ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BN Garudachar: ಬೆಂಗಳೂರಿನ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಬಿಎನ್‌ ಗರುಡಾಚಾರ್‌ ಇನ್ನಿಲ್ಲ

BN Garudachar: ನಗರದ ನಿವಾಸದಲ್ಲಿ ಬಿ.ಎನ್.ಗರುಡಾಚಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಸಂಜೆ 4 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇವರು ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರ ತಂದೆ.

ಬೆಂಗಳೂರಿನ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಬಿಎನ್‌ ಗರುಡಾಚಾರ್‌ ಇನ್ನಿಲ್ಲ

ದಿ. ಬಿಎನ್‌ ಗರುಡಾಚಾರ್

ಹರೀಶ್‌ ಕೇರ ಹರೀಶ್‌ ಕೇರ Mar 28, 2025 12:13 PM

ಬೆಂಗಳೂರು: ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ (uday grudachar) ತಂದೆ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್‌ (BN Garudachar) ಶುಕ್ರವಾರ ವಿಧಿವಶರಾಗಿದ್ದಾರೆ (Passed Away). ರಾಜ್ಯ ರಾಜಧಾನಿಯಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಅವರು ಟ್ರಾಫಿಕ್ ಡಿಸಿಪಿಯಾಗಿದ್ದರು. ಬಿ.ಎನ್.ಗರುಡಾಚಾರ್ ಅವರು ಬೆಂಗಳೂರು ಕಮಿಷನರ್ ಸೇರಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. 1963ರಲ್ಲಿ ಎನ್‌ಆರ್‌ ಜಂಕ್ಷನ್‌ನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆಯಾಗಿತ್ತು.

ನಗರದ ನಿವಾಸದಲ್ಲಿ ಬಿ.ಎನ್.ಗರುಡಾಚಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಸಂಜೆ 4 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಬರದ ಬೆಂಗಾಡು ಗ್ರಾಮದಲ್ಲಿ ಬಿ.ಎನ್. ಗರುಡಾಚಾರ್​​ ಅವರು 1929ರಲ್ಲಿ ಜನಿಸಿದರು. ಇವರದ್ದು, ಕೃಷಿ ಕುಟುಂಬ. ಕಷ್ಟದಲ್ಲೇ ಬೆಳೆದವರು ಬಿ.ಎನ್. ಗರುಡಾಚಾರ್. ತಂದೆ ಅಕಾಲಿಕ ಮರಣ ಹೊಂದಿದ ಬಳಿಕ ಬಂಧುಗಳ, ಹಿತೈಷಿಗಳ ನೆರವಿನಿಂದ ಬೆಳೆದು, ಹಳ್ಳಿಯಲ್ಲಿ ಕೂಲಿ, ಮಠದಲ್ಲಿ ಗರುಡಾಚಾರ್ ವಿದ್ಯಾಭ್ಯಾಸ ಮಾಡಿದ್ದರು.

ಹಾಸನ, ಗೊರೂರು ಮತ್ತು ಮೈಸೂರಿನಲ್ಲಿ ಅವರಿವರ ಮನೆಯಲ್ಲಿ ಆಶ್ರಯ ಪಡೆದು, ಎಂ.ಎ. ಸ್ನಾತಕೋತ್ತರ ಪದವಿ ಪಡೆದರು. 1953ರಲ್ಲಿ ಐಪಿಎಸ್ ಪಾಸ್ ಮಾಡಿ, ಮೊದಲಿಗರೆನಿಸಿಕೊಂಡರು. ಬಳಿಕ ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಕಗೊಂಡಿದ್ದರು. ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರ ಬೆಂಗಳೂರು ಜಿಲ್ಲೆಯ ಎಸ್.ಪಿ ಹಾಗೂ ಬೆಂಗಳೂರು ಮಹಾನಗರದ ಡಿ.ಸಿ.ಪಿ ಯಾಗಿ (8 ವರ್ಷಗಳು) ಮತ್ತು ಪೊಲೀಸ್‌ ಕಮಿಷನರ್ ಆಗಿ (4 ವರ್ಷ 2 ತಿಂಗಳು), ಪೊಲೀಸ್ ಡಿಜಿ/ಐಜಿಪಿ ಯಾಗಿ (3 ವರ್ಷ 8 ತಿಂಗಳು) ಸೇವೆ ಸಲ್ಲಿಸಿದರು. ಇವರ ಕಾರ್ಯದಕ್ಷತೆಯನ್ನು ಮೆಚ್ಚಿ ಕರ್ನಾಟಕ ಸರ್ಕಾರು ಕೆ.ಎ.ಟಿ ಯ ಸದಸ್ಯರಾಗಿ ಓರ್ವ ಐಪಿಎಸ್ ಅಧಿಕಾರಿಯನ್ನು ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ನೇಮಕ ಮಾಡಿತ್ತು. ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಇವರ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿವಿಧ ಪುರಸ್ಕಾರಗಳನ್ನು ನೀಡಿ ಗೌರವಿಸಿದೆ.

ಇದನ್ನೂ ಓದಿ: Hosabale Shobha Hegde: ಹೊಸಬಾಳೆ ಶೋಭಾ ಹೆಗಡೆ ಇನ್ನಿಲ್ಲ