ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರೋಹಿತ್‌, ಕೊಹ್ಲಿ ಟೆಸ್ಟ್‌ ನಿವೃತ್ತಿ ಬಗ್ಗೆ ಕನ್ನಡಿಗ ಅನಿಲ್‌ ಕುಂಬ್ಳೆ ಹೇಳಿದ್ದೇನು?

ಸಂದರ್ಶನವೊಂದರಲ್ಲಿ ಮಾತನಾಡಿದ ಕುಂಬ್ಳೆ, 'ರೋಹಿತ್‌ ಮತ್ತು ವಿರಾಟ್‌ ಕೊಹ್ಲಿಗೆ ಇನ್ನೂ ಕೆಲವು ವರ್ಷಗಳ ಕಾಲ ತಂಡದಲ್ಲಿ ಆಡುವ ಸಾಮರ್ಥ್ಯ ಇತ್ತು. ಇವರ ಈ ದಿಢೀರ್‌ ನಿರ್ಧಾರ ನನಗೆ ಅಚ್ಚರಿ ತಂದಿದೆ. ನಿವೃತ್ತಿಯಾದ ಉಭಯ ಆಟಗಾರರಿಗೆ ಬಿಸಿಸಿಐ ಒಂದೇ ವೇದಿಕೆಯಲ್ಲಿ ಸೂಕ್ತ ರೀತಿಯಲ್ಲಿ ಬೀಳ್ಕೊಡುಗೆ ನೀಡಿ ಗೌರವಿಸಬೇಕು' ಎಂದು ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

ರೋಹಿತ್‌, ಕೊಹ್ಲಿ ಟೆಸ್ಟ್‌ ನಿವೃತ್ತಿ ಬಗ್ಗೆ ಅನಿಲ್‌ ಕುಂಬ್ಳೆ ಹೇಳಿದ್ದೇನು?

Profile Abhilash BC May 14, 2025 11:24 AM

ಬೆಂಗಳೂರು: ರೋಹಿತ್ ಶರ್ಮಾ(Rohit Sharma) ಮತ್ತು ವಿರಾಟ್ ಕೊಹ್ಲಿ(Virat Kohli) ಟೆಸ್ಟ್ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತ ತಂಡದ ಮಾಜಿ ನಾಯಕ ಹಾಗೂ ಆಟಗಾರ ಅನಿಲ್‌ ಕುಂಬ್ಳೆ(Anil Kumble), ಉಭಯ ಆಟಗಾರರ ಈ ನಿರ್ಧಾರ ನಿಜಕ್ಕೂ ಅಚ್ಚರಿ ತಂದಿದೆ ಎಂದರು. ಇದೇ ವೇಳೆ ಇಂಗ್ಲೆಂಡ್‌ ಪ್ರವಾಸದ ಟೆಸ್ಟ್‌ ಸರಣಿಗೆ ತಂಡದ ನಾಯಕತ್ವದ ಆಯ್ಕೆ ಮಾಡುವ ಸವಾಲು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಮುಂದಿದೆ ಎಂದರು.

ಸಂದರ್ಶನವೊಂದರಲ್ಲಿ ಮಾತನಾಡಿದ ಕುಂಬ್ಳೆ, 'ರೋಹಿತ್‌ ಮತ್ತು ವಿರಾಟ್‌ ಕೊಹ್ಲಿಗೆ ಇನ್ನೂ ಕೆಲವು ವರ್ಷಗಳ ಕಾಲ ತಂಡದಲ್ಲಿ ಆಡುವ ಸಾಮರ್ಥ್ಯ ಇತ್ತು. ಇವರ ಈ ದಿಢೀರ್‌ ನಿರ್ಧಾರ ನನಗೆ ಅಚ್ಚರಿ ತಂದಿದೆ. ಇದೀಗ ನಿವೃತ್ತಿಯಾದ ಉಭಯ ಆಟಗಾರರಿಗೆ ಬಿಸಿಸಿಐ ಒಂದೇ ವೇದಿಕೆಯಲ್ಲಿ ಸೂಕ್ತ ರೀತಿಯಲ್ಲಿ ಬೀಳ್ಕೊಡುಗೆ ನೀಡಿ ಗೌರವಿಸಬೇಕು' ಎಂದು ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

ಕೊಹ್ಲಿಗಾಗಿ ಆರ್‌ಸಿಬಿ ಅಭಿಮಾನಿಗಳ 'ವೈಟ್ ಜೆರ್ಸಿ' ಅಭಿಯಾನ

17ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಆಡಲಿರುವ ವಿರಾಟ್‌ ಕೊಹ್ಲಿಯನ್ನು ಅಭಿನಂದಿಸಲು ಆರ್‌ಸಿಬಿ ಅಭಿಮಾನಿಗಳು 'ವೈಟ್ ಜೆರ್ಸಿ' ಅಭಿಯಾನ ಆರಂಭಿಸಿದ್ದಾರೆ. ಆ ದಿನ ಕ್ರೀಡಾಂಗಣದಲ್ಲಿ ಸೇರುವ ಪ್ರೇಕ್ಷಕರು ಬಿಳಿ ಬಣ್ಣದ ಪೋಷಾಕು ಧರಿಸಿರಬೇಕು. ಅದರ ಮೇಲೆ ‘18’ ಎಂದು ಬರೆದಿರಬೇಕು ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಟೆಸ್ಟ್‌ ಕ್ರಿಕೆಟ್‌ಗೆ ಕೊಡುಗೆ ನೀಡಿದ ಕೊಹ್ಲಿಯನ್ನು ಗೌರವಿಸಲಿದ್ದಾರೆ.

ಇದನ್ನೂ ಓದಿ IPL 2025: ಐಪಿಎಲ್ ಪ್ಲೇ-ಆಫ್‌ ಪಂದ್ಯಗಳಿಗೆ ದಕ್ಷಿಣ ಆಫ್ರಿಕಾ ಆಟಗಾರರು ಅಲಭ್ಯ

2011ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಕೊಹ್ಲಿ, ಭಾರತ ಪರ 123 ಪಂದ್ಯಗಳಲ್ಲಿ 46.85ರ ಸರಾಸರಿಯಲ್ಲಿ 9230 ರನ್‌ ಕಲೆಹಾಕಿದ್ದಾರೆ. ಇದರಲ್ಲಿ 30 ಶತಕ, 31 ಅರ್ಧಶತಕಗಳೂ ಒಳಗೊಂಡಿವೆ. ಕಳೆದ ವರ್ಷಾಂತ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ಶತಕ ಬಾರಿಸಿದ್ದ ಕೊಹ್ಲಿ, ಅದೇ ಸರಣಿಯಲ್ಲಿ ತಮ್ಮ ಕೊನೆ ಪಂದ್ಯವಾಡಿದ್ದರು.