#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Rakesh Rathore: ಪ್ರೆಸ್‌ಮೀಟ್‌ ನಡುವೆಯೇ ಕಾಂಗ್ರೆಸ್‌ ಸಂಸದನನ್ನು ಎಳೆದೊಯ್ದ ಪೊಲೀಸರು

ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಸೀತಾಪುರ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧನದ ಬಳಿಕ ಬಿಗಿ ಭದ್ರತೆಯೊಂದಿಗೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಜನವರಿ 17 ರಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.

ಪ್ರೆಸ್‌ಮೀಟ್‌ ನಡುವೆಯೇ ಕಾಂಗ್ರೆಸ್‌ ಸಂಸದ ಅರೆಸ್ಟ್‌!

Rakesh Rathore

Profile Deekshith Nair Jan 30, 2025 4:10 PM

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ(Uttar Pradesh) ಸೀತಾಪುರ(Sitapur) ಕ್ಷೇತ್ರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್(Rakesh Rathore) ಅವರನ್ನು ಇಂದು (ಜ.30) ಬಂಧಿಸಲಾಗಿದೆ. ಬಂಧನದ ಬಳಿಕ ಬಿಗಿ ಭದ್ರತೆಯೊಂದಿಗೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಜನವರಿ 17 ರಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.

ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರಾಕೇಶ್‌ ರಾಥೋಡ್‌ ಅವರನ್ನು ಪೊಲೀಸರು ಪತ್ರಿಕಾಗೋಷ್ಠಿ ನಡೆಸುತ್ತಿರುವಾಗಲೇ ಅಲ್ಲಿಗೆ ಬಂದ ಪೊಲೀಸರು ಅವರನ್ನು ಅರೆಸ್ಟ್‌ ಮಾಡಲಾಗಿದೆ. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಥೋಡ್ ಅವರು ಸೀತಾಪುರದ ಎಂಪಿಎಂಎಲ್‌ಎ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಜನವರಿ 23ರಂದು ತಿರಸ್ಕರಿಸಿತ್ತು.



ಬಳಿಕ ರಾಥೋಡ್ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ. ಲಖನೌ ಪೀಠ ಕೂಡ ಬುಧವಾರ ಅವರ ಅರ್ಜಿಯನ್ನು ತಿರಸ್ಕರಿಸಿ, ಶರಣಾಗುವಂತೆ ಸೂಚನೆ ನೀಡಿತ್ತು.

ಈ ಸುದ್ದಿಯನ್ನೂ ಓದಿ:Crime News: ತನ್ನ ಸಹಪಾಠಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲು ಸುಪಾರಿ ಕೊಟ್ಟ 7ನೇ ತರಗತಿ ವಿದ್ಯಾರ್ಥಿ!

ವಿವಾಹವಾಗುವಂತೆ ಭರವಸೆ ನೀಡಿದ ರಾಕೇಶ್ ರಾಥೋಡ್, ಕಳೆದ ನಾಲ್ಕು ವರ್ಷಗಳಿಂದ ತನ್ನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ರಾಥೋಡ್‌ ವಿರುದ್ಧ ಲೈಂಗಿಕ ಶೋಷಣೆ ಮತ್ತು ಬೆದರಿಕೆಯ ಪ್ರಕರಣ ದಾಖಲಾಗಿತ್ತು. ಮಹಿಳೆಯು ಕರೆ ವಿವರ ಹಾಗೂ ಕರೆ ರೆಕಾರ್ಡಿಂಗ್‌ಗಳನ್ನು ಸಹ ಪೊಲೀಸರಿಗೆ ನೀಡಿದ್ದಾರೆ. ಕಳೆದ ವಾರ, ಮಹಿಳೆಯ ಪತಿ ಕೂಡ ಐವರ ವಿರುದ್ಧ ಪ್ರತ್ಯೇಕ ದೂರು ದಾಖಲಿಸಿದ್ದಾರೆ. ರಾಥೋಡ್ ಮತ್ತು ಅವರ ಮಗ ದೂರು ವಾಪಸ್‌ ಪಡೆಯುವಂತೆ ಕುಟುಂಬದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ಪ್ರಕಾರ, ಜನವರಿ 15 ರಂದು ಮಹಿಳೆ ಸಂಸದರ ವಿರುದ್ಧ ದೂರು ದಾಖಲಿಸಿದ್ದಾರೆ. ರಾಥೋಡ್ 2018 ರಲ್ಲಿ ಬಿಜೆಪಿ ಶಾಸಕರಾಗಿದ್ದ ವೇಳೆಯಲ್ಲಿ ಮಹಿಳೆಯ ಸಂಪರ್ಕಕ್ಕೆ ಬಂದಿದ್ದರು. ಮಹಿಳೆಗೆ ರಾಜಕೀಯ ಮಾರ್ಗದರ್ಶನವನ್ನು ನೀಡುವುದಾಗಿ ಮಾರ್ಚ್ 2020 ರಲ್ಲಿ ಮನೆಗೆ ಕರಸಿಕೊಂಡು, ನಂತರ ಅವಳನ್ನು ಮನೆಯ ಒಳಗೆ ಲಾಕ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಮಹಿಳೆ ದಾಖಲಿಸಿದ್ದಾಳೆ. ಇನ್ನು ಶೋಷಣೆಯನ್ನು ಅವಳು ವಿರೋಧಿಸಿದಾಗ, ರಾಜಕೀಯ ಪ್ರಭಾವನ್ನು ಬಳಸಿ ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ.