ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Death Sentence: ಪ್ರೇಮ ವಿವಾಹಕ್ಕೆ ಸಂಬಂಧಿಸಿ ಐವರನ್ನು ಕೊಂದ ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ

ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರ ವಾದ, ಪ್ರತಿವಾದ ಪರಿಶೀಲಿಸಿ ಮೂವರಿಗೆ ಮರಣ ದಂಡನೆ ಹಾಗೂ ತಲಾ 47 ಸಾವಿರ ರೂ.ದಂಡ ಹಾಗೂ 9 ಜನರಿಗೆ ಜೀವಾವಧಿ ಶಿಕ್ಷೆ ಜೊತೆಗೆ ತಲಾ 97,500 ರೂ.ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರೇಮ ವಿವಾಹದಿಂದ ದ್ವೇಷ: 5 ಜನರ ಕೊಂದ ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ

ಸಾಮೂಹಿಕ ಕಗ್ಗೊಲೆ ಆರೋಪಿಗಳು

ಹರೀಶ್‌ ಕೇರ ಹರೀಶ್‌ ಕೇರ Apr 9, 2025 8:52 AM

ರಾಯಚೂರು: ಜಿಲ್ಲೆಯ (Raishuru news) ಸಿಂಧನೂರಿನಲ್ಲಿ (Sindhanuru) ನಡೆದ ಐವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಕೊಲೆಪಾತಕಿಗಳಿಗೆ ನ್ಯಾಯಾಲಯ ಗಲ್ಲು ಶಿಕ್ಷೆ (Death sentence) ವಿಧಿಸಿದೆ. ಇನ್ನೂ 9 ಮಂದಿಗೆ ಜೀವಾವಧಿ (Life imprisonment) ಶಿಕ್ಷೆಯನ್ನು ವಿಧಿಸಲಾಗಿದೆ. ಸಿಂಧನೂರಿನ ಸುಕಾಲಪೇಟೆಯಲ್ಲಿ 2020ರಲ್ಲಿ ನಡೆದಿದ್ದ ಐವರ ಕೊಲೆ ಪ್ರಕರಣ (sindhanur mass murder case) ರಾಯಚೂರು (Raichur news) ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣ ಸಂಬಂಧ ಕೋರ್ಟ್ ತೀರ್ಪು ನೀಡಿದ್ದು, ಐವರ ಕೊಲೆ ಹಾಗೂ ಇಬ್ಬರ ಕೊಲೆ ಯತ್ನ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮರಣದಂಡನೆ (death sentence) ಹಾಗೂ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ (Life imprisonment) ಹಾಗೂ ದಂಡ ವಿಧಿಸಿದೆ.

ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರ ವಾದ, ಪ್ರತಿವಾದ ಪರಿಶೀಲಿಸಿ ಮೂವರಿಗೆ ಮರಣ ದಂಡನೆ ಹಾಗೂ ತಲಾ 47 ಸಾವಿರ ರೂ.ದಂಡ ಹಾಗೂ 9 ಜನರಿಗೆ ಜೀವಾವಧಿ ಶಿಕ್ಷೆ ಜೊತೆಗೆ ತಲಾ 97,500 ರೂ.ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. A-1 ಆರೋಪಿ ಸಣ್ಣ ಫಕೀರಪ್ಪ, A- 2 ಅಂಬಣ್ಣ, A-3 ಸೋಮಶೇಖರ್ ಗೆ ಗಲ್ಲು ಶಿಕ್ಷೆಯಾಗಿದ್ದರೆ, ಇನ್ನುಳಿದಂತೆ A- 4 ರೇಖಾ, A-5 ಗಂಗಮ್ಮ, A- 6 ದೊಡ್ಡ ಫಕೀರಪ್ಪ, A-7 ಹನುಮಂತ, A-8 ಹೊನ್ನೂರಪ್ಪ, A-9 ಬಸಲಿಂಗಪ್ಪ, A- 10 ಅಮರೇಶ್,A- 11- ಶಿವರಾಜ್, A- 12 ಪರಸಪ್ಪಗೆ ಜೀವಾವಧಿ ಶಿಕ್ಷೆ ಜೊತೆ ದಂಡ ವಿಧಿಸಲಾಗಿದೆ.

ಪ್ರಕರಣದ ಹಿನ್ನೆಲೆ

ನಗರದ ಸುಕಾಲಪೇಟೆಯ ಈರಪ್ಪ ಅವರ ಪುತ್ರ ಮೌನೇಶ್, ಅದೇ ಏರಿಯಾದ ಸಣ್ಣ ಫಕೀರಪ್ಪನ ಪುತ್ರಿ ಮಂಜುಳಾ ಎನ್ನುವರು ಪರಸ್ಪರ ಪ್ರೀತಿಸಿದ್ದರು. ಆದರೆ ಇಬ್ಬರ ಪ್ರೀತಿಗೆ ಯುವತಿ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಸಹ ಮೌನೇಶ್ ಹಾಗೂ ಮಂಜುಳಾ ಮದುವೆಯಾಗಿದ್ದರು. ಇದು ಯುವತಿ ಮನೆಯವರ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರತಿ ದಿನ ಎರಡೂ ಕುಟುಂಬಗಳ ನಡುವೆ ವಾಗ್ವಾದ, ಜಗಳ ನಡೆಯುತ್ತಲೇ ಇದ್ದವು.

ಆರೋಪಿಗಳು 2020ರ ಜುಲೈ 11ರಂದು ಸಂಜೆ ಸಿಂಧನೂರು ನಗರದ ಸುಕಾಲಪೇಟೆಯ ಹಿರೇಲಿಂಗೇಶ್ವರ ಕಾಲೊನಿಯಲ್ಲಿಈರಪ್ಪನ ಮನೆಗೆ ನುಗ್ಗಿ ಸಿಕ್ಕಿಸಿಕ್ಕವರ ಮೇಲೆ ದೊಣ್ಣೆ, ಕೊಡಲಿ, ಮಚ್ಚುಗಳಿಂದ ದಾಳಿ ಮಾಡಿದ್ದು, ಈರಪ್ಪ, ಆತನ ಪತ್ನಿ ಸುಮಿತ್ರಮ್ಮ, ಮಕ್ಕಳಾದ ನಾಗರಾಜ, ಹನುಮೇಶ ಹಾಗೂ ಮಗಳಾದ ಶ್ರೀದೇವಿ ಅವರನ್ನು ಕೊಲೆ ಮಾಡಿದ್ದರು. ಅಲ್ಲದೇ ಮೃತ ಈರಪ್ಪನ ಸೊಸೆಯಾದ ರೇವತಿ ಹಾಗೂ ಆತನ ಮಗಳಾದ ತಾಯಮ್ಮ ಮೇಲೂ ಮಾರಾಣಾಂತಿಕೆ ಹಲ್ಲೆ ಮಾಡಿ ಕೊಲೆ ಮಾಡಲು ಪ್ರಯತ್ನಿಸಿದ್ದರು. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕಿಯರ ದಾರುಣ ಸಾವು