ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಖಾಸಗಿ ಬಸ್‌ಗಳು ಡಿಕ್ಕಿಯಾಗಿ ಒಬ್ಬ ಸಾವು, ಹಲವರಿಗೆ ಗಾಯ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗುಂಟಪಲ್ಲಿ ಕ್ರಾಸ್ ಎಂಬಲ್ಲಿ ಆಂಧ್ರಪ್ರದೇಶದ ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಂಧ್ರಪ್ರದೇಶದ ಮದನಪಲ್ಲಿಯ ಗಂಗಾಧರ್ ಎಂಬವರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ.

ಖಾಸಗಿ ಬಸ್‌ಗಳು ಡಿಕ್ಕಿಯಾಗಿ ಒಬ್ಬ ಸಾವು, ಹಲವರಿಗೆ ಗಾಯ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 12, 2025 7:56 AM

ಕೋಲಾರ : ರಾಜ್ಯದಲ್ಲಿ ಕೋಲಾರ (Kolar news) ಜಿಲ್ಲೆಯಲ್ಲಿ ರಸ್ತೆ ಅಪಘಾತ (Road Accident) ಸಂಭವಿಸಿದೆ. ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ (Bus Accident) ಓರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗುಂಟಪಲ್ಲಿ ಕ್ರಾಸ್ ಎಂಬಲ್ಲಿ ಆಂಧ್ರಪ್ರದೇಶದ ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಂಧ್ರಪ್ರದೇಶದ ಮದನಪಲ್ಲಿಯ ಗಂಗಾಧರ್ ಎಂಬವರು ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶದ ಸುವರ್ಣಮುಖಿ ಹಾಗೂ ಎ.ಆರ್. ಟ್ರಾವೆಲ್ಸ್ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮದನಪಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಮಂಜುಳ ಎಂಬವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಜೆಪಿ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದ ಮಂಜುಳಾ ಅವರು ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಮಧ್ಯಾಹ್ನ 2.30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಮಂಜುಳಾ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕೃಷಿಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವು

ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕೃಷಿ ಹೊಂಡದಲ್ಲಿ ಬಿದ್ದು ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ಕಂಠಿ ತಾಂಡಾದ ಬಳಿ ಕಟ್ಟಿಗೆ ತರಲು ಹೋಗಿದ್ದ ವೇಳೆ ಕೃಷಿಹೊಂಡಕ್ಕೆ ಜಾರಿ ಬಿದ್ದು, ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮುಳುಗುತ್ತಿರುವ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವಿಗೀಡಾಗಿದ್ದಾಳೆ. ನೀಲಾಭಾಯಿ (32), ರಾಜೇಶ್ವರಿ (11), ಡುಮ್ಮಿ (6) ಮೃತಪಟ್ಟ ದುರ್ದೈವಿಗಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಿಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Man Killed 17 Year Old: ಗರ್ಲ್ ಫ್ರೆಂಡ್ ನಡತೆ ಅನುಮಾನಿಸಿ ಕತ್ತು ಸೀಳಿ ಹತ್ಯೆಗೈದ ಪಾಗಲ್ ಪ್ರೇಮಿ

ಬೈಕ್‌ಗೆ ಬಸ್‌ ಡಿಕ್ಕಿ, ಸವಾರ ಸಾವು

ಬಾಗೇಪಲ್ಲಿ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬಾಗೇಪಲ್ಲಿ ತಾಲ್ಲೂಕು ಮಿಟ್ಟೇಮರಿ ಬಳಿ ಮಂಗಳ ವಾರ ನಡೆದಿದೆ. ಬಾಗೇಪಲ್ಲಿ ಕಡೆಯಿಂದ ಚಿಂತಾಮಣಿಗೆ ತೇರುಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಮಿಟ್ಟೇಮರಿ ಸಮೀಪ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಬಳಿ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ. ಬಸ್ಸಿಗೆ ಅಂಟಿಕೊಂಡಿದೆ.

ಈ ಘಟನೆಯಲ್ಲಿ ಮಿಟ್ಟೇಮರಿಯ ವೆಂಕಟಾಚಲಪತಿಯವರ ಮಗ ರಂಜಿತ ಕುಮಾರ್ (28) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪಟ್ಟಣದ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಪ್ರಶಾಂತ್ ವರ್ಣಿ ಮತ್ತಿತರರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹವನ್ನು ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇದರಿಂದಾಗಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.