Lakshya Sen: ಲಕ್ಷ್ಯ ಸೇನ್‌ಗೆ ತಾತ್ಕಾಲಿಕ ರಿಲೀಫ್; ಹೈಕೋರ್ಟ್ ಆದೇಶಕ್ಕೆ ಸುಪ್ರೀಂನಲ್ಲಿ ತಡೆ
Lakshya Sen age fraud case: ಹೈಕೋರ್ಟ್ ಆದೇಶ ಪ್ರಶ್ನಿಸಿ ಸೇನ್ ಮತ್ತಿತರರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ.ಸುಧಾಂಶು ಧುಲಿಯಾ, ವಿನೋದ್ ಚಂದ್ರನ್ ಅವರಿದ್ದ ಪೀಠವು ತನಿಖೆಗೆ ತಡೆ ನೀಡಿದೆ. ಮುಂದಿನ ವಿಚಾರಣೆ ಏ.16ಕ್ಕೆ ನಡೆಯಲಿದೆ.


ಬೆಂಗಳೂರು: ವಯಸ್ಸು ತಿದ್ದಿ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವ ಬ್ಯಾಡ್ಮಿಂಟನ್ ಪಟು ಲಕ್ಷ್ಯ ಸೇನ್(Lakshya Sen) ಮತ್ತವರ ಕುಟುಂಬ ಸದಸ್ಯರು ಹಾಗೂ ತರಬೇತುದಾರ ವಿಮಲ್ ಕುಮಾರ್‌ಗೆ ಕೊಂಚ ರಿಲೀಪ್ ಸಿಕ್ಕಿದೆ. ಇವರ ವಿರುದ್ಧದ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿ ತನಿಖೆಗೆ ಆದೇಶಿಸಿತ್ತು. ಆದರೆ ಇದಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ತಡೆ ಸಿಕ್ಕಿದೆ.
ಜನನ ಪ್ರಮಾಣ ಸೃಷ್ಟಿಸಿ ಸರ್ಕಾರ ಹಾಗೂ ಪ್ರತಿಭಾವಂತ ಆಟಗಾರರನ್ನು ವಂಚಿಸಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ಗೆ ತಪ್ಪು ಆದೇಶಿಸಿದ್ದ ರಾಜ್ಯ ಹೈಕೋರ್ಟ್ ಮಾಹಿತಿ ನೀಡಿದ ಆರೋಪ ಲಕ್ಷ ಸೇನ್ ವಿರುದ್ಧವಿದೆ. ಹೀಗಾಗಿ ತಮ್ಮ ವಿರುದ್ಧದ ಎಫ್‌ಐಆರ್ ಹಾಗೂ ನಗರದ 8ನೇ ಎಸಿಎಂಎಂ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಲಕ್ಷ, ಸೇನ್, ಕುಟುಂಬಸ್ಥರು, ವಿಮಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ, ಪ್ರಕರಣ ಸಂಬಂಧ ದೂರುದಾರರು ಸಾಕಷ್ಟು ದಾಖಲೆಗಳನ್ನು ಸಲ್ಲಿಸಿದ್ದಾರೆ. ಈ ಎಲ್ಲ ಅಂಶಗಳು ಆರೋಪ ಸಂಬಂಧ ಮೇಲ್ನೋಟಕ್ಕೆ ಸಾಕ್ಷ್ಯಾಧಾರಗಳಾಗಿದ್ದು, ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸೇನ್ ಮತ್ತಿತರರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ.ಸುಧಾಂಶು ಧುಲಿಯಾ, ವಿನೋದ್ ಚಂದ್ರನ್ ಅವರಿದ್ದ ಪೀಠವು ತನಿಖೆಗೆ ತಡೆ ನೀಡಿದೆ. ಮುಂದಿನ ವಿಚಾರಣೆ ಏ.16ಕ್ಕೆ ನಡೆಯಲಿದೆ.
ಇದನ್ನೂ ಓದಿ ಬ್ಯಾಡ್ಮಿಂಟನ್: ಚಿನ್ನ ಗೆದ್ದ ಲಕ್ಷ್ಯ ಸೇನ್
ಪ್ರಕರಣದ ಹಿನ್ನೆಲೆ
ಧೀರೇಂದ್ರಕುಮಾರ್ ಹಾಗೂ ನಿರ್ಮಲ್ ಸೇನ್ ಅವರು ತಮ್ಮ ಇಬ್ಬರೂ ಮಕ್ಕಳಿಗೆ ಬ್ಯಾಡ್ಮಿಂಟನ್ ತರಬೇತಿ ಕೊಡಿಸಿದ್ದರು. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿ ಕೋಚ್ ಆಗಿರುವ ವಿಮಲ್ ಕುಮಾರ್ ಜತೆ ಸಂಚು ರೂಪಿಸಿ, ಮಕ್ಕಳ ವಯಸ್ಸು ತಿದ್ದುಪಡಿ ಮಾಡಿ ಜನನ ಪ್ರಮಾಣ ಪತ್ರ ಸೃಷ್ಟಿಸಿದ್ದರು. ಈ ಕುರಿತು ದೂರುದಾರ ಎಂ.ಜಿ. ನಾಗರಾಜ್ ಅವರು ವಂಚನೆ ಕೃತ್ಯದ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.
ನೈಜ ವಯಸ್ಸು ಮುಚ್ಚಿಟ್ಟಿದ್ದ ಲಕ್ಷ್ಯಸೇನ್, 2010ರಿಂದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಗೆದ್ದಿದ್ದಾರೆ. ವಂಚನೆ ಮೂಲಕವೇ ಸರ್ಕಾರದ ಹಲವು ಸೌಲಭ್ಯಗಳನ್ನು ಪಡೆದಿದ್ದಾರೆ. ಇದರಿಂದಾಗಿ ಅರ್ಹ ವಯಸ್ಸಿನ ಆಟಗಾರರಿಗೆ ಅನ್ಯಾಯವಾಗಿದೆ. ಆರೋಪಿಗಳ ಕೃತ್ಯದಿಂದಾಗಿ ಸರ್ಕಾರಕ್ಕೂ ವಂಚನೆಯಾಗಿದೆ ಎಂದು ಎಂ.ಜಿ. ನಾಗರಾಜ್ ದೂರಿನಲ್ಲಿ ಉಲ್ಲೇಖಿಸಿದ್ದರು.