Road Accident: ಬೆಂಗಳೂರಿನಲ್ಲಿ ಬಿಎಂಟಿಸಿಗೆ ಮತ್ತೊಂದು ಬಲಿ, ರಸ್ತೆ ದಾಟುತ್ತಿದ್ದ ಮಹಿಳೆ ಬಸ್ ಡಿಕ್ಕಿಯಾಗಿ ಸಾವು
ಮೃತಪಟ್ಟ ಮಹಿಳೆಯನ್ನು ಲಿಂಗಮ್ಮ ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನಲ್ಲಿ (Bengaluru News) ಬಿಎಂಟಿಸಿ ಬಸ್‌ಗೆ (BMTC bus) ಮತ್ತೊಂದು ಬಲಿ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿ (Road accident news) ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಬ್ಬಾಳ ಬಸ್ ನಿಲ್ದಾಣದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯ ಮೇಲೆಯೇ ಬಿಎಂಟಿಸಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದರು.
ಮೃತಪಟ್ಟ ಮಹಿಳೆಯನ್ನು ಲಿಂಗಮ್ಮ ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಪ್ರೀತಿಸಿ ಮದುವೆಯಾದ ಮಗಳು- ಅಳಿಯನಿಗೆ ಇರಿದ ಮಾವ
ಉತ್ತರಕನ್ನಡ: ಪ್ರೀತಿಸಿ ಮದುವೆಯಾದ ಮಗಳ ನಡೆಗೆ ಕೋಪಗೊಂಡಿರುವ ತಂದೆಯೊಬ್ಬ ಮಗಳು ಹಾಗು ಅಳಿಯನಿಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ರಂಗಾಪುರದಲ್ಲಿ ನಡೆದಿದೆ. ಶಂಕರ ಕಮ್ಮಾರ ಹಲ್ಲೆ ನಡೆಸಿದ ಆರೋಪಿ. ಹಲ್ಲೆಗೊಳಗಾದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬದನಗೋಡಿನ ಯುವತಿ ಪೋಷಕರಿಗೆ ತಿಳಿಸದೇ ರಂಗಾಪುರದ ಯುವಕನೊಂದಿಗೆ ಕಳೆದ ಮೂರು ತಿಂಗಳ ಹಿಂದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಳು. ಅನ್ಯ ಜಾತಿಯ ಯುವಕ ಎಂಬ ಕಾರಣಕ್ಕೆ ಶಂಕರ ಕಮ್ಮಾರ ವಿರೋಧ ವ್ಯಕ್ತಪಡಿಸಿದ್ದ. ನಂತರ ಯುವಕನ ಮನೆಗೆ ಮಗಳನ್ನು ನೋಡುವ ನೆಪದಲ್ಲಿ ಬಂದು, ನಿಮ್ಮ ಮದುವೆಗೆ ಸಾಕ್ಷಿ ಹಾಕಿದವರ ಹೆಸರು ಹೇಳುವಂತೆ ಮಗಳ ಮೇಲೆ ಹಲ್ಲೆ ಮಾಡಿದ್ದಾನೆ.
ಈ ವೇಳೆ ಮಗಳು ಹೆಸರು ಹೇಳದೇ ಇದ್ದುದಕ್ಕೆ ಹತ್ಯೆಗೆ ಯತ್ನಿಸಿದ್ದಾನೆ. ತಡೆಯಲು ಬಂದ ಅಳಿಯನಿಗೂ ಎದೆ ಹಾಗೂ ಕೈಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ಅಲ್ಲಿಂದ ತಪ್ಪಿಸಿಕೊಂಡು ತನ್ನೂರಿಗೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹಲ್ಲೆಗೆ ಒಳಗಾದ ಇಬ್ಬರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಮೂವರೂ ಬದುಕುಳಿದಿದ್ದು, ಇರಿತಕ್ಕೊಳಗಾದ ಇಬ್ಬರೂ ಶಿರಸಿಯ ಪಂಡಿತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ರಿ ನೀಡಿದ ದೂರಿನ ಆಧಾರದಲ್ಲಿ ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Koppal News: ಪಿಡಿಒ ಮೇಲೆ ದರ್ಪ ಮೆರೆದ ಗ್ರಾಪಂ ಸದಸ್ಯೆ; ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ