರವರೆಗೂ ಮತ್ತೊಂದು ವಿಮಾನ ನಿಲ್ದಾಣ ಬೇಡ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಹೇಳಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 125 ಕಿ.ಮೀ ವ್ಯಾಪ್ತಿಯಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾವು ಈಗ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಿದರೆ, ಅದನ್ನು ಪೂರ್ಣಗೊಳಿಸಲು ಇನ್ನೂ ಏಳೆಂಟು ವರ್ಷಗಳು ಬೇಕಾಗುತ್ತದೆ. ಈ ಸಂಬಂಧ ಈಗಾಗಲೇ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸಿದ್ದೇನೆ ಎಂದು ಪಾಟೀಲ್ ತಿಳಿಸಿದರು.

ಇದನ್ನೂ ಓದಿ: union budget 2025: 120 ಹೊಸ ವಿಮಾನ ನಿಲ್ದಾಣ ಸ್ಥಾಪನೆ