ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RCB vs LSG: ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ, ಲಖನೌ ಪಂದ್ಯ ಆಡಲಿರುವ ಸ್ಟಾರ್‌ ವೇಗಿ!

RCB vs LSG: ಭುಜದ ಗಾಯದಿಂದ ಸಂಪೂರ್ಣ ಗುಣಮುಖರಾಗಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವೇಗಿ ಜಾಶ್‌ ಹೇಝಲ್‌ವುಡ್‌, ಮೇ 9 ರಂದು ಲಖನೌ ಸೂಪರ್‌ ಜಯಂಟ್ಸ್‌ ವಿರುದ್ದದ ಪಂದ್ಯಕ್ಕೆ ಲಭ್ಯರಾಗಿದ್ದಾರೆ. ಆ ಮೂಲಕ ಆರ್‌ಸಿಬಿ ವೇಗದ ಬೌಲಿಂಗ್‌ ವಿಭಾಗಕ್ಕೆ ಮತ್ತಷ್ಟು ಬಲಬಂದಂತಾಗಿದೆ.

ಹೇಝಲ್‌ವುಡ್‌ ಫಿಟ್‌, ಲಖನೌದಲ್ಲಿ ಕಣಕ್ಕೆ ಇಳಿಯಲಿರುವ ಆರ್‌ಸಿಬಿ ವೇಗಿ!

ಲಖನೌ ವಿರುದ್ಧ ಜಾಶ್‌ ಹೇಝಲ್‌ವುಡ್‌ ಆಡುವ ಸಾಧ್ಯತೆ ಇದೆ.

Profile Ramesh Kote May 8, 2025 7:59 PM

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಹಾಗೂ ಲಖನೌ ಸೂಪರ್‌ ಜಯಂಟ್ಸ್‌ (LSG) ತಂಡಗಳು ಮೇ 9 ರಂದು ಶುಕ್ರವಾರ ಲಖನೌದ ಏಕನಾ ಕ್ರೀಡಾಂಗಣದಲ್ಲಿ ನಡೆಯುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ 59ನೇ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಭುಜದ ಗಾಯದಿಂದ ಕಳೆದ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯಕ್ಕೆ ಹೇಝಲ್‌ವುಡ್‌ (Josh Hazlewood) ಅಲಭ್ಯರಾಗಿದ್ದರು. ಈ ಹಿನ್ನೆಲೆಯಲ್ಲಿ ಇವರ ಸ್ಥಾನದಲ್ಲಿ ಲಂಗಿ ಎನ್‌ಗಿಡಿ ಆಡಿದ್ದರು. ಇದೀಗ ಲಖನೌ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಪರ ಹೇಝಲ್‌ವುಡ್‌ ಕಣಕ್ಕೆ ಇಳಿಯಬಹುದು.

ಆರ್‌ಸಿಬಿ ವಿರುದ್ಧದ ಪಂದ್ಯ ಲಖನೌ ಸೂಪರ್‌ ಜಯಂಟ್ಸ್‌ ತಂಡಕ್ಕೆ ತುಂಬಾ ನಿರ್ಣಾಯಕವಾಗಿದೆ. ಈ ಪಂದ್ಯದಲ್ಲಿ ಸೋತರೆ ಎಲ್‌ಎಸ್‌ಜಿ ಪ್ಲೇಆಫ್ಸ್‌ ರೇಸ್‌ನಿಂದ ಹೊರ ಬೀಳಲಿದೆ. ಈ ಹಿನ್ನೆಲೆಯಲ್ಲಿ ಎಲ್‌ಎಸ್‌ಜಿಗೆ ಆರ್‌ಸಿಬಿ ವಿರುದ್ದದ ಪಂದ್ಯದಲ್ಲಿ ಸಾಕಷ್ಟು ಒತ್ತಡವಿದೆ. ಇನ್ನು ರಜತ್‌ ಪಾಟಿದಾರ್‌ ನಾಯಕತ್ವದ ಆರ್‌ಸಿಬಿ 16 ಅಂಕಗಳನ್ನು ಹೊಂದಿದ್ದು, ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಶುಕ್ರವಾರದ ಪಂದ್ಯದಲ್ಲಿ ಗೆದ್ದರೆ ಆರ್‌ಸಿಬಿ ಅಧಿಕೃತವಾಗಿ ಪ್ಲೇಆಫ್ಸ್‌ಗೆ ಲಗ್ಗೆ ಇಡಲಿದೆ.

IPL 2025: ಗಾಯಗೊಂಡು ಐಪಿಎಲ್‌ನಿಂದ ಹೊರಬಿದ್ದ ರಾಜಸ್ಥಾನ್‌ ತಂಡದ ನಿತೀಶ್‌ ರಾಣಾ

ಈ ಸೀಸನ್‌ನಲ್ಲಿ ಆರ್‌ಸಿಬಿ ಪರ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿರುವ ಜಾಶ ಹೇಝಲ್‌ವುಡ್‌ ಇದೀಗ ಸಂಪೂರ್ಣ ಫಿಟ್‌ ಆಗಿದ್ದಾರೆ. ಹಾಗಾಗಿ ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧದ ಪಂದ್ಯದ ಆರ್‌ಸಿಬಿಯ ಪ್ಲೇಯಿಂಗ್‌ XIನಲ್ಲಿ ಜಾಶ ಆಡಬಹುದು. ಹೇಝಲ್‌ವುಡ್‌ ಆಗಮನದಿಂದ ಆರ್‌ಸಿಬಿ ಬೌಲಿಂಗ್‌ ವಿಭಾಗ ಇನ್ನಷ್ಟು ಬಲಿಷ್ಠವಾಗಲಿದೆ. ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಎರಡು ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಆರ್‌ಸಿಬಿಗೆ ಇನ್ನುಳಿದ ಮೂರೂ ಪಂದ್ಯಗಳು ಮುಖ್ಯವಾಗಿವೆ.

ಜಾಶ್‌ ಹೇಝಲ್‌ವುಡ್‌ ಯಾವಾಗ ಗುಣಮುಖರಾಗಲಿದ್ದಾರೆಂದು ಆರ್‌ಸಿಬಿ ಟೀಮ್‌ ಮ್ಯಾನೇಜ್‌ಮೆಂಟ್‌ ತಿಳಿಸಿರಲಿಲ್ಲ. ಬ್ಯುಸಿನೆಸ್‌ ಸ್ಟಾಂಡರ್ಡ್‌ ವರದಿಯ ಪ್ರಕಾರ ಜಾಶ ಹೇಝಲ್‌ವುಡ್‌ ಲಖನೌ ವಿರುದ್ಧ ಕಣಕ್ಕೆ ಇಳಿಯಲಿದ್ದಾರೆ. ಇಲ್ಲಿಯ ತನಕ ಆಡಿದ 10 ಪಂದ್ಯಗಳಲ್ಲಿ ಆರ್‌ಸಿಬಿ ವೇಗಿ 18 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆ ಮೂಲಕ ಈ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

IPL 2025: ಪಂಜಾಬ್-ಮುಂಬೈ ಪಂದ್ಯದ ಸ್ಥಳ ಬದಲಾವಣೆ ಸಾಧ್ಯತೆ!

ಜಾಶ್‌ ಹೇಝಲ್‌ವುಡ್‌ ಅವರ ಸ್ಥಾನದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ದ ಆಡಿದ್ದ ಲುಂಗಿ ಎನ್‌ಗಿಡಿ ಅವರು ಮೂರು ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ, ಎಲ್‌ಎಸ್‌ಜಿ ವಿರುದ್ದದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವೇಗಿ, ಜಾಶ್‌ ಹೇಝಲ್‌ವುಡ್‌ಗೆ ತಮ್ಮ ಸ್ಥಾನವನ್ನು ಬಿಟ್ಟುಕೊಡಲಿದ್ದಾರೆ.

ದೇವದತ್‌ ಪಡಿಕ್ಕಲ್‌ ಔಟ್‌, ಮಯಾಂಕ್‌ ಅಗರ್ವಾಲ್‌ ಇನ್‌

ಜಾಶ್‌ ಹೇಝಲ್‌ವುಡ್‌ ಗಾಯದ ವಿಷಯ ಒಂದು ಕಡೆಯಾದರೆ, ದೇವದತ್ ಪಡಿಕ್ಕಲ್‌ ಗಾಯದಿಂದ ಟೂರ್ನಿಯ ಇನ್ನುಳಿದ ಭಾಗದಿಂದ ಹೊರ ನಡೆದಿದ್ದಾರೆ. ಇವರ ಸ್ಥಾನಕ್ಕೆ ಮತ್ತೊಬ್ಬ ಕನ್ನಡಿಗ ಮಯಾಂಕ್‌ ಅಗರ್ವಾಲ್‌ ಆರ್‌ಸಿಬಿಗೆ ಸೇರ್ಪಡೆಯಾಗಿದ್ದಾರೆ. ಈ ಸೀಸನ್‌ನಲ್ಲಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ದೇವದತ್‌ ಪಡಿಕ್ಕಲ್‌ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನ ತೋರಿದ್ದಾರೆ. ಆದರರೆ, ಸ್ನಾಯು ಸೆಳೆತದ ಗಾಯಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಅವರು ಟೂರ್ನಿಯನ್ನು ತೊರೆಯಬೇಕಾಗಿದೆ.