ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Rachin Ravindra: ಶತಕ ಬಾರಿಸಿ ವಿಶ್ವ ದಾಖಲೆ ಬರೆದ ರಚಿನ್‌ ರವೀಂದ್ರ

ವಿಶ್ವದ 19 ಬ್ಯಾಟರ್‌ಗಳು ಏಕದಿನ ವಿಶ್ವಕಪ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲೇ ಶತಕ ಸಿಡಿಸಿದ್ದಾರೆ. ಹಾಗೆಯೇ 15 ಬ್ಯಾಟರ್‌ಗಳು ಚಾಂಪಿಯನ್ಸ್ ಟ್ರೋಫಿಯ ಪದಾರ್ಪಣೆ ಪಂದ್ಯದಲ್ಲೇ ಶತಕ ಬಾರಿಸಿದ್ದಾರೆ. ಆದರೆ ಎರಡೂ ಐಸಿಸಿ ಪಂದ್ಯಾವಳಿಗಳ ಪದಾರ್ಪಣೆ ಪಂದ್ಯದಲ್ಲಿ ಶತಕ ಗಳಿಸಿದ್ದು ರಚಿನ್ ರವೀಂದ್ರ ಮಾತ್ರ.

Rachin Ravindra: ಶತಕ ಬಾರಿಸಿ ವಿಶ್ವ ದಾಖಲೆ ಬರೆದ ರಚಿನ್‌ ರವೀಂದ್ರ

Profile Abhilash BC Feb 25, 2025 9:45 AM

ರಾವಲ್ಪಿಂಡಿ: ಬಾಂಗ್ಲಾದೇಶ ವಿರುದ್ಧ ಸೋಮವಾರ ರಾತ್ರಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದ ನ್ಯೂಜಿಲ್ಯಾಂಡ್‌ನ ಎಡಗೈ ಬ್ಯಾಟರ್ ರಚಿನ್ ರವೀಂದ್ರ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಎರಡು ಐಸಿಸಿ ಪಂದ್ಯಾವಳಿಗಳ ಪದಾರ್ಪಣ ಪಂದ್ಯದಲ್ಲಿ ಶತಕ ಗಳಿಸಿದ ವಿಶ್ವದ ಮೊದಲ ಬ್ಯಾಟರ್‌ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಪದಾರ್ಪಣ ಪಂದ್ಯದಲ್ಲಿ ರಚಿನ್ ಶತಕ ಸಿಡಿಸಿದ್ದರು. ಇದೀಗ ಚಾಂಪಿಯನ್ಸ್ ಟ್ರೋಫಿಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲೇ ಶತಕ ಸಿಡಿಸುವ ಮೂಲಕ ಎರಡು ಐಸಿಸಿ ಪಂದ್ಯಾವಳಿಗಳ ಪದಾರ್ಪಣೆ ಪಂದ್ಯದಲ್ಲೂ ಈ ಸಾಧನೆ ಮಾಡಿದ ವಿಶ್ವದ ಏಕೈಕ ಕ್ರಿಕೆಟಿಗ ಎನಿಸಿಕೊಂಡರು.

ವಿಶ್ವದ 19 ಬ್ಯಾಟರ್‌ಗಳು ಏಕದಿನ ವಿಶ್ವಕಪ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲೇ ಶತಕ ಸಿಡಿಸಿದ್ದಾರೆ. ಹಾಗೆಯೇ 15 ಬ್ಯಾಟರ್‌ಗಳು ಚಾಂಪಿಯನ್ಸ್ ಟ್ರೋಫಿಯ ಪದಾರ್ಪಣೆ ಪಂದ್ಯದಲ್ಲೇ ಶತಕ ಬಾರಿಸಿದ್ದಾರೆ. ಆದರೆ ಎರಡೂ ಐಸಿಸಿ ಪಂದ್ಯಾವಳಿಗಳ ಪದಾರ್ಪಣೆ ಪಂದ್ಯದಲ್ಲಿ ಶತಕ ಗಳಿಸಿದ್ದು ರಚಿನ್ ರವೀಂದ್ರ ಮಾತ್ರ.

ಗಾಯದ ಸಮಸ್ಯೆಯಿಂದಾಗಿ ರಚಿನ್‌ ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲಿ ಆಡಿರಲಿಲ್ಲ. ಗಾಯದಿಂದ ಚೇತರಿಸಿಕೊಂಡು ಬಾಂಗ್ಲಾ ವಿರುದ್ಧ ಕಣಕ್ಕಿಳಿದ ಅವರು, ತಾಳ್ಮೆಯುತ ಬ್ಯಾಟಿಂಗ್‌ ನಡೆಸಿ ಕೇವಲ 105 ಎಸೆತಗಳಲ್ಲಿ 112 ರನ್ ಗಳಿಸಿದರು. ಅವರ ಈ ಶತಕದ ನೆರವಿನಿಂದ ಕಿವೀಸ್‌ 5 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿ ಸೆಮಿಫೈನಲ್‌ ಪ್ರವೇಶಿಸಿತು.

ಇದನ್ನೂ ಓದಿ NZ vs BAN: ಬಾಂಗ್ಲಾಗೆ ಮಣ್ಣು ಮುಕ್ಕಿಸಿದ ಕಿವೀಸ್‌, ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಭಾರತ!

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ಬಾಂಗ್ಲಾದೇಶ 9 ವಿಕೆಟ್‌ಗೆ 236 ರನ್ ಬಾರಿಸಿತು. ಗುರಿ ಬೆನ್ನತ್ತಿದ ನ್ಯೂಜಿಲೆಂಡ್ 46.1 ಓವರ್‌ಗಳಲ್ಲಿ 5 ವಿಕೆಟ್ ಮಷ್ಟಕ್ಕೆ 240 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ಕಿವೀಸ್‌ ತನ್ನ ಅಂತಿಮ ಲೀಗ್‌ ಪಂದ್ಯವನ್ನು ಮಾ.2 ರಂದು ಭಾರತ ವಿರುದ್ಧ ಆಡಲಿದೆ. ಇತ್ತಂಡಗಳ ಈ ಹಣಾಹಣಿಯಲ್ಲಿ ಯಾರೇ ಗೆದ್ದರೂ 'ಎ ಗುಂಪಿನ ಟೇಬಲ್‌ ಟಾಪರ್‌ ಆಗಲಿದ್ದಾರೆ.