#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

IPL 2025: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ರಜತ್‌ ಪಾಟಿದಾರ್‌ ನಾಯಕ!

Rajat Patidar New Captain for RCB: 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ನಿಮಿತ್ತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ನೂತನ ನಾಯಕನಾಗಿ ರಜತ್‌ ಪಾಟಿದಾರ್‌ ನೇಮಕಗೊಂಡಿದ್ದಾರೆ. ಬೆಂಗಳೂರು ಫ್ರಾಂಚೈಸಿ ತನ್ನ ಅಧಿಕೃತ ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳಲ್ಲಿ ಈ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದೆ.

IPL 2025: ಆರ್‌ಸಿಬಿಗೆ ರಜತ್‌ ಪಾಟಿದಾರ್‌ ನೂತನ ನಾಯಕ!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ನೂತನ ನಾಯಕನಾಗಿ ರಜತ್‌ ಪಾಟಿದಾರ್‌ ನೇಮಕಗೊಂಡಿದ್ದಾರೆ.

Profile Ramesh Kote Feb 13, 2025 12:17 PM

ಬೆಂಗಳೂರು: ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್‌ ಎಂದೇ ಬಿಂಬಿಸಿಕೊಂಡಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಮುಂಬರುವ ಟೂರ್ನಿಯ ನಿಮಿತ್ತ ದೊಡ್ಡ ಪ್ರಕಟಣೆಯೊಂದನ್ನು ಹೊರಡಿಸಿದೆ. ಹದಿನೆಂಟನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಆರ್‌ಸಿಬಿಗೆ ನಾಯಕ ಯಾರೆಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ ರಜತ್‌ ಪಾಟಿದಾರ್‌ಗೆ (Rajat Patidar) ಆರ್‌ಸಿಬಿ ತಂಡದ ನೂತನ ನಾಯಕತ್ವವನ್ನು ನೀಡಲಾಗಿದೆ. ಈ ಸುದ್ದಿಯನ್ನು ಬೆಂಗಳೂರು ಫ್ರಾಂಚೈಸಿ ತನ್ನ ಅಧಿಕೃತ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ಬಹಿರಂಗಪಡಿಸಿದೆ.

2022ರಿಂದ 2024ರವರೆಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್‌ ಡು ಪ್ಲೆಸಿಸ್‌ ಮುನ್ನಡೆಸಿದ್ದರು. ಇವರ ನಾಯಕತ್ವದಲ್ಲಿ ಆರ್‌ಸಿಬಿ ಎರಡು ಬಾರಿ ಪ್ಲೇಆಫ್ಸ್‌ಗೆ ಲಗ್ಗೆ ಇಟ್ಟಿತ್ತು. ಆದರೆ, ಫಾಫ್‌ ನಾಯಕತ್ವದಲ್ಲಿ ಆರ್‌ಸಿಬಿ ಚೊಚ್ಚಲ ಕಪ್‌ ಗೆಲ್ಲಲು ಸಾಧ್ಯವಾಗಲಿಲ್ಲ. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಆರ್‌ಸಿಬಿ ಟೀಮ್‌ ಮ್ಯಾನೇಜ್‌ಮೆಂಟ್‌ ಇಂದೋರ್‌ ಮೂಲದ ರಜತ್‌ ಪಾಟಿದಾರ್‌ಗೆ ನಾಯಕತ್ವದ ಹೊಣೆಯನ್ನು ನೀಡಿದೆ. ಅಂದ ಹಾಗೆ 2021ರ ಐಪಿಎಲ್‌ ಟೂರ್ನಿಯ ಬಳಿಕ ರಜತ್‌ ಪಾಟಿದಾರ್‌ ಅವರನ್ನು ಆರ್‌ಸಿಬಿ ಕೈ ಬಿಟ್ಟಿತ್ತು. ಆದರೆ, ಲವನೀತ್‌ ಸಿಸೋಡಿಯಾ ಗಾಯಕ್ಕೆ ತುತ್ತಾದ ಹಿನ್ನೆಲೆಯಲ್ಲಿ ರಜತ್‌ಗೆ 2022ರ ಐಪಿಎಲ್‌ ಟೂರ್ನಿಯಲ್ಲಿ ಆಡುವ ಅದೃಷ್ಟ ಬಂದಿತ್ತು.

IPL 2025: ಆರ್‌ಸಿಬಿ ವೇಗಿ ಭುವನೇಶ್ವರ್‌ ಕುಮಾರ್‌ ಮುರಿಯಬಲ್ಲ 3 ಪ್ರಮುಖ ದಾಖಲೆಗಳು!

2022ರ ಐಪಿಎಲ್‌ ಟೂರ್ನಿಯಲ್ಲಿ ರಜತ್‌ ಪಾಟಿದಾರ್‌ ಆಡಿದ್ದ ಎಂಟು ಪಂದ್ಯಗಳಿಂದ 333 ರನ್‌ಗಳನ್ನು ಕಲೆ ಹಾಕಿದ್ದರು. ಅದರಲ್ಲಿಯೂ ವಿಶೇಷವಾಗಿ ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧ ಎಲಿಮಿನೇಟರ್‌ ಪಂದ್ಯದಲ್ಲಿ 54 ಎಸೆತಗಳಲ್ಲಿ 112 ರನ್‌ಗಳನ್ನು ಸಿಡಿಸಿದ್ದರು. ನಂತರ ಗಾಯದ ಕಾರಣ 2023ರ ಐಪಿಎಲ್‌ ಟೂರ್ನಿಯಿಂದ ರಜತ್‌ ಹೊರಗುಳಿದಿದ್ದರು. 2024ರ ಐಪಿಎಲ್‌ಗೂ ಅವರನ್ನು ಉಳಿಸಿಕೊಳ್ಳಲಾಗಿತ್ತು. ಅದರಂತೆ ಕೊನೆಯ ಸೀಸನ್‌ನಲ್ಲಿ ಅವರು ಆಡಿದ್ದ 15 ಪಂದ್ಯಗಳಿಂದ 395 ರನ್‌ಗಳನ್ನು ಸಿಡಿಸಿದ್ದರು. ಇದರಲ್ಲಿ ಅವರು 33 ಸಿಕ್ಸರ್‌ಗಳನ್ನು ಸಿಡಿಸಿದ್ದರು.



2025ರ ಐಪಿಎಲ್‌ನಲ್ಲಿ ರಜತ್‌ ಪಾಟಿದಾರ್‌ಗೆ ಸಂಬಳ ಎಷ್ಟು?

2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಮೆಗಾ ಹರಾಜಿಗೂ ಮುನ್ನ ವಿರಾಟ್‌ ಕೊಹ್ಲಿ (21 ಕೋಟಿ ರೂ. ಗಳು) ಹಾಗೂ ಯಶ್‌ ದಯಾಳ್‌ (5 ಕೋಟಿ ರೂ. ಗಳು) ಅವರ ಜೊತೆಗೆ ರಜತ್‌ ಪಾಟಿದಾರ್‌ (11 ಕೋಟಿ ರೂ.) ಅವರನ್ನು ಕೂಡ ಉಳಿಸಿಕೊಳ್ಳಲಾಗಿತ್ತು. 2008 ರಿಂದ ಇಲ್ಲಿಯವರೆಗೂ ಆರ್‌ಸಿಬಿಗೆ ರಜತ್‌ ಪಾಟಿದಾರ್‌ ಎಂಟನೇ ನಾಯಕರಾಗಿದ್ದಾರೆ. ರಾಹುಲ್‌ ದ್ರಾವಿಡ್‌, ಅನಿಲ್‌ ಕುಂಬ್ಳೆ, ಕೆವಿನ್‌ ಪೀಟರ್ಸನ್‌, ಡೇನಿಯಲ್‌ ವೆಟ್ಟೋರಿ, ವಿರಾಟ್‌ ಕೊಹ್ಲಿ, ಶೇನ್‌ ವಾಟ್ಸನ್‌ ಹಾಗೂ ಫಾಫ್‌ ಡು ಪ್ಲೆಸಿಸ್‌ ಅವರು ಆರ್‌ಸಿಬಿಯನ್ನು ಮುನ್ನಡೆಸಿದ್ದಾರೆ.



ರಜತ್‌ ಪಾಟಿದಾರ್‌ರ ಇತ್ತೀಚಿನ ಪ್ರದರ್ಶನ

2024-25ರ ಸಾಲಿನ ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟೂರ್ನಿಯಲ್ಲಿ ರಜತ್‌ ಪಾಟಿದಾರ್‌ ನಾಯಕತ್ವದಲ್ಲಿ ಮಧ್ಯ ಪ್ರದೇಶ ತಂಡ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಆದರೆ, ಮುಂಬೈ ವಿರುದ್ಧ ಸೋತು ರನ್ನರ್‌ ಅಪ್‌ಗೆ ತೃಪ್ತಿಪಟ್ಟುಕೊಂಡಿತ್ತು. ಈ ಟೂರ್ನಿಯಲ್ಲಿ ಅವರು 9 ಇನಿಂಗ್ಸ್‌ಗಳಿಂದ 428 ರನ್‌ಗಳನ್ನು ಸಿಡಿಸಿದ್ದರು. ಇದರಲ್ಲಿ ಅವರು ಐದು ಶತಕಗಳನ್ನು ಸಿಡಿಸಿದ್ದರು. ಭಾರತದ ಪರ ರಜತ್‌ ಒಂದು ಏಕದಿನ ಪಂದ್ಯ ಹಾಗೂ ಮೂರು ಟೆಸ್ಟ್‌ ಪಂದ್ಯಗಳನ್ನು ಆಡಿದ್ದಾರೆ. ಒಟ್ಟಾರೆ 75 ಟಿ20 ಪಂದ್ಯಗಳಿಂದ 38.48ರ ಸರಾಸರಿಯಲ್ಲಿ 2463 ರನ್‌ಗಳನ್ನು ಬಾರಿಸಿದ್ದಾರೆ.