ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಬೆಂಗಳೂರಿನಲ್ಲಿ ಭೀಕರ ಅಪಘಾತ; ಎರಡು ಬಿಎಂಟಿಸಿ ಬಸ್​ ಮಧ್ಯೆ ಆಟೋ ಅಪ್ಪಚ್ಚಿ, ಇಬ್ಬರ ಸಾವು

ಮುಂದೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಇದರ ಹಿಂದೆ ಬರುತ್ತಿದ್ದ ಆಟೋ ಬಸ್‌ಗೆ ಡಿಕ್ಕಿ ಹೊಡೆದಿದೆ. ಅದೇ ವೇಳೆಗೆ ಹಿಂದೆ ಬರುತ್ತಿದ್ದ ಮತ್ತೊಂದು ಬಿಎಂಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದಿದೆ. ಇದರಿಂದ ಎರಡು ಬಸ್‌ಗಳ ಮಧ್ಯೆ ಆಟೋ ಸಿಲುಕಿ ಅಪ್ಪಚ್ಚಿಯಾಗಿ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಎರಡು ಬಿಎಂಟಿಸಿ ಬಸ್​ಗಳ ಮಧ್ಯೆ ಆಟೋ ಸಿಲುಕಿ ಅಪ್ಪಚ್ಚಿಯಾಗಿದ್ದು, ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಬನಶಂಕರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತನಗರದ ಸೀತಾ ಸರ್ಕಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು ಆಟೋ ಚಾಲಕ ವಿಜಯ್ ಕುಮಾರ್(50) ಹಾಗೂ ಪ್ರಯಾಣಿಕ ವಿಷ್ಣುಬಾಟಿಯ (70) ಎಂದು ಗುರುತಿಸಲಾಗಿದೆ.

ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಹೊಸಕೆರೆ ಹಳ್ಳಿ ಕ್ರಾಸ್ ಸೀತಾ ಸರ್ಕಲ್ ಸಮೀಪ ಮುಂದೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಇದರ ಹಿಂದೆ ಬರುತ್ತಿದ್ದ ಆಟೋ ಬಸ್‌ಗೆ ಡಿಕ್ಕಿ ಹೊಡೆದಿದೆ. ಅದೇ ವೇಳೆಗೆ ಹಿಂದೆ ಬರುತ್ತಿದ್ದ ಮತ್ತೊಂದು ಬಿಎಂಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದಿದೆ. ಇದರಿಂದ ಎರಡು ಬಸ್‌ಗಳ ಮಧ್ಯೆ ಆಟೋ ಸಿಲುಕಿ ಅಪ್ಪಚ್ಚಿಯಾಗಿ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿ ಆಟೋದಲ್ಲಿ ಸಿಲುಕಿಗೊಂಡು ಮೃತಪಟ್ಟ ಇಬ್ಬರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಬಿಎಂಟಿಸಿ ಬಸ್ ಜಪ್ತಿ ಮಾಡಿ ಚಾಲಕನನ್ನು ಸಹ ವಶಕ್ಕೆ ಪಡೆದು ಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದಿಂದಾಗಿ ಸೀತಾ ಸರ್ಕಲ್ ಬಳಿ ಕೆಲ ಕಾಲ ಫುಲ್ ಟ್ರಾಫಿಕ್ ಉಂಟಾಗಿತ್ತು. ಕೂಡಲೇ ಸಂಚಾರಿ ಪೊಲೀಸರು ಸ್ಥಳದಲ್ಲಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಹರೀಶ್‌ ಕೇರ

View all posts by this author