ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಕೊಣನಕಟ್ಟೆ ಗ್ರಾಮದ ತೋಟವೊಂದರಲ್ಲಿ ಶುಕ್ರವಾರ ನಡೆದ ಕಾಡಾನೆ ದಾಳಿಯಿಂದ (Kodagu Elephant Attack) ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಕೇಂದ್ರ ಸರ್ಕಾರ RAW ಐಜಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ (51) ಅವರು ಮೃತಪಟ್ಟಿದ್ದಾರೆ.
ಸಂಧ್ಯಾ ಅಚ್ಚಯ್ಯ ಅವರು ಸಂಬಂಧಿಕರ ಮನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಳಿಕ ಅವರು ಇವರೂ ಸೇರಿ ಐದು ಜನರ ಗುಂಪು ಸ್ಥಳೀಯ ಕಾಫಿ ತೋಟ ವೀಕ್ಷಿಸಲು ಭೇಟಿ ನೀಡಿತ್ತು. ಈ ವೇಳೆ ತೋಟದಲ್ಲಿದ್ದ ಒಂಟಿ ಆನೆಯೊಂದು ಏಕಾಏಕಿ ಇವರ ಗುಂಪಿನತ್ತ ನುಗ್ಗಿ ಭೀಕರವಾಗಿ ದಾಳಿ ನಡೆಸಿದೆ.
ಆನೆ ನುಗ್ಗುತ್ತಿದ್ದಂತೆ ಆತಂಕಗೊಂಡ ಉಳಿದ ನಾಲ್ವರು ಅಲ್ಲಿಂದ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ, ದುರದೃಷ್ಟವಶಾತ್ ಸಂಧ್ಯಾ ಅಚ್ಚಯ್ಯ ಅವರು ಆನೆಗೆ ಸಿಲುಕಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಡಗಿನಲ್ಲಿ ಕಾಡಾನೆ ದಾಳಿಗೆ ಹಿರಿಯ ಐಪಿಎಸ್ ಅಧಿಕಾರಿ ಪತ್ನಿ ಸಾವು ಕಂಡ ಬೆನ್ನಲ್ಲಿಯೇ, ಗೋಣಿಕೊಪ್ಪದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಮೃತ ಸಂಧ್ಯಾ ಕುಂಟುಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಕಾಡಾನೆ ದಾಳಿಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.
ದಕ್ಷಿಣ ಕೊಡಗಿನ ಪರಕಟಕೇರಿ ಗ್ರಾಮದವರಾದ ಸುನಿಲ್ ಅಚ್ಚಯ್ಯ ಅವರು ದೆಹಲಿಯಲ್ಲಿ ಕೇಂದ್ರ ಸರಕಾರದ RAW ಐಜಿಯಾಗಿ ಕೆಲಸ ಮಾಡುತ್ತಿದ್ದಾರೆ. ಸುನಿಲ್ ಅವರು ಅಚ್ಚಯ್ಯ ಅವರ ಪುತ್ರರಾಗಿದ್ದು ತಾಯಿ ಬೆಲ್ಲ(ತಾಮನೆ ಅಮ್ಮಣಕುಟ್ಟಂಡ), ಪತ್ನಿ ಸಂಧ್ಯಾ (ತಾಮನೆ ಮಂಡೇಪಂಡ), ಇಬ್ಬರು ಮಕ್ಕಳೊಂದಿಗೆ ದೆಹಲಿಯಲ್ಲಿ ನೆಲೆಸಿದ್ದರು.
ರಸ್ತೆ ಕಾಮಗಾರಿ ಸ್ಥಳದಲ್ಲಿ ಮಲಗಿದ ಕಾರ್ಮಿಕ ಮಣ್ಣಿನ ರಾಶಿಗೆ ಸಿಲುಕಿ ಸಾವು; ಕೈ ಹೊರ ಬಂದಿದ್ದರಿಂದ ಬಯಲಾಯ್ತು ಘಟನೆ
ಕಾಣೆಯಾಗಿದ್ದ ಮಹಿಳೆ ಕೆರೆಯಲ್ಲಿ ಶವವಾಗಿ ಪತ್ತೆ
ಬೆಂಗಳೂರು: ಮನೆಯಿಂದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕುಂಬಳಗೋಡು ವ್ಯಾಪ್ತಿಯಲ್ಲಿ ನಡೆದಿದೆ. ಜ್ಯೋತಿ ಮೃತ ಮಹಿಳೆ ಎಂದು ತಿಳಿದುಬಂದಿದೆ.
ಜ್ಯೋತಿ ಪತಿ ಶರತ್ ಕುಮಾರ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಜ್ಯೋತಿಗೆ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಮನನೊಂದು ಜ್ಯೋತಿ ನಾಲ್ಕು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.