RCB vs PBKS: ಮಳೆ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಆರ್‌ಸಿಬಿ
ಮಳೆಯಿಂದ ಅಡಚಣೆಯಾದ ಈ ಪಂದ್ಯವನ್ನು 14 ಓವರ್‌ಗಳಿಗೆ ಸೀಮಿತಗೊಳಿಸಲಾಗಿದೆ. ಅದರಂತೆ ಬ್ಯಾಟಿಂಗ್ ಪವರ್‌ಪ್ಲೇ 4 ಓವರ್‌ಗಳಾಗಿರುತ್ತದೆ. ನಾಲ್ವರು ಬೌಲರ್‌ಗಳು ತಲಾ ಗರಿಷ್ಠ 3 ಓವರ್‌ಗಳನ್ನು ಬೌಲ್ ಮಾಡಬಹುದು. ಒಬ್ಬ ಬೌಲರ್ ಉಳಿದ 2 ಓವರ್‌ಗಳನ್ನು ಬೌಲ್ ಮಾಡಬಹುದು.


ಬೆಂಗಳೂರು: ಮಳೆ ಪೀಡಿತ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್(RCB vs RCB vs PBKS)ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದು, ಆತಿಥೇಯ ಆರ್‌ಸಿಬಿಗೆ ಬ್ಯಾಟಿಂಗ್ ಆಹ್ವಾನ ನೀಡಿದೆ. ಮಳೆಯಿಂದ ಅಡಚಣೆಯಾದ ಈ ಪಂದ್ಯದಲ್ಲಿ 6 ಓವರ್ ಕಡಿತಗೊಳಿಸಿ 4 ಓವರ್‌ಗಳಿಗೆ ಸೀಮಿತಗೊಳಿಸಲಾಗಿದೆ. ಅದರಂತೆ ಬ್ಯಾಟಿಂಗ್ ಪವರ್‌ಪ್ಲೇ 4 ಓವರ್‌ಗಳಾಗಿರುತ್ತದೆ. ನಾಲ್ವರು ಬೌಲರ್‌ಗಳು ತಲಾ ಗರಿಷ್ಠ 3 ಓವರ್‌ಗಳನ್ನು ಬೌಲ್ ಮಾಡಬಹುದು. ಒಬ್ಬ ಬೌಲರ್ ಉಳಿದ 2 ಓವರ್‌ಗಳನ್ನು ಬೌಲ್ ಮಾಡಬಹುದು.
ಲೀಗ್ ಪಂದ್ಯಗಳಿಗೆ ಮೀಸಲು ದಿನ ಇರದ ಕಾರಣ ಒಂದೊಮ್ಮೆ ಪ್ರತಿಕೂಲ ಹವಾಮಾನದಿಂದಾಗಿ ಆಟ ಸಾಧ್ಯವಾಗದಿದ್ದರೆ, ಎರಡೂ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಳ್ಳುತ್ತವೆ. ಪಂದ್ಯ ರದ್ದಾದರೆ ತಲಾ ಒಂದು ಅಂಕ ಪಡೆಯುವ ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಕ್ಕೇರಲಿದೆ. ಉಭಯ ತಂಡಗಳು ಸದ್ಯ 8 ಅಂಕ ಹೊಂದಿದೆ.
ಉಭಯ ಆಡುವ ಬಳಗ
ಆರ್‌ಸಿಬಿ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿ.ಕೀ.), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಶ್ ಶರ್ಮಾ, ಯಶ್ ದಯಾಳ್.
ಪಂಜಾಬ್: ಪ್ರಿಯಾಂಶ್ ಆರ್ಯ, ನೇಹಾಲ್ ವಧೇರಾ, ಶ್ರೇಯಸ್ ಅಯ್ಯರ್ (ನಾಯಕ), ಶಶಾಂಕ್ ಸಿಂಗ್, ಜೋಶ್ ಇಂಗ್ಲಿಸ್ (ವಿ.ಕೀ), ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಜಾನ್ಸೆನ್, ಹರ್ಪ್ರೀತ್ ಬ್ರಾರ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.