ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rahul Gandhi: ಸ್ಯಾನಿಟರ್‌ ಪ್ಯಾಡ್‌ನಲ್ಲೂ ರಾಹುಲ್‌ ಗಾಂಧಿ ಫೋಟೋ! ಏನಿದು ವೈರಲ್‌ ಪೋಸ್ಟ್‌?

Rahul Gandhi’s Morphed Image: ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ವೀಡಿಯೊಗಳು ಮತ್ತು ಚಿತ್ರಗಳಲ್ಲಿ ರಾಹುಲ್ ಗಾಂಧಿಯವರ ಫೋಟೋವನ್ನು ಸ್ಯಾನಿಟರಿ ಪ್ಯಾಡ್‌ನಲ್ಲಿ ಅಂಟಿಸಲಾಗಿದೆ ಮತ್ತು ಬಿಹಾರದಲ್ಲಿ ಪಕ್ಷದ ಪ್ರಿಯದರ್ಶಿನಿ ಉಡಾನ್ ಯೋಜನೆಯಡಿಯಲ್ಲಿ ವಿತರಿಸಲಾಗಿದೆ ಎಂದು ತೋರಿಸಲಾಗಿದೆ.

ಸ್ಯಾನಿಟರ್‌ ಪ್ಯಾಡ್‌ನಲ್ಲೂ ರಾಹುಲ್‌ ಗಾಂಧಿ ಫೋಟೋ?

Profile Rakshita Karkera Jul 7, 2025 10:52 AM

ಬೆಂಗಳೂರು: ಸ್ಯಾನಿಟರಿ ಪ್ಯಾಡ್‌ಗಳಲ್ಲಿ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi)ಯವರ ಮಾರ್ಫಿಂಗ್ ಮತ್ತು ನಕಲಿ ಚಿತ್ರಗಳನ್ನು ರಚಿಸಿ ಅದನ್ನು ವೈರಲ್‌ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ವೀಡಿಯೊಗಳು ಮತ್ತು ಚಿತ್ರಗಳಲ್ಲಿ ರಾಹುಲ್ ಗಾಂಧಿಯವರ ಫೋಟೋವನ್ನು ಸ್ಯಾನಿಟರಿ ಪ್ಯಾಡ್‌ನಲ್ಲಿ ಅಂಟಿಸಲಾಗಿದೆ ಮತ್ತು ಬಿಹಾರದಲ್ಲಿ ಪಕ್ಷದ ಪ್ರಿಯದರ್ಶಿನಿ ಉಡಾನ್ ಯೋಜನೆಯಡಿಯಲ್ಲಿ ವಿತರಿಸಲಾಗಿದೆ ಎಂದು ತೋರಿಸಲಾಗಿದೆ.

ಈ ಕುರಿತು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಮಾಹಿತಿ ನೀಡಿದ್ದು, ನಕಲಿ ವೀಡಿಯೊ ರಚಿಸಲು ರಾಹುಲ್ ಗಾಂಧಿಯವರ ಚಿತ್ರವನ್ನು ಸೃಷ್ಟಿಸಿರುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ಭಾಗಿಯಾಗಿರುವ ಇತರರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತೆ ಪ್ರಿಯಾಂಕಾ ದೇವಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ರತನ್ ರಂಜನ್ ಮತ್ತು ಅರುಣ್ ಕೋಶಿಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಬಿಹಾರ ಮೂಲದವರಾಗಿದ್ದು, ರಾಹುಲ್ ಗಾಂಧಿಯವರ ಚಿತ್ರವನ್ನು ಮಾರ್ಫಿಂಗ್ ಮಾಡಿ ಸ್ಯಾನಿಟರಿ ಪ್ಯಾಡ್‌ನಲ್ಲಿ ಸೃಷ್ಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕೃತ್ಯವು ಸುಳ್ಳು ಮಾಹಿತಿಯನ್ನು ಹರಡಲು, ಮಾನಹಾನಿ ಮಾಡುವ ಮತ್ತು ಸ್ತ್ರೀಯರನ್ನು ಅವಮಾನಿಸುವ ಉದ್ದೇಶದಿಂದ ಮಾಡಲಾಗಿದೆ. ಕೇವಲ ಇದನ್ನು ಸೃಷ್ಟಿಸಿದವರು ಮಾತ್ರವಲ್ಲದೇ ಇದನ್ನು ರೀಪೋಸ್ಟ್‌ ಅಥವಾ ಶೇರ್‌ ಮಾಡಿದವರ ವಿರುದ್ಧ ಕಠಿಣ ಕ್ರಮಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಈ ಸುದ್ದಿಯನ್ನೂ ಓದಿ: Vaishnavi Gowda: ಮನಾಲಿಯಲ್ಲಿ ಪತಿ ಜತೆ ನಟಿ ವೈಷ್ಣವಿ ಗೌಡ ಫುಲ್ ಮಸ್ತಿ: ವೈರಲ್ ಆಗ್ತಿದೆ ಫೋಟೋಸ್

ಅಷ್ಟಕ್ಕೂ ನಡೆದಿದ್ದೇನು?

ಬಿಹಾರದಲ್ಲಿ ಕಾಂಗ್ರೆಸ್ ಮುಟ್ಟಿನ ನೈರ್ಮಲ್ಯದ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಮಹಿಳೆಯರಿಗೆ ವಿತರಿಸಲು ಉದ್ದೇಶಿಸಿರುವ ಉಚಿತ ಸ್ಯಾನಿಟರಿ ಪ್ಯಾಡ್‌ಗಳಲ್ಲಿ ರಾಹುಲ್ ಗಾಂಧಿಯವರ ಫೋಟೋ ಇರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿತ್ತು. ಕಾಂಗ್ರೆಸ್‌ ಮಹಿಳೆಯರ ಋತುಸ್ರಾವದ ವಿಚಾರದಲ್ಲೂ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆಕ್ರೋಶ ಹೊರಹಾಕಿತ್ತು.