ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಚಿತ್ರದುರ್ಗ ಬಳಿ ಭೀಕರ ಅಪಘಾತ, ಆಂಧ್ರದ ಮೂವರು ಸಾವು

ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿದ್ದ ಕಾರಿಗೆ, ಹೊಳಲ್ಕೆರೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅವಘಡ (Road Accident) ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಂಧ್ರಪ್ರದೇಶದ ನಿವಾಸಿಗಳು ಇದ್ದ ಇನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಚಿತ್ರದುರ್ಗ ಬಳಿ ಭೀಕರ ಅಪಘಾತ, ಆಂಧ್ರದ ಮೂವರು ಸಾವು

ಹೊಳಲ್ಕೆರೆ ರಸ್ತೆ ಅಪಘಾತ

ಹರೀಶ್‌ ಕೇರ ಹರೀಶ್‌ ಕೇರ May 12, 2025 8:52 AM

ಚಿತ್ರದುರ್ಗ: ಚಿತ್ರದುರ್ಗ (Chitradurga news) ಜಿಲ್ಲೆಯ ಹೊಳಲ್ಕೆರೆ ಬಳಿ ಭೀಕರ ಅಪಘಾತ (Road accident) ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು ಸೇರಿದಂತೆ ಓರ್ವ ಮಹಿಳೆ ಸಾವನ್ನಪ್ಪಿರುವ (death) ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ. ಮೃತರನ್ನು ಸುನೀತಾ (34), ಶ್ಯಾಂ ಬಾಬು (17), ಶಿವನಾಗಲಿ (55) ಎಂದು ಗುರುತಿಸಲಾಗಿದೆ. ಮೃತರನ್ನು ಆಂಧ್ರಪ್ರದೇಶದ ಗುಂಟೂರಿನ ವೆಂಕಟಪುರಂ ಮೂಲದವರು ಎಂದು ಗುರುತಿಸಲಾಗಿದೆ.

ಇವರು ಆಂಧ್ರದಿಂದ ಶಿವಮೊಗ್ಗಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿದ್ದ ಕಾರಿಗೆ, ಹೊಳಲ್ಕೆರೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಟ್ರ್ಯಾಕ್ಟರ್​ಗೆ ಓಮ್ನಿ ಡಿಕ್ಕಿ, ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಟ್ರ್ಯಾಕ್ಟರ್​ಗೆ ಓಮ್ನಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಆಂಜನೇಯ ದೇಗುಲ ಬಳಿ ನಡೆದಿದೆ. ಒಂದೂವರೆ ವರ್ಷದ ಮಗು ಲಕ್ಷ್ಮೀ ಮತ್ತು ದಾಕ್ಷಾಯಿಣಿ (50) ಮೃತ ದುರ್ದೈವಿಗಳು. ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​ಗೆ ಓಮ್ನಿ ಡಿಕ್ಕಿಯಾಗಿದೆ. ಗಾಯಾಳುಗಳಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Road Accident: ಭೀಕರ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ 6 ಜನ ಸಾವು