IPL 2025: ಪ್ಲೇಆಫ್ಸ್‌ಗೆ ಸ್ಟಾರ್ ಆಟಗಾರನನ್ನು ಕಳೆದುಕೊಳ್ಳಲಿರುವ ಆರ್‌ಸಿಬಿ, ಮುಂಬೈಗೂ ಹಿನ್ನಡೆ!
England White ball Squads: ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಹಾಗೂ ಟಿ20 ಸರಣಿಗಳಿಗೆ ಇಂಗ್ಲೆಂಡ್ ತಂಡಗಳನ್ನು ಮೇ 12 ರಂದು ಪ್ರಕಟಿಸಲಾಗಿದೆ. ಏಕದಿನ ತಂಡದಲ್ಲಿ ಸ್ಥಾನ ಪಡೆದಿರುವ ಜಾಕೋಬ್ ಬೆಥೆಲ್ ಹಾಗೂ ವಿಲ್ ಜ್ಯಾಕ್ಸ್ ಅವರು 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ಲೇಆಫ್ಸ್‌ಗೆ ತಮ್ಮ-ತಮ್ಮ ತಂಡಗಳಿಗೆ ಅಲಭ್ಯರಾಗಲಿದ್ದಾರೆ.

ಜಾಕೋಬ್ ಬೆಥೆಲ್ ಸೇವೆ ಕಳೆದುಕೊಳ್ಳಲಿರುವ ಆರ್‌ಸಿಬಿ.

ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ20ಐ ಸರಣಿಗೆ (ENG vs WI) ಇಂಗ್ಲೆಂಡ್ ತಂಡಗಳನ್ನು (England Squad) ಮೇ 13 ರಂದು ಪ್ರಕಟಿಸಲಾಗಿದೆ. 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ವಿಲ್ ಜ್ಯಾಕ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜಾಕೋಬ್ ಬೆಥೆಲ್ ಅವರು ಪ್ಲೇಆಫ್ಸ್‌ಗೆ ಅಲಭ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಶಸ್ತಿ ಗೆಲ್ಲುವ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಆರ್‌ಸಿಬಿ ಹಾಗೂ ಮುಂಬೈಗೆ ಹಿನ್ನಡೆಯಲಾಗಿದೆ. ಏಕೆಂದರೆ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಣ ಏಕದಿನ ಸರಣಿಯು ಮೇ 29 ರಂದು ಎಜ್‌ಬಾಸ್ಟನ್‌ನಲ್ಲಿ ಮೊದಲನೇ ಪಂದ್ಯದ ಮೂಲಕ ಆರಂಭವಾಗಲಿದೆ.
ಹ್ಯಾರಿ ಬ್ರೂಕ್ ನಾಯಕತ್ವದ ಇಂಗ್ಲೆಂಡ್ ಏಕದಿನ ತಂಡದಲ್ಲಿ ಜೋಸ್ ಬಟ್ಲರ್, ಜೋಫ್ರಾ ಆರ್ಚರ್ ಅವರು ಕೂಡ ಸ್ಥಾನ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ತಂಡ ಕೀ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಅವರ ಸೇವೆಯನ್ನು ಪ್ಲೇಆಫ್ಸ್‌ಗೆ ಕಳೆದುಕೊಳ್ಳಲಿದೆ. ಇನ್ನು ಆರ್‌ಸಿಬಿ ಆರಂಭಿಕ ಬ್ಯಾಟ್ಸ್‌ಮನ್ ಫಿಲ್ ಸಾಲ್ಟ್ ಅವರು ಕೂಡ ಇಂಗ್ಲೆಂಡ್ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ, ಟಿ20ಐ ಸರಣಿ ಜೂನ್ 6 ರಿಂದ ಆರಂಭವಾಗಲಿರುವ ಕಾರಣ, ಅವರು ಆರ್‌ಸಿಬಿ ಪೂರ್ಣ ಪ್ರಮಾಣದಲ್ಲಿ ಲಭ್ಯರಾಗಲಿದ್ದಾರೆ.
IPL 2025 New Schedule: ಪರಿಷ್ಕೃತ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ತಂಡಗಳ ಅಭ್ಯಾಸ ಆರಂಭ
ಭಾರತ ಹಾಗೂ ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿಯ ಕಾರಣ ನಿಗದಿತ ವೇಳಾಪಟ್ಟಿಯಂತೆ ಸಾಗುತ್ತಿದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಮೇ 8 ರಂದು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಒಂದು ವೇಳೆ ಇದು ಸಂಭವಿಸಿರಲಿಲ್ಲ ಎಂದಾದರೆ, ಟೂರ್ನಿಯ ನಿಗದಿತ ವೇಳಾಪಟ್ಟಿಯಂತೆ ಟೂರ್ನಿ ನಡೆಯುತ್ತಿದೆ. ಆ ಮೂಲಕ ಎಲ್ಲಾ ವಿದೇಶಿ ಆಟಗಾರರು ಸಂಪೂರ್ಣವಾಗಿ ಟೂರ್ನಿಯು ಮುಗಿಯುವವರೆಗೂ ಲಭ್ಯರಾಗಿರುತ್ತಿದ್ದರು.
ಇನ್ನು ಇಂಗ್ಲೆಂಡ್ ತಂಡದ ಬಗ್ಗೆ ಹೇಳುವುದಾದರೆ, ಟಿ20ಐ ತಂಡಕ್ಕೆ ಲಿಯಾಮ್ ಡಾಸನ್ ಮರಳಿದ್ದಾರೆ. 2022ರ ಬಳಿಕ ಇದೇ ಮೊದಲ ಬಾರಿ ರಾಷ್ಟ್ರೀಯ ತಂಡಕ್ಕೆ ಬಂದಿದ್ದಾರೆ. ಇನ್ನು ಲೂಕ್ ವುಡ್ ಕೂಡ ಟಿ20 ತಂಡಕ್ಕೆ ಮರಳಿದ್ದಾರೆ. ವಿಲ್ ಜ್ಯಾಕ್ಸ್ ಏಕದಿನ ಹಾಗೂ ಟಿ20 ಎರಡೂ ತಂಡಗಳಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಇವರು ಭಾರತದ ಪ್ರವಾಸ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಆಡಿರಲಿಲ್ಲ. ಸ್ಪಿನ್ನರ್ ಟಾಮ್ ಹಾರ್ಟ್ಲಿ ಕೂಡ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅವರು 2023ರಲ್ಲಿ ಐರ್ಲೆಂಡ್ ವಿರುದ್ದ ಕೊನೆಯ ಬಾರಿ ಒಡಿಐ ಕ್ರಿಕೆಟ್ ಆಡಿದ್ದರು.
🏏 Who are you backing to have a BIG summer? 🤔#ENGvWI | #EnglandCricket pic.twitter.com/34NuA4adju
— England Cricket (@englandcricket) May 13, 2025
ಇಂಗ್ಲೆಂಡ್ ಏಕದಿನ ತಂಡ: ಹ್ಯಾರಿ ಬ್ರೂಕ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಬ್ರೈಡನ್ ಕಾರ್ಸ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜ್ಯಾಕ್ಸ್, ಸಾಕಿಬ್ ಮಹಮೂದ್, ಜೇಮೀ ಓವರ್ಟನ್, ಮ್ಯಾಥ್ಯೂ ಪಾಟ್ಸ್, ಆದಿಲ್ ರಶೀದ್, ಜೋ ರೂಟ್, ಜೇಮೀ ಸ್ಮಿತ್
ಇಂಗ್ಲೆಂಡ್ ಟಿ20ಐ ತಂಡ: ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹ್ಮದ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಬ್ರೈಡನ್ ಕಾರ್ಸ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಸಾಕಿಬ್ ಮಹಮೂದ್, ಜೇಮೀ ಓವರ್ಟನ್, ಮ್ಯಾಥ್ಯೂ ಪಾಟ್ಸ್, ಆದಿಲ್ ರಶೀದ್, ಫಿಲ್ ಸಾಲ್ಟ್, ಲ್ಯೂಕ್ ವುಡ್