Karnataka weather: ನಾಳೆ ದಕ್ಷಿಣ ಕನ್ನಡ, ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಅಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 19°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ


ಬೆಂಗಳೂರು: ರಾಜ್ಯದ ಬಹುತೇಕ ಕಡೆ ಶನಿವಾರ ಒಣ ಹವೆಯ (weather Forecast) ವಾತಾವರಣವಿತ್ತು. ಇನ್ನು ಮಾ.17ರಂದು ದಕ್ಷಿಣ ಕನ್ನಡ, ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಕರ್ನಾಟಕದ ಒಳನಾಡಿನಲ್ಲಿ 30-40 ಕಿಮೀ ವೇಗದ ಗಾಳಿಯು ಮೇಲುಗೈ ಸಾಧಿಸಲಿದ್ದು, ಉತ್ತರ ಕರ್ನಾಟಕದ ಭಾಗದಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಅಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 19°C ಇರುವ ಸಾಧ್ಯತೆ ಇದೆ.
ಇನ್ನು ಮಾ.18ರಿಂದ 22ರವರೆಗೆ ರಾಜ್ಯದಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಪೈಕಿ ಮಾ.18 ಮತ್ತು 19ರಂದು ಬಿಸಿ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮುಂದಿನ 5 ದಿನಗಳಲ್ಲಿಉತ್ತರ ಅಂತರಿಕ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್‌ವರೆಗೆ ಕ್ರಮೇಣ ಏರಿಕೆಯಾಗಲಿದೆ. ಅದೇ ರೀತಿ ದಕ್ಷಿಣ ಅಂತರಿಕ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಏರಿಕೆ ಕಂಡುಬರಲಿದೆ.
ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು
ರಾಜ್ಯದ ಬಯಲು ಸೀಮೆಯಲ್ಲಿ ಶನಿವಾರ ಕಲಬುರಗಿಯಲ್ಲಿ ಗರಿಷ್ಠ 39.80 ಡಿ.ಸೆ. ತಾಪಮಾನ ದಾಖಲಾಗಿದೆ. ದಾವಣಗೆರೆ ಮತ್ತು ಚಾಮರಾಜನಗರದಲ್ಲಿ ಕನಿಷ್ಠ ಕನಿಷ್ಠ ತಾಪಮಾನ 16 ಡಿ.ಸೆ. ತಾಪಮಾನ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Health Tips: ದೇಹದಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಿಸಲು ಈ ಆಹಾರ ತ್ಯಜಿಸಿ!