ರಣಜಿ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ; ರಾಹುಲ್‌ ಅಲಭ್ಯ

Ranji Trophy: ‘ಸಿ’ ಗುಂಪಿನಲ್ಲಿರುವ ಕರ್ನಾಟಕ ಆಡಿರುವ 5 ಪಂದ್ಯಗಳಲ್ಲಿ ಕೇವಲ 1ರಲ್ಲಿ ಗೆದ್ದಿದ್ದು, ಇನ್ನೆರಡು ಪಂದ್ಯಗಳನ್ನು ಗೆದ್ದರೂ ನಾಕೌಟ್‌ ಪ್ರವೇಶಿಸುವ ಸಾಧ್ಯತೆ ಕಡಿಮೆ.

KL Rahul (24)
Profile Abhilash BC Jan 21, 2025 9:08 AM

ಬೆಂಗಳೂರು: ಗುರುವಾರದಿಂದ(ಜ.23) ಬೆಂಗಳೂರಿನಲ್ಲಿ ಆರಂಭಗೊಳ್ಳಲಿರುವ ರಣಜಿ ಟ್ರೋಫಿ(Ranji Trophy) ದ್ವಿತೀಯ ಸುತ್ತಿನ ಪಂದ್ಯದಲ್ಲಿ ಪಂಜಾಬ್‌ ವಿರುದ್ಧದ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟಿಸಲಾಗಿದೆ. ಮಯಾಂಕ್‌ ಅಗರ್ವಾಲ್‌ ನಾಯಕತ್ವ ವಹಿಸಲಿದ್ದು, ಶ್ರೇಯಸ್‌ ಗೋಪಾಲ್‌ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ನಿರೀಕ್ಷೆಯಂತೆ ಕೆ.ಎಲ್‌ ರಾಹುಲ್‌(KL Rahul) ಅಲಭ್ಯರಾಗಿದ್ದಾರೆ. ರಾಹುಲ್‌ ಮೊಣಕೈ ನೋವಿನಿಂದ ಬಳಲುತ್ತಿದ್ದು, ಈ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡಕ್ಕೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ದೇವದತ್‌ ಪಡಿಕ್ಕಲ್‌, ವೇಗಿ ಪ್ರಸಿದ್ಧ್‌ ಕೃಷ್ಣ ಹಾಗೂ ಯುವ ಬ್ಯಾಟರ್‌ ಅನೀಶ್‌ ಕೆ.ವಿ. ತಂಡಕ್ಕೆ ಮರಳಿದ್ದಾರೆ. ಆದರೆ ಮೊದಲ ಹಂತದಲ್ಲಿ ತಂಡದಲ್ಲಿದ್ದ ಮನೀಶ್‌ ಪಾಂಡೆ, ಕಿಶನ್‌ ಬೆದರೆಗೆ ಅವರನ್ನು ತಂಡದಿಂದ ಕೈಬಿಡಲಾಗಿದೆ. ‘ಸಿ’ ಗುಂಪಿನಲ್ಲಿರುವ ಕರ್ನಾಟಕ ಆಡಿರುವ 5 ಪಂದ್ಯಗಳಲ್ಲಿ ಕೇವಲ 1ರಲ್ಲಿ ಗೆದ್ದಿದ್ದು, ಇನ್ನೆರಡು ಪಂದ್ಯಗಳನ್ನು ಗೆದ್ದರೂ ನಾಕೌಟ್‌ ಪ್ರವೇಶಿಸುವ ಸಾಧ್ಯತೆ ಕಡಿಮೆ.

ಕರ್ನಾಟಕ ತಂಡ

ಮಯಾಂಕ್‌ ಅಗರ್ವಾಲ್‌(ನಾಯಕ), ಶ್ರೇಯಸ್‌(ಉಪನಾಯಕ), ದೇವದತ್‌, ಅನೀಶ್‌, ಸ್ಮರಣ್‌, ಶ್ರೀಜಿತ್‌, ಅಭಿನವ್‌ ಮನೋಹರ್‌, ಹಾರ್ದಿಕ್‌ ರಾಜ್‌, ಪ್ರಸಿದ್ಧ್‌ ಕೃಷ್ಣ, ಕೌಶಿಕ್‌, ಅಭಿಲಾಶ್‌ ಶೆಟ್ಟಿ, ಯಶೋವರ್ಧನ್‌, ನಿಕಿನ್ ಜೋಸ್‌, ವಿದ್ಯಾಧರ್‌ ಪಾಟೀಲ್‌, ಸುಜಯ್‌ ಸತೇರಿ, ಮೊಹ್ಸಿನ್ ಖಾನ್‌.

ಇದನ್ನೂ ಓದಿ IPL 2025: ಲಕ್ನೋ ತಂಡದ ನಾಯಕನಾದ ರಿಷಭ್‌ ಪಂತ್‌

ರೋಹಿತ್‌ ಜಮ್ಮುಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಕಣಕಿಳಿಯಲಿದ್ದಾರೆ. ಇದು 10 ವರ್ಷದ ಬಳಿಕ ಅವರು ಆಡುವ ದೇಶೀಯ ಕ್ರಿಕೆಟ್‌ ಪಂದ್ಯವಾಗಿದೆ. ಮುಂಬೈ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಎಡಗೈ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌ ಕೂಡ ತಂಡದಲ್ಲಿದ್ದಾರೆ. ಹಿರಿಯ ಆಲ್‌ರೌಂಡರ್‌ ರವೀಂದ್ರ ಜಡೇಜಾ(Ravindra Jadeja) ಸೌರಾಷ್ಟ್ರ ಪರ ಆಡಲಿದ್ದಾರೆ. ರಿಷಭ್‌ ಪಂತ್‌ ಡೆಲ್ಲಿ ಪರ, ಮೊಹಮ್ಮದ್‌ ಸಿರಾಜ್‌ ಹೈದರಾಬಾದ್‌ ಪರ, ಶುಭಮನ್‌ ಗಿಲ್‌ ಪಂಜಾಬ್‌ ಪರ ಆಡಲಿದ್ದಾರೆ. ಡೆಲ್ಲಿ ತಂಡದಲ್ಲಿ ವಿರಾಟ್‌ ಕೊಹ್ಲಿ ಸ್ಥಾನ ಪಡೆದಿದ್ದರೂ ಕೊನೆಯ ಕ್ಷಣದಲ್ಲಿ ಅವರು ಕುತ್ತಿಗೆ ನೋವಿನ ಕಾರಣ ನೀಡಿ ಆಡುದಿಲ್ಲ ಎಂದಿದ್ದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?