ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಹಳ್ಳಿಗಳ ಹೆಸರುಗಳ ಸ್ಪಷ್ಟ ಉಚ್ಚಾರಣೆಗೆ ಕಂದಾಯ ಇಲಾಖೆ, ಗೂಗಲ್ ಸಹಯೋಗದಲ್ಲಿ ಹೊಸ ಯೋಜನೆಗೆ ಕ್ರಮ : ಡಾ.ಪುರುಷೋತ್ತಮ ಬಿಳಿಮಲೆ

ರಾಜ್ಯದ 72 ಸಾವಿರ ಹಳ್ಳಿಗಳ ಹೆಸರುಗಳನ್ನು ಈಗಾಗಲೇ ಧ್ವನಿಮುದ್ರಣ ಮಾಡಿ, ಹೇಗೆ ಊರುಗಳ ಹೆಸರುಗಳನ್ನು ಸ್ಪಷ್ಟವಾಗಿ ಉಚ್ಚರಿಸಬೇಕೆಂದು ಮಾಹಿತಿ ಸಿದ್ದಪಡಿಸಲಾಗಿದೆ. ತಂತ್ರಜ್ಞಾನ ಮುಂದುವರೆದಂತೆ ಇಂದು ಪ್ರತಿಯೊಬ್ಬರೂ ಗೂಗಲ್ ಮ್ಯಾಪ್ ಅನ್ನು ಅನೇಕ ಸಂದರ್ಭಗಳಲ್ಲಿ ಬಳಸಿ ಅದರ ಮೇಲೆ ಹೆಚ್ಚು ಅವಲಂಬಿತರೂ ಆಗಿದ್ದಾರೆ. ಆದರೆ, ಗೂಗಲ್ ಮ್ಯಾಪ್‌ನ ಧ್ವನಿಯಲ್ಲಿ ಹಳ್ಳಿ ಅಥವಾ ಊರುಗಳ ಹೆಸರು ತಪ್ಪು ತಪ್ಪಾಗಿ ಉಚ್ಚಾ ರಣೆಯಾಗಿ ಬಳಕೆದಾರರಿಗೆ ಗೊಂದಲ ಮತ್ತು ಸಮಸ್ಯೆಯಾಗುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ

ಕನ್ನಡ ಭಾಷೆ ಕಲಿಸಲು ತರಬೇತಿ ಕಾರ್ಯಕ್ರಮ ಆಯೋಜನೆಗೆ ಕ್ರಮ

ಹಳ್ಳಿಗಳ ಹೆಸರುಗಳ ಸ್ಪಷ್ಟ ಉಚ್ಚಾರಣೆಗೆ ಕಂದಾಯ ಇಲಾಖೆ, ಗೂಗಲ್ ಸಹಯೋಗದಲ್ಲಿ ಹೊಸ ಯೋಜನೆಗೆ ಕ್ರಮ ವಹಿಸಲಾಗಿದೆ ಎಂದು ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದರು.

Profile Ashok Nayak Mar 24, 2025 8:40 PM

ಚಿಕ್ಕಬಳ್ಳಾಪುರ : ಗೂಗಲ್‌ನಲ್ಲಿನ ಧ್ವನಿಯಲ್ಲಿ ರಾಜ್ಯದ ಸಾವಿರಕ್ಕೂ ಹೆಚ್ಚು ಹಳ್ಳಿಗಳ ಹೆಸರು ತಪ್ಪು ತಪ್ಪಾಗಿ ಉಚ್ಚಾರಣೆಯಾಗುತ್ತಿದ್ದು ಗೂಗಲ್ ಮ್ಯಾಪ್ ಬಳಸುವವರಿಗೆ ಸಮಸ್ಯೆಯಾಗುತ್ತಿದೆ. ಇದನ್ನು ಸರಿಪಡಿಸಲು ಕಂದಾಯ ಇಲಾಖೆ ಮತ್ತು ಗೂಗಲ್ ಸಂಸ್ಥೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಮನ್ವಯದೊಂದಿಗೆ ಹೊಸ ಯೋಜನೆ ಯೊಂದನ್ನು ರೂಪಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರಷೋತ್ತಮ ಬಿಳಿಮಲೆ ತಿಳಿಸಿದರು.

ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲೆಯ ಕನ್ನಡ ಅನು ಷ್ಠಾನ ಪ್ರಗತಿ” ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ 72 ಸಾವಿರ ಹಳ್ಳಿಗಳ ಹೆಸರುಗಳನ್ನು ಈಗಾಗಲೇ ಧ್ವನಿಮುದ್ರಣ ಮಾಡಿ, ಹೇಗೆ ಊರುಗಳ ಹೆಸರುಗಳನ್ನು ಸ್ಪಷ್ಟವಾಗಿ ಉಚ್ಚರಿಸಬೇಕೆಂದು ಮಾಹಿತಿ ಸಿದ್ದಪಡಿಸಲಾಗಿದೆ. ತಂತ್ರಜ್ಞಾನ ಮುಂದುವರೆದಂತೆ ಇಂದು ಪ್ರತಿಯೊಬ್ಬರೂ ಗೂಗಲ್ ಮ್ಯಾಪ್ ಅನ್ನು ಅನೇಕ ಸಂದರ್ಭಗಳಲ್ಲಿ ಬಳಸಿ ಅದರ ಮೇಲೆ ಹೆಚ್ಚು ಅವಲಂಬಿತರೂ ಆಗಿದ್ದಾರೆ. ಆದರೆ, ಗೂಗಲ್ ಮ್ಯಾಪ್‌ನ ಧ್ವನಿಯಲ್ಲಿ ಹಳ್ಳಿ ಅಥವಾ ಊರುಗಳ ಹೆಸರು ತಪ್ಪು ತಪ್ಪಾಗಿ ಉಚ್ಚಾ ರಣೆಯಾಗಿ ಬಳಕೆದಾರರಿಗೆ ಗೊಂದಲ ಮತ್ತು ಸಮಸ್ಯೆಯಾಗುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ. ಇದನ್ನು ಆಧ್ಯತೆಯ ಮೇಲೆ ಸರಿಪಡಿಸಲು ಪ್ರಾಧಿಕಾರ ಮುಂದಾಗಿದೆ ಎಂದರು.

ಶೀಘ್ರದಲ್ಲೇ ಕಂದಾಯ ಇಲಾಖೆ, ಗೂಗಲ್ ಮತ್ತು ಪ್ರಾಧಿಕಾರದ ಸಮನ್ವಯ, ಸಹಯೋಗ ದೊಂದಿಗೆ ಹೊಸ ಯೋಜನೆಯನ್ನು ರೂಪಿಸಿ, ಸಿದ್ದಪಡಿಸಿ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಲಾಗುವುದು. ಇದಕ್ಕೆ ಕಂದಾಯ ಇಲಾಖೆ ಈಗಾಗಲೇ ಸಿದ್ದಪಡಿಸಿರುವ ಹಳ್ಳಿ, ಊರು ಗಳ ಹೆಸರುಗಳ ಧ್ವನಿಮುದ್ರಣವನ್ನು ಪೂರಕವಾಗಿ ಬಳಸಿಕೊಳ್ಳಲಾಗುವುದು ಎಂದರು.

ರಾಜ್ಯದಲ್ಲಿನ ವಿವಿಧ ರಾಷ್ಟ್ರೀಯ ಬ್ಯಾಂಕುಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿ ಬಹುತೇಕ ಹಿಂದಿ ಹಾಗೂ ತೆಲುಗು ಭಾಷಿಕರೇ ಅಧಿಕವಾಗಿದ್ದು, ಇದರಿಂದ ಸ್ಥಳೀಯ ಕನ್ನಡ ಭಾಷಿಕ ರು ಬ್ಯಾಂಕುಗಳಲ್ಲಿ ವ್ಯವಹರಿಸಲು ಸಂವಹನಕ್ಕೆ ಅಡ್ಡಿಯಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬ್ಯಾಂಕುಗಳ ಸಮಿತಿ ಸಹಕಾರದೊಂದಿಗೆ ಕನ್ನಡೇತರ ಅಧಿಕಾರಿ ಮತ್ತು ಸಿಬ್ಬಂದಿಗೆ ಗ್ರಾಹಕರೊಂದಿಗೆ ಕನಿಷ್ಠ ವ್ಯವಹರಿಸಲು ಅಗತ್ಯವಿರುವ ಕನ್ನಡ ಭಾಷೆಯನ್ನು ಕಲಿಸುವ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು.

ಬ್ಯಾಂಕುಗಳಲ್ಲಿ ಕನ್ನಡಿಗ ಅಧಿಕಾರಿ ಸಿಬ್ಬಂದಿ ಪ್ರಾತಿನಿಧ್ಯ ಕಡಿಮೆಯಾಗುತ್ತಿದ್ದು, ಈ ಹಿಂದೆ ಅಸ್ತಿತ್ವದಲ್ಲಿದ್ದ ಪ್ರಾದೇಶಿಕ ಬ್ಯಾಂಕಿಂಗ್ ನೇಮಕಾತಿ ಮಂಡಳಿಯನ್ನು ತರಬೇತಿ ಸಹಿತ ಆರಂಭಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಈಗಾಗಲೇ ಹೈದರಬಾದ್‌ನಲ್ಲಿ ತೆಲುಗು ಭಾಷಿಕ ರಾಜ್ಯಗಳು ಬ್ಯಾಂಕಿಂಗ್ ಪ್ರಾದೇಶಿಕ ನೇಮಕಾತಿ ಮಂಡಳಿಯನ್ನು ಸ್ಥಾಪಿಸಿ ತರಬೇತಿ ನೀಡುತ್ತಿರುವುದೇ ಇಂದು ಬ್ಯಾಂಕುಗಳಲ್ಲಿ ತೆಲುಗು ಭಾಷಿಕ ಅಧಿಕಾರಿ, ಸಿಬ್ಬಂದಿ ಯ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಬ್ಯಾಂಕಿಂಗ್ ಉದ್ಯೋಗಗಳತ್ತ ಕನ್ನಡಿಗರನ್ನೂ ಪ್ರೇರೇಪಿಸಲು ಪ್ರತ್ಯೇಕ ಮಂಡಳಿಯನ್ನು ತೆರೆಯುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವಾರ್ಷಿಕ ಕೇವಲ ೨ ಕೋಟಿ ರೂಪಾಯಿ ಅನುದಾನವನ್ನು ಮಾತ್ರ ನೀಡುತ್ತಿದ್ದು, ಇದರಿಂದ ರಾಜ್ಯದಾದ್ಯಂತ ಕನ್ನಡ ಅಭಿವೃದ್ಧಿ ಚಟುವಟಿಕೆಗಳನ್ನು  ಕೈಗೊಳ್ಳಲು ತೀರಾ ಕಷ್ಟವಾಗುತ್ತಿದೆ. ಪ್ರಾಧಿಕಾರದ ಚಟುವಟಿಕೆಗಳಿಗೆ ಕನಿಷ್ಠ ೩೦ ಕೋಟಿ ಅನುದಾನದ ಅಗತ್ಯವಿದ್ದು, ಈ ವರ್ಷ ಕನಿಷ್ಠ ೫ ಕೋಟಿಯನ್ನಾದರೂ ಬಿಡುಗಡೆ ಮಾಡಲು ಮನವಿ ಸಲ್ಲಿಸಲಾಗುವುದು ಎಂದರು.

ಈಗಾಗಲೇ ಕಲಬುರುಗಿ,ಶಿವಮೊಗ್ಗ ಬೀದರ್. ಮಂಡ್ಯ ಸೇರಿದಂತೆ ರಾಜ್ಯದ ಹಲವು ಜಿಲ್ಲೆ ಗಳಲ್ಲಿ ಪ್ರವಾಸ ಕೈಗೊಂಡಿದ್ದು, ಆ ಜಿಲ್ಲೆಗಳಲ್ಲಿನ ಕನ್ನಡ ಅನುಷ್ಠಾನಕ್ಕೆ ಹೋಲಿಸಿದರೆ ಚಿಕ್ಕಬಳ್ಳಾಪುರ ಜಿಲ್ಲೆ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಜಿಲ್ಲಾಡಳಿತವನ್ನು ಶ್ಲಾಘಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ ಕುರಿತು ಇರುವ ತೊಡಕುಗಳ ಬಗ್ಗೆ ಜಿಲ್ಲೆ ಯ ಕನ್ನಡಪರ ಸಂಘಟನೆಗಳ ಮುಖಂಡರು, ಹೋರಾಟಗಾರರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ಚರ್ಚಿಸಿ ಅಭಿಪ್ರಾಯ ಮತ್ತು ಸಲಹೆಗಳನ್ನು ಸ್ವೀಕರಿಸಲಾಗಿದೆ.  ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳ ಲಾಗಿದ್ದು, ಪರಿಹರಿಸಲಾಗದ ಸಮಸ್ಯೆಗಳಿಗೆ ಹಂತಹಂತವಾಗಿ ಮುಂದಿನ ದಿನಗಳಲ್ಲಿ ಪರಿಹಾರ ಕಂಡುಕೊಳ್ಳಲು ಕ್ರಮ ವಹಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್, ಸದಸ್ಯರಾದ ರವಿಕುಮಾರ್ ನೀಹಾ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಜಿಟಿ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ಕೋಡಿ ರಂಗಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.