ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

ದಕ್ಷಿಣ ಆಫ್ರಿಕಾ-ಆಸೀಸ್‌ ಪಂದ್ಯಕ್ಕೆ ಮಳೆ ಅಡ್ಡಿ; ರದ್ದಾದರೆ ಅಂಕ ಹಂಚಿಕೆ ಹೇಗೆ?

ಎರಡು ಸೆಮಿ ಫೈನಲ್‌ ಸೇರಿ ಫೈನಲ್‌ ಪಂದ್ಯಕ್ಕೆ ಮಾತ್ರ ಮೀಸಲು ದಿನ ನಿಗದಿಯಾಗಿದೆ. ಲೀಗ್‌ ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ನಿಗದಿತ ಸಮಯದಲ್ಲಿ ಪಂದ್ಯ ನಡೆಸಲು ಆಗದಿದ್ದರೆ ಪಂದ್ಯವನ್ನು ರದ್ದು ಎಂದು ಘೋಷಿಸಲಾಗುತ್ತದೆ. ಜತೆಗೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ.

SA vs AUS: ಭಾರೀ ಮಳೆ, ಟಾಸ್ ಪ್ರಕ್ರಿಯೆ ವಿಳಂಬ

Profile Abhilash BC Feb 25, 2025 2:51 PM

ರಾವಲ್ಪಿಂಡಿ: ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದು ಟಾಸ್ ಪ್ರಕ್ರಿಯೆ ವಿಳಂಬಗೊಂಡಿದೆ. ಸದ್ಯ ಮಳೆ ನಿಲ್ಲುವ ಯಾವುದೇ ಸೂಚನೆ ಕಾಣುತ್ತಿಲ್ಲ. ಮಳೆ ನಿಂತರೂ ಕೂಡ ಆಟಕ್ಕೆ ಯೋಗ್ಯವಾಗುವ ರೀತಿಯಲ್ಲಿ ಇಲ್ಲಿ ಮೈದಾನವನ್ನು ಸಿದ್ಧಪಡಿಸುವ ಉಪಕರಣ ಕೂಡ ಇಲ್ಲದ ಕಾರಣದಿಂದ ರದ್ದಾಗುವ ಸಾಧ್ಯತೆ ಇದೆ. ಒಂದೊಮ್ಮೆ ಪಂದ್ಯ ರದ್ದಾದರೆ ಐಸಿಸಿ ಮಳೆ ನಿಯಮ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ.

ಎರಡು ಸೆಮಿ ಫೈನಲ್‌ ಸೇರಿ ಫೈನಲ್‌ ಪಂದ್ಯಕ್ಕೆ ಮಾತ್ರ ಮೀಸಲು ದಿನ ನಿಗದಿಯಾಗಿದೆ. ಲೀಗ್‌ ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ನಿಗದಿತ ಸಮಯದಲ್ಲಿ ಪಂದ್ಯ ನಡೆಸಲು ಆಗದಿದ್ದರೆ ಪಂದ್ಯವನ್ನು ರದ್ದು ಎಂದು ಘೋಷಿಸಲಾಗುತ್ತದೆ. ಜತೆಗೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ.



ಮುಖಾಮುಖಿ

ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಇದುವರೆಗೂ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 110 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಆಸ್ಟ್ರೇಲಿಯಾ 55 ಪಂದ್ಯ ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 51 ಪಂದ್ಯ ಜಯಿಸಿದೆ. ಮೂರು ಪಂದ್ಯ ಟೈ ಆಗಿದ್ದರೆ, ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.

ಸಂಭಾವ್ಯ ತಂಡಗಳು

ದಕ್ಷಿಣ ಆಫ್ರಿಕಾ: ರಿಯಾನ್ ರಿಕೆಲ್ಟನ್ (ವಿ.ಕೀ), ಟೋನಿ ಡಿ ಜೋರ್ಜಿ, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ.

ಆಸ್ಟ್ರೇಲಿಯಾ: ಮ್ಯಾಥ್ಯೂ ಶಾರ್ಟ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಶೇನ್‌, ಜೋಶ್ ಇಂಗ್ಲಿಸ್ (ವಿ.ಕೀ.), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ಸ್ಪೆನ್ಸರ್ ಜಾನ್ಸನ್.