WPL 2025: ಮುಂಬೈ ವಿರುದ್ಧ ಗೆದ್ದು ಟೂರ್ನಿಯ ಅಭಿಯಾನ ಮುಗಿಸಿದ ಆರ್‌ಸಿಬಿ!
RCB vs MI Match Highlights: ತೀವ್ರ ರೋಚಕತೆಯಿಂದ ಕೂಡಿದ್ದ 2025ರ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1 ರನ್‌ಗಳಿಂದ ಗೆಲುವು ಪಡೆಯಿತು. ಈ ಗೆಲುವಿನ ಮೂಲಕ ಆರ್‌ಸಿಬಿ ಎರಡನೇ ಆವೃತ್ತಿಯ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಮುಗಿಸಿತು.

ಮುಂಬೈ ಇಂಡಿಯನ್ಸ್ ಎದುರು ಆರ್‌ಸಿಬಿಗೆ ಜಯ.

ಮುಂಬೈ: ಇಲ್ಲಿನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಕೊನೆಯ ಎಸೆತದವರೆಗೂ ತೀವ್ರ ರೋಚಕತೆಯಿಂದ ಕೂಡಿದ್ದ 2025ರ ಮಹಿಳಾ ಪ್ರೀಮಿಯರ್ ಲೀಗ್ (WPL 2025) ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) 11 ರನ್‌ಗಳ ರೋಚಕ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಆರ್‌ಸಿಬಿ ಎರಡನೇ ಆವೃತ್ತಿಯ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಮುಗಿಸಿತು. ಈ ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ಆರ್‌ಸಿಬಿ ಆಡಿದ 8 ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಪಡೆಯಿತು. ಆ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನದ ಮೂಲಕ ತನ್ನ ಪಯಣವನ್ನು ಅಂತ್ಯಗೊಳಿಸಿತು.
ಮಂಗಳವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೀಡಿದ್ದ 200 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಮುಂಬೈ ಇಂಡಿಯನ್ಸ್, ನ್ಯಾಟ್ ಸೀವರ್ ಬ್ರಂಟ್ (69 ರನ್) ಅವರ ಸ್ಪೋಟಕ ಬ್ಯಾಟಿಂಗ್ ಬಲದಿಂದ ಕಠಿಣ ಹೋರಾಟ ನಡೆಸಿದ್ದರ ಹೊರತಾಗಿಯೂ ತನ್ನ ಪಾಲಿನ 20 ಓವರ್‌ಗಳಿಗೆ 9 ವಿಕೆಟ್‌ಗಳನ್ನು ನಷ್ಟಕ್ಕೆ 188 ರನ್‌ಗಳಿಗೆ ಸೀಮಿತವಾಗಿತ್ತು. ಆ ಮೂಲಕ ಮುಂಬೈ ಇಂಡಿಯನ್ಸ್ ತಂಡ ಗೆಲುವಿನ ಸನಿಹಕ್ಕೆ ಬಂದು ಸೋಲು ಒಪ್ಪಿಕೊಂಡಿತು.
WPL 2025: ಯುಪಿ ವಾರಿಯರ್ಸ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಆರ್‌ಸಿಬಿ ವನಿತೆಯರು!
ನ್ಯಾಟ್ ಸೀವರ್ ಬ್ರಂಟ್ ಅರ್ಧಶತಕ
ಗುರಿ ಹಿಂಬಾಲಿಸಿದ ಮುಂಬೈ ಇಂಡಿಯನ್ಸ್‌ಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ತಂಡದ ಮೊತ್ತ 27 ರನ್ ಇರುವಾಗಲೇ ಹೇಯ್ಲಿ ಮ್ಯಾಥ್ಯೂಸ್ ( 19 ) ಹಾಗೂ 38 ರನ್ ಇರುವಾಗಲೇ ಅಮೇಲಿಯಾ ಕೆರ್ ಔಟ್ ಆದರು. ಆ ಮೂಲಕ ಮುಂಬೈ ಬಹುಬೇಗ ಎರಡು ವಿಕೆಟ್ ಕಳೆದುಕೊಂಡಿತು. ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದಿದ್ದ ನ್ಯಾಟ್ ಸೀವರ್ ಬ್ರಂಟ್ ಸ್ಪೋಟಕ ಬ್ಯಾಟ್ ಮಾಡಿದರು. ಅವರು ಆಡಿದ 35 ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ 9 ಬೌಂಡರಿಗಳೊಂದಿಗೆ 69 ರನ್‌ಗಳನ್ನು ಗಳಿಸಿ ಮುಂಬೈ ತಂಡವನ್ನು ಗೆಲುವಿನ ಹಾದಿಯಲ್ಲಿರಿಸಿದ್ದರು. ಆದರೆ, ಎಲಿಸ್ ಪೆರಿ ಅವರನ್ನು ಬುದ್ದಿವಂತಿಕೆಯಿಂದ ಔಟ್ ಮಾಡಿದರು.
ಹರ್ಮನ್‌ಪ್ರೀತ್ ಕೌರ್ (20) ಸಜನಾ (23) ಅವರು ತಂಡವನ್ನು ಗೆಲ್ಲಿಸಲು ಪ್ರಯತ್ನ ನಡೆಸಿದರಾದರೂ ಸಫಲರಾಗಲಿಲ್ಲ. ಆರ್‌ಸಿಬಿ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ ಸ್ನೇಹಾ ರಾಣಾ ಎರಡು ವಿಕೆಟ್ ಪಡೆದರೆ, ಕಿಮ್ ಗರ್ಥ್ ಮತ್ತು ಎಲಿಸ್ ಪೆರಿ ತಲಾ ಎರಡೆರಡು ವಿಕೆಟ್ ಪಡೆದಿದ್ದಾರೆ.
WPL 2025: ಹರ್ಮನ್‌ಪ್ರೀತ್ ಕೌರ್‌ಗೆ ದಂಡದ ಬಿಸಿ ಮುಟ್ಟಿಸಿದ ಬಿಸಿಸಿಐ
199 ರನ್ ಕಲೆ ಹಾಕಿದ ಆರ್‌ಸಿಬಿ
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಪಾಲಿನ 20 ಓವರ್‌ಗಳಿಗೆ 3 ವಿಕೆಟ್‌ಗಳ ನಷ್ಟಕ್ಕೆ 199 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಎದುರಾಳಿ ಮುಂಬೈ ಇಂಡಿಯನ್ಸ್ ತಂಡಕ್ಕೆ 200 ರನ್‌ಗಳ ಗುರಿಯನ್ನು ನೀಡುವಲ್ಲಿ ಯಶಸ್ವಿಯಾಯಿತು. ಆರ್‌ಸಿಬಿ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ ನಾಯಕಿ ಸ್ಮೃತಿ ಮಂಧಾನಾ 53 ರನ್‌ಗಳನ್ನು ಗಳಿಸಿದರೆ, ಎಲಿಸ್ ಪೆರಿ 49 ರನ್‌ಗಳನ್ನು ಗಳಿಸಿದರು.
ಭರ್ಜರಿ ಆರಂಭ ಪಡೆದ ಆರ್‌ಸಿಬಿ
ಆರ್‌ಸಿಬಿ ಪರ ಇನಿಂಗ್ಸ್ ಆರಂಭಿಸಿದ್ದ ಸಬ್ಬಿನೇನಿ ಮೇಘನಾ (26 ರನ್) ಹಾಗೂ ಸ್ಮೃತಿ ಮಂಧಾನಾ (53) ಅವರು ಮುರಿಯದ ಮೊದಲನೇ ವಿಕೆಟ್‌ಗೆ 41 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಆರ್‌ಸಿಬಿ ಭರ್ಜರಿ ಆರಂಭ ಪಡದಿತ್ತು. 26 ರನ್ ಗಳಿಸಿದ ಬಳಿಕ ಮೇಘನಾ ವಿಕೆಟ್ ಒಪ್ಪಿಸಿದರು. ನಂತರ ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್ ಮಾಡಿದ್ದ ನಾಯಕಿ ಸ್ಮೃತಿ ಮಂಧಾನಾ 37 ಎಸೆತಗಳಲ್ಲಿ 53 ರನ್‌ಗಳನ್ನು ಸಿಡಿಸಿದರು ಹಾಗೂ ಎಲಿಸ್ ಪೆರಿ ಜೊತೆ 59 ರನ್‌ಗಳ ಜೊತೆಯಾಟವನ್ನು ಆಡಿದರು.
ಕೊನೆಯವರೆಗೂ ಸ್ಪೋಟಕ ಬ್ಯಾಟ್ ಮಾಡಿದ ಎಲಿಸ್ ಪೆರಿ 38 ಎಸೆತಗಲ್ಲಿ ಅಜೇಯ 49 ರನ್‌ಗಳನ್ನು ಸಿಡಿಸಿದರು. ರಿಚಾ ಘೋಷ್ ಅವರು ಕೇವಲ 22 ಎಸೆತಗಳಲ್ಲಿ 36 ರನ್ ಗಳಿಸಿ ಔಟ್ ಆದರು. ಕೊನೆಯಲ್ಲಿ ಸ್ಪೋಟಕ ಬ್ಯಾಟ್ ಮಾಡಿದ್ದ ಜಾರ್ಜಿಯಾ ವೇರ್‌ಹ್ಯಾಮ್ ಕೇವಲ 10 ಎಸೆತಗಳಲ್ಲಿ ಅಜೇಯ 31 ರನ್‌ಗಳನ್ನು ಸಿಡಿಸಿದರು.