Road Accident: ಬೆಂಗಳೂರು, ಚಿತ್ರದುರ್ಗದಲ್ಲಿ ರಸ್ತೆ ಅಪಘಾತ: ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರ ಸಾವು
Road Accident: ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಬಸ್ಸಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿದೆ. ಚಿತ್ರದುರ್ಗದಲ್ಲಿ ಬೈಕ್‌ಗೆ ಡಿಕ್ಕಿಯಾದ ಬಳಿಕ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಎರಡೂ ಘಟನೆಗಳಲ್ಲಿ ಬೈಕ್ ಸವಾರರು ಮೃತಪಟ್ಟಿದ್ದಾರೆ.

ಚಿತ್ರದುರ್ಗದಲ್ಲಿ ಬಸ್ ಅಪಘಾತ

ಬೆಂಗಳೂರು/ಚಿತ್ರದುರ್ಗ: ರಾಜಧಾನಿ ಬೆಂಗಳೂರು (Bengaluru) ಹಾಗೂ ಚಿತ್ರದುರ್ಗದಲ್ಲಿ (Chitradurga) ಎರಡು ಪ್ರತ್ಯೇಕ ಅಪಘಾತಗಳು (Road Accident) ಇಂದು ಸಂಭವಿಸಿ ಇಬ್ಬರು (death) ಮೃತಪಟ್ಟಿದ್ದಾರೆ. ಎರಡೂ ಘಟನೆಗಳಲ್ಲಿ ಬೈಕ್ ಹಾಗೂ ಬಸ್ಸು ಡಿಕ್ಕಿಯಾಗಿದ್ದು, ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, KSRTC ಬಸ್‌ಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಬೆಳಿಗ್ಗೆ 4 ಗಂಟೆಗೆ ನಡೆದಿದೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ನಸುಕಿನ ಜಾವ 4 ಗಂಟೆಗೆ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರ ಮೊಹಮ್ಮದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಎಸ್ಆರ್ಟಿಸಿ ಬಸ್ಸಿಗೆ ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿ ಮಹಮ್ಮದ್ ಅಜರ್ ಸಾವನ್ನಪ್ಪಿದ್ದಾರೆ. ಮೊಹಮ್ಮದ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಅಪಘಾತದ ಕುರಿತು ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ : ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಬಳಿ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಬಚ್ಚಬೋರನಹಟ್ಟಿ ಗ್ರಾಮದ ರಮೇಶ್ (35) ಎಂದು ಗುರುತಿಸಲಾಗಿದೆ. ಬೈಕ್‌ಗೆ ಡಿಕ್ಕಿಯಾದ ಬಳಿಕ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್ ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಅಪಘಾತ ಕುರಿತಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Road Accident: ಕಾರು ಮರಕ್ಕೆ ಡಿಕ್ಕಿ, ಗರ್ಭಿಣಿ ರುಂಡ ಕತ್ತರಿಸಿ ಸಾವು