Road Accident: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ, ಒಬ್ಬ ಸಾವು, ಮೂವರಿಗೆ ಗಾಯ
ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಶಾಲೆಗೆ ಬಿಡಲು ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದ ವೇಳೆ ತೆಲಂಗಾಣ ಮೂಲದ ಲಾರಿ ಡಿಕ್ಕಿಯಾದ ಪರಿಣಾಮ ವೆಂಕು ಚವ್ಹಾಣ್ (42) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿನಿಯರಾದ ಐಶ್ವರ್ಯ, ಪ್ರೀತಿ, ಶ್ವೇತಾ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಸಾಂದರ್ಭಿಕ ಚಿತ್ರ

ವಿಜಯಪುರ : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿಗಳಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಮೂವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಕಗ್ಗೋಡೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಗಾಯಾಳು ವಿದ್ಯಾರ್ಥಿನಿಯರನ್ನು ಬಿಎಲ್ ಡಿಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಶಾಲೆಗೆ ಬಿಡಲು ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದ ವೇಳೆ ತೆಲಂಗಾಣ ಮೂಲದ ಲಾರಿ ಡಿಕ್ಕಿಯಾದ ಪರಿಣಾಮ ವೆಂಕು ಚವ್ಹಾಣ್ (42) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿನಿಯರಾದ ಐಶ್ವರ್ಯ, ಪ್ರೀತಿ, ಶ್ವೇತಾ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ಮತ್ತೊಂದು ಈಜುಕೊಳ ದುರಂತ, ಒಬ್ಬ ಸಾವು
ಚಿಕ್ಕಮಗಳೂರು : ಮಂಗಳೂರಿನ ರೆಸಾರ್ಟ್‌ನಲ್ಲಿ ಕೆಲ ತಿಂಗಳ ಹಿಂದೆ ನಡೆದ ಈಜುಕೊಳ ದುರಂತವನ್ನು ನೆನಪಿಸುವ ಮತ್ತೊಂದು ಘೋರ ಘಟನೆ ನಡೆದಿದೆ. ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬಿದ್ದು ಪ್ರವಾಸಿಗರೊಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬಿದ್ದು ಮಡಿಕೇರಿ ಕುಶಾಲನಗರ ಮೂಲದ ಪ್ರವಾಸಿ ನಿಶಾಂತ್ ಮೃತಪಟ್ಟಿದ್ದಾರೆ.
ನಿಶಾಂತ್ ಪ್ರವಾಸಕ್ಕೆಂದು ಚಿಕ್ಕಮಂಗಳೂರಿಗೆ ಸ್ನೇಹಿತನ ಜೊತೆ ತೆರಳಿದ್ದರು. ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಹಾರುವ ವೇಳೆ ತಲೆ ಟ್ವಿಸ್ಟ್ ಆಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನೀರಿಗೆ ಹಾರಿದ ಸುಶಾಂತ್ ಅಲುಗಾಡದೇ ಇದ್ದಾಗ ಕೂಡಲೇ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿರುವುದು ಗೊತ್ತಾಗಿದೆ. ಈ ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Murder Case: ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ, ಕೊಲೆ ಹಿಂದೆ ಲವ್ ಸ್ಟೋರಿ