Road Accident: ರಾಮನಗರದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ
ಕಬ್ಬಾಳು ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಕಾರು ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನಲ್ಲಿದ್ದ ಮಧು, ದೀಪು ಮತ್ತು ಅಭಿ ಎಂಬವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಚಿರು ಎಂಬಾತನ ಸ್ಥಿತಿ ಗಂಭೀರವಾಗಿದೆ.

ಸಾಂದರ್ಭಿಕ ಚಿತ್ರ

ರಾಮನಗರ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ (Road Accident) ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ (car hits tree) ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ (Ramanagara news) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತರು ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಚಿರು ಎಂಬಾತನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಮಧು, ದೀಪು ಮತ್ತು ಅಭಿ ಎಂಬವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಕಬ್ಬಾಳು ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಕಾರು ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. KA 03 NA 4031 ಸಂಖ್ಯೆಯ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಕ್ಕುರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ತಿರುಪತಿಗೆ ತೆರಳುತ್ತಿದ್ದ ಕಾರು ಅಪಘಾತ, ಇಬ್ಬರ ಸಾವು
ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಕ್ಕೆ (Tirupati Temple) ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿ ಬೆಂಗಳೂರಿನ (Bengaluru news) ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದ ಸ್ವಲ್ಪ ಸಮಯದ ನಂತರ ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ತಿರುಪತಿಯ ರುಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಚಂದ್ರಗಿರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಕಾರಣ ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಬೆಂಗಳೂರು ಮತ್ತು ತಮಿಳುನಾಡಿನ ಹೊಸೂರು ಮೂಲದ ಸಂತ್ರಸ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಎರ್ಟಿಗಾದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.
ಮೃತರನ್ನು ಬೆಂಗಳೂರಿನ ನಿವಾಸಿಗಳಾದ ವಿಜಯಲಕ್ಷ್ಮಿ (50), ಸಹನಾ ಬಿ ಎಸ್ (34) ಎಂದು ಗುರುತಿಸಲಾಗಿದೆ. ರಜನಿ ಎಸ್ ಆರ್ (27), ಆರ್ ಲೇಖನ್ ಗೌಡ (11), ಹೊಸೂರಿನ ಚಾಲಕ ತ್ಯಾಗರಾಜನ್ (48), ತ್ಯಾಗರಾಜನ್ ಅವರ ಪುತ್ರ ಕ್ರಿಸ್ವಿನ್ (15) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ತಿರುಪತಿಯ ಎಸ್‌ವಿಆರ್ ರುಯಿಯಾ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಂದ್ರಗಿರಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಪ್ರಸಾದ್ ತಿಳಿಸಿದ್ದಾರೆ.
ಇದನ್ನೂ ಓದಿ: Drowned: ನೀರು ಕುಡಿಯಲು ಹೋಗಿದ್ದ ಮೂವರು ಬಾಲಕರು ಕೆರೆಗೆ ಬಿದ್ದು ಸಾವು